ಕಾರು-ಬೈಕ್ ಢಿಕ್ಕಿ: ಓರ್ವ ಮೃತ್ಯು
ಕಾಸರಗೋಡು, ಜ.14: ಕಾರು-ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಕುಂಬಳೆ ಬದಿಯಡ್ಕ ರಸ್ತೆಯ ಸೀತಾಂಗೋಳಿಯಲ್ಲಿ ಸಂಭವಿಸಿದೆ.
ಮೃತಪಟ್ಟವರನ್ನು ನೀರ್ಚಾಲು ಕನ್ಯಪ್ಪಾಡಿ ತಲ್ಪಣಾಜೆಯ ಜಯಶಂಕರ(31)ಎಂದು ಗುರುತಿಸಲಾಗಿದೆ. ಸಹಸವಾರ ಮುಳ್ಳೇರಿಯ ಕೋಳಿಕ್ಕಾಲ್‌ನ ರವಿ(34)ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾರು ಚಲಾಯಿಸುತ್ತಿದ್ದ ಬದಿಯಡ್ಕದ ವೈದ್ಯ ಡಾ. ಪ್ರದೀಪ್ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಬೈಕ್ ಸವಾರರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಜಯಶಂಕರ ಶನಿವಾರ ಮೃತಪಟ್ಟರೆನ್ನಲಾಗಿದೆ.
ಇಬ್ಬರೂ ಇಲೆಕ್ಟ್ರಾನಿಕ್ಸ್ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Next Story





