ಮಾಜಿ ಕ್ರಿಕೆಟಿಗ ಸಿಧು ಕಾಂಗ್ರೆಸ್ ಸೇರ್ಪಡೆ

ಹೊಸದಿಲ್ಲಿ, ಜ.15: ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿಯ ಮಾಜಿ ರಾಜ್ಯಸಭಾ ಸದಸ್ಯ ನವಜೋತ್ ಸಿಂಗ್ ಸಿಧು ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಇಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಸಿಧು ಪತ್ನಿ ನವಜೋತ್ ಕೌರ್ ಸಿಧು ಅವರು ಕಳೆದ ವರ್ಷ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಸಿಧು ಸ್ಪರ್ಧಿಸುವ ಸಾಧ್ಯತೆ ಇದೆ
Next Story





