ಎಪಿಎಂಸಿಯಲ್ಲಿ ಬಿಜೆಪಿಗೆ ಭರ್ಜರಿ ಜಯ: ಮಟ್ಟಾರ್
ಉಡುಪಿ, ಜ.14: ಉಡುಪಿ ಜಿಲ್ಲೆಯ ಮೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅತ್ಯಧಿಕ ಸಂಖ್ಯೆಯಲ್ಲಿ ಜಯಗಳಿಸಿದ್ದು, ಎಲ್ಲಾ ಮೂರರಲ್ಲೂ ಬಹುಮತ ಗಳಿಸಿದೆ ಎಂದು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.
ಉಡುಪಿ ತಾಲೂಕು ಎಪಿಎಂಸಿಯ ಒಟ್ಟು 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 9ರಲ್ಲಿ ಜಯಗಳಿಸಿದ್ದರೆ ಉಳಿದ ನಾಲ್ಕು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದೆ. ಅದೇ ರೀತಿ ಕಾರ್ಕಳ ಎಪಿಎಂಸಿಯಲ್ಲೂ ಬಿಜೆಪಿ 9 ಸ್ಥಾನಗಳನ್ನು ಜಯಿಸಿದ್ದರೆ, ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ಕುಂದಾಪುರ ಎಪಿಎಂಸಿಯಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡುಬಂದು ಬಿಜೆಪಿ 7 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತವನ್ನು ಉಳಿಸಿಕೊಂಡಿದ್ದರೆ, ಕಾಂಗ್ರೆಸ್ ಉಳಿದ ಆರು ಸ್ಥಾನಗಳ್ನು ಜಯಿಸಿದೆ ಎಂದವರು ಹೇಳಿದ್ದಾರೆ.
ಉಡುಪಿ ತಾಲೂಕು ಎಪಿಎಂಸಿಯ ಒಟ್ಟು 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 9ರಲ್ಲಿ ಜಯಗಳಿಸಿದ್ದರೆ ಉಳಿದ ನಾಲ್ಕು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದೆ. ಅದೇ ರೀತಿ ಕಾರ್ಕಳ ಎಪಿಎಂಸಿಯಲ್ಲೂ ಬಿಜೆಪಿ 9 ಸ್ಥಾನಗಳನ್ನು ಜಯಿಸಿದ್ದರೆ, ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ಕುಂದಾಪುರ ಎಪಿಎಂಸಿಯಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡುಬಂದು ಬಿಜೆಪಿ 7 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತವನ್ನು ಉಳಿಸಿಕೊಂಡಿದ್ದರೆ, ಕಾಂಗ್ರೆಸ್ ಉಳಿದ ಆರು ಸ್ಥಾನಗಳನ್ನು ಜಯಿಸಿದೆ ಎಂದವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರೈತ ಮತ್ತು ವರ್ತಕ ಕ್ಷೇತ್ರದ ಮತದಾರರಿಂದಾಗಿ ತಮ್ಮ ಪಕ್ಷ ಬಹುಮತದ ಮೂಲಕ ಅಧಿಕಾರವನ್ನು ಪಡೆಯುವಂತಾಗಿದೆ ಎಂದವರು ಹೇಳಿದ್ದಾರೆ. ಪಕ್ಷವನ್ನು ಬೆಂಬಲಿಸಿದ ಎಲ್ಲಾ ಮತದಾರರಿಗೆ ಮತ್ತು ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಯಾಗಲಿದ್ದು, ಜಿಲ್ಲೆಯ ರೈತರು, ವರ್ತಕರು ಮತ್ತು ಎಲ್ಲಾ ಮತದಾರರು ಭಾರತೀಯ ಜನತಾ ಪಾರ್ಟಿಯ ಪರವಾಗಿದ್ದಾರೆ ಎನ್ನುವ ಸಂದೇಶವನ್ನು ಮತದಾರರು ನೀಡಿದ್ದಾರೆಂದು ಮಟ್ಟಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗೆದ್ದವರಿಗೆ ಅಭಿನಂದನೆ:
ಎಪಿಎಂಸಿಗೆ ನಡೆದ ಚುನಾವಣೆಯಲ್ಲಿ ಗೆದ್ದ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಪಕ್ಷದ ಕಛೇರಿಯಲ್ಲಿ ಪಕ್ಷದ ಶಾಲು ಹಾಕಿ ಅಭಿನಂದಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಅಭಿನಂದಿಸಿ ಮಾತನಾಡಿದರು.
ಬಿಜೆಪಿ ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಸಲೀಂ ಅಂಬಾಗಿಲು, ಕೋಶಾಧಿಕಾರಿ ಬಿ ರವಿ ಅಮೀನ್ ಮುಂತಾದವರು ಉಪಸ್ಥಿತರಿದ್ದರು.







