ಜ.20ರಿಂದ ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ
ಮಂಗಳೂರು, ಜ.14: ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಜ.20ರಿಂದ 22ರವರೆಗೆ ಶಿವಮೊಗ್ಗ ಜಿಲ್ಲೆಯ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ. ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಕ್ರೀಡಾಪಟುಗಳು ಇಲಾಖಾ ಮುಖ್ಯಸ್ಥರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಜ.17,18ರಂದು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ ಇವರಿಂದ ಕ್ರೀಡಾಕೂಟದಲ್ಲಿ ಭಾಗವಹಿಸುವ ಬಗ್ಗೆ ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕು. ಜ.19ರಂದು ಸಂಜೆ 5ರೊಳಗಾಗಿ ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ಹೆಸರು ನೋಂದಾಯಿಸಿಕೊಂಡು ಊಟದ ಕೂಪನ್, ಟೀ-ಶರ್ಟ್ ಮತ್ತು ಕ್ಯಾಪ್‌ಗಳನ್ನು ಪಡೆದುಕೊಂಡು ಜ.20ರಂದು ಬೆಳಗ್ಗೆ 10 ಂಟೆಗೆ ನಡೆಯುವ ಪಥಸಂಚಲನದಲ್ಲಿ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಥವಾ ಉಪನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು (0824-2451264) ಇವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.





