Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಶ್ಫಿಕುರ್ರಹೀಂ ಹೆಲ್ಮೆಟ್‌ಗೆ...

ಮುಶ್ಫಿಕುರ್ರಹೀಂ ಹೆಲ್ಮೆಟ್‌ಗೆ ಅಪ್ಪಳಿಸಿದ ಬೌನ್ಸರ್

ಅಪಾಯದಿಂದ ಪಾರು

ವಾರ್ತಾಭಾರತಿವಾರ್ತಾಭಾರತಿ16 Jan 2017 5:34 PM IST
share
ಮುಶ್ಫಿಕುರ್ರಹೀಂ ಹೆಲ್ಮೆಟ್‌ಗೆ ಅಪ್ಪಳಿಸಿದ ಬೌನ್ಸರ್

ವೆಲ್ಲಿಂಗ್ಟನ್, ಜ.16: ನ್ಯೂಝಿಲೆಂಡ್ ವಿರುದ್ಧ ಇಲ್ಲಿ ಸೋಮವಾರ ಕೊನೆಗೊಂಡ ಪ್ರಥಮ ಟೆಸ್ಟ್‌ನ ಐದನೆ ದಿನದಾಟದಲ್ಲಿ ಬಾಂಗ್ಲಾದೇಶದ ನಾಯಕ ಮುಶ್ಫಿಕುರ್ರಹೀಂಗೆ ಬ್ಯಾಟಿಂಗ್ ಮಾಡುತ್ತಿದ್ದಾಗ ರಭಸದಿಂದ ಬಂದ ಚೆಂಡೊಂದು ಹೆಲ್ಮೆಟ್‌ಗೆ ಅಪ್ಪಳಿಸಿದ ಪರಿಣಾಮ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಬಾಂಗ್ಲಾ ನಾಯಕ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

 ಬಾಂಗ್ಲಾದೇಶದ ಎರಡನೆ ಇನಿಂಗ್ಸ್‌ನ 43ನೆ ಓವರ್‌ನಲ್ಲಿ ಈ ಘಟನೆ ನಡೆದಿದೆ. ಕಿವೀಸ್‌ನ ವೇಗದ ಬೌಲರ್ ಟಿಮ್ ಸೌಥಿ ಎಸೆದಿದ್ದ ಬೌನ್ಸರ್‌ವೊಂದು ರಹೀಂ ಎಡ ಕಿವಿಯ ಸ್ವಲ್ಪ ಕೆಳಗೆ ಅಪ್ಪಳಿಸಿದೆ. ಬೌನ್ಸರ್‌ನ್ನು ತಪ್ಪಿಸಲು ಯತ್ನಿಸಿದ ಮುಶ್ಫೀಕರ್ರಹೀಂಗೆ ಚೆಂಡು ತಾಗಿದೆ.

ಮುಶ್ಫಿಕರ್ರಹೀಂ ಕುತ್ತಿಗೆಗೆ ನಡೆಸಲಾದ ಪ್ರಾಥಮಿಕ ಎಕ್ಸ್-ರೇ ಹಾಗೂ ಸ್ಕಾನಿಂಗ್‌ನಲ್ಲಿ ತಕ್ಷಣದ ಅಪಾಯದಿಂದ ಪಾರಾಗಿದ್ದಾರೆ.

ಮುಶ್ಫೀಕರ್ರಹೀಂ ಮತ್ತೆ ಫೀಲ್ಡಿಂಗ್ ನಡೆಸಲು ಮೈದಾನಕ್ಕೆ ಇಳಿಯಲಿಲ್ಲ. ಪಂದ್ಯ ಬಳಿಕ ನಡೆದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಹಾಜರಿದ್ದ ಅವರು, ‘‘ನನ್ನ ಕುತ್ತಿಗೆಯಲ್ಲಿ ಸ್ವಲ್ಪ ನೋವಿದೆ. ಈಗ ಚೇತರಿಸಿಕೊಳ್ಳುತ್ತಿದ್ದೇನೆ’’ ಎಂದು ಹೇಳಿದ್ದಾರೆ.

ಚೆಂಡು ಹೆಲ್ಮೆಟ್‌ಗೆ ಬಂದು ಅಪ್ಪಳಿಸಿದ ತಕ್ಷಣ ಪಿಚ್‌ನಲ್ಲಿ ಕುಳಿತುಕೊಂಡ ರಹೀಂ ಸ್ವಲ್ಪ ಹೊತ್ತು ಸುಧಾರಿಸಿಕೊಂಡರು. ಉಭಯ ತಂಡಗಳ ವೈದ್ಯಕೀಯ ಸಿಬ್ಬಂದಿ ಅವರ ನೆರವಿಗೆ ಧಾವಿಸಿ ಬಂದು ಪ್ರಥಮ ಚಿಕಿತ್ಸೆ ನೀಡಿದರು. ಮೈದಾನದ ಸಮೀಪವೇ ಇದ್ದ ಆ್ಯಂಬುಲೆನ್ಸ್‌ನ್ನು ಕರೆಸಿ ಮೈದಾನದಿಂದ ಹೊರಗೆ ಕೊಂಡೊಯ್ಯಲಾಯಿತು. ಸ್ಟೇಡಿಯಂನಿಂದ ಸುಮಾರು 300 ಮೀ. ದೂರದಲ್ಲಿರುವ ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಯಿತು.

ರಹೀಮ್ ಪ್ರಥಮ ಚಿಕಿತ್ಸೆ ಪಡೆಯುವಾಗ ಅವರೊಂದಿಗಿದ್ದ ಆರಂಭಿಕ ಆಟಗಾರ ತಮೀಮ್ ಇಕ್ಬಾಲ್ ,‘‘ ರಹೀಮ್ ಚೆನ್ನಾಗಿದ್ದಾರೆ. ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಅವರಿಗೆ ಜಾಗ್ರತೆವಹಿಸಲು ಸೂಚಿಸಲಾಗಿದೆ’’ೆ ಎಂದು ಹೇಳಿದರು.

ರಹೀಮ್‌ಗೆ ಮೊದಲ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಕೈಗೆ ಗಾಯವಾಗಿತ್ತು. ಈ ಕಾರಣದಿಂದ ಅವರು 3 ಹಾಗೂ 4ನೆ ದಿನದಾಟದಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. ಸೋಮವಾರ 53 ಎಸೆತಗಳನ್ನು ಎದುರಿಸಿ1 ಬೌಂಡರಿ ಇರುವ 13 ರನ್ ಗಳಿಸಿದ್ದ ಅವರು ನ್ಯೂಝಿಲೆಂಡ್ ಬೌಲರ್‌ಗಳ ಬೌನ್ಸರ್ ಎದುರಿಸಲು ಕಷ್ಟಪಡುವಂತೆ ಕಂಡು ಬಂದರು. ರಹೀಂ ಮೊದಲ ಇನಿಂಗ್ಸ್‌ನಲ್ಲಿ 159 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X