ದನಕ್ಕೆ ಬೈಕ್ ಢಿಕ್ಕಿ: ಇಬ್ಬರಿಗೆ ಗಾಯ
ಕುಂದಾಪುರ, ಜ.14: ಕೋಣಿ ಗ್ರಾಮದ ಮೇಲ್ ಕಟ್ಗೆರೆ ಎಂಬಲ್ಲಿ ಜ.13ರಂದು ರಾತ್ರಿ ವೇಳೆ ರಸ್ತೆಗೆ ಅಡ್ಡ ಬಂದ ದನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ತೀವ್ರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಗಾಯಗೊಂಡಿರುವ ಬೈಕ್ ಸವಾರ ಸತೀಶ್ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ ಹಿಂಬದಿ ಸವಾರ ಶ್ರೀನಿವಾಸ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





