Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೈಗಾರಿಕೆ ವಿಸ್ತರಣಾ ಭೂ ಸ್ವಾಧೀನ ಕ್ರಮ:...

ಕೈಗಾರಿಕೆ ವಿಸ್ತರಣಾ ಭೂ ಸ್ವಾಧೀನ ಕ್ರಮ: ಸಮಿತಿ ಖಂಡನೆ

ವಾರ್ತಾಭಾರತಿವಾರ್ತಾಭಾರತಿ16 Jan 2017 6:03 PM IST
share

ಮಂಗಳೂರು, ಜ.16: ರಾಜ್ಯ ಸರಕಾರವು ಎಮ್‌ಆರ್‌ಪಿಎಲ್ ಕಂಪೆನಿಯ 4ನೆ ಹಂತದ ವಿಸ್ತರಣೆಗಾಗಿ ಪೆರ್ಮುದೆ, ಕುತ್ತೆತ್ತೂರು, ತೆಂಕ ಎಕ್ಕಾರು ಗ್ರಾಮಗಳ ಸುಮಾರು 1,011 ಎಕರೆಯಷ್ಟು ಫಲವತ್ತಾದ ಭೂಮಿಯನ್ನು ಗ್ರಾಮಸ್ಥರ ವಿರೋಧದ ನಡುವೆಯೂ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದನ್ನು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಖಂಡಿಸುತ್ತದೆ ಎಂದು ಸಮಿತಿಯ ಅಧ್ಯಕ್ಷ ಮಧುಕರ್ ಅಮೀನ್ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015ರ ನವೆಂಬರ್‌ನ ಅಧಿಸೂಚನೆಗಿಂತ ಮೊದಲೇ ಈ ಗ್ರಾಮಗಳಲ್ಲಿ ಭೂ ಸ್ವಾಧೀನತೆಯ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ತಿಳಿದು ಗ್ರಾಮಸ್ಥರು ಸರಕಾರಕ್ಕೆ ವೈಯಕ್ತಿಕವಾಗಿ ಲಿಖಿತ ಆಕ್ಷೇಪಗಳನ್ನು ಸಲ್ಲಿಸಿತ್ತು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು.

 ಎಂಆರ್‌ಪಿಎಲ್ ಕಂಪೆನಿಯು ಸರಕಾರ ಮತ್ತು ಕೆಐಎಡಿಬಿಯನ್ನು ಬಳಸಿಕೊಂಡು ಬಡ ಕೃಷಿಕರನ್ನು ಬಲಾತ್ಕಾರವಾಗಿ ಒಕ್ಕಲೆಬ್ಬಿಸಿ, ಅವರ ಭೂಮಿಯನ್ನು ಕಬಳಿಸಲು ಹೊರಟಿದೆ. ಸ್ವಂತ ನೀರಾವರಿ ವ್ಯವಸ್ಥೆ ಹೊಂದಿರುವ ಫಲವತ್ತಾದ ಕೃಷಿ ಭೂಮಿಯನ್ನು ಭಾರೀ ಪರಿಸರ ಮಾಲಿನ್ಯಗೊಳಿಸುವ ಉದ್ಯಮಕ್ಕೆ ಬಲಿ ಕೊಡಬೇಕೇ? ಎಂದು ಪ್ರಶ್ನಿಸಿದ ಮಧುಕರ ಅಮೀನ್, ಭೂಸ್ವಾಧೀನತೆಯನ್ನು ವಿರೋಧಿಸುವ ಹೆಚ್ಚಿನ ಭೂಮಾಲಕರು, ಕಾರ್ಯಕರ್ತರ ಮೇಲೆ ಕಂಪೆನಿ ನ್ಯಾಯಾಲಯಗಳಲ್ಲಿ ಕೇವಿಯಟ್ ಹಾಕಿರುವುದು ಸರಿಯಲ್ಲ ಎಂದರು.

ಸರಕಾರವು 2016ರಲ್ಲಿ ಹೊರಡಿಸಿರುವ ಪ್ರಾಥಮಿಕ ಅಧಿಸೂಚನೆ ಪ್ರಸ್ತುತ ಚಾಲ್ತಿಯಲ್ಲಿರಬೇಕಿದ್ದ ಎಲ್‌ಎಆರ್‌ಆರ್ ಕಾಯ್ದೆ 2013 ಹಾಗೂ 2015ರ ಕಾನೂನಿಗಿಂತ ಭಿನ್ನವಾಗಿದೆ. ಇದು 1966ರ ಕೆಐಎಡಿಬಿ ಕಾಯ್ದೆಯಂತಿದೆ. ಭೂಮಾಲಕರನ್ನು ವಂಚಿಸುವಲ್ಲಿ ಕೆಐಎಡಿಬಿಯು ಎಂಆರ್‌ಪಿಎಲ್ ಕಂಪೆನಿಯೊಂದಿಗೆ ಶಾಮೀಲಾಗಿದೆ ಎಂದು ಅವರು ಆರೋಪಿಸಿದರು.

 ಎಂಆರ್‌ಪಿಎಲ್ ಕಂಪೆನಿಯ ಉದ್ಯೋಗ ಸೃಷ್ಟಿಯು ಸುಳ್ಳಿನ ಕಂತೆ ಎಂಬುದು ಈಗ ಬಯಲಾಗಿದೆ. ಎಂಆರ್‌ಪಿಎಲ್/ಎಂಎಸ್‌ಇಝೆಡ್ ಕಂಪೆನಿ ವಿಸ್ತರಣೆಯು ಸುತ್ತಲಿನ ಜನಜೀವನದ ಮೇಲೆ ವ್ಯತಿರಿಕ್ತವಾದ ಪರಿಣಾಮವನ್ನು ಬೀರುತ್ತಿದೆ. ಸರಕಾರ ಮತ್ತು ಜನಪ್ರತಿನಿಧಿಗಳು ಭೂ ಸ್ವಾಧೀನತಾ ಅಧಿಸೂಚನೆಯನ್ನು ಹಿಂದೆಗೆದುಕೊಳ್ಳಬೇಕು. ಇಲ್ಲದಿದ್ದರೆ ತೀವ್ರ ಹೋರಾಟವನ್ನು ಮಾಡಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೃಷಿ ಭೂಮಿ ಸಂರಕ್ಷಣಾ ಸಮಿತಿಯ ಉಪಾಧ್ಯಕ್ಷ ವಿಲಿಯಂ ಡಿಸೋಜ, ಹೇಮಲತಾ ಭಟ್, ಕಾರ್ಯದರ್ಶಿ ಲೋರೆನ್ಸ್ ಡಿಕುನ್ಹ, ಸದಸ್ಯ ಜಾನ್ ಪಿಂಟೊ, ಕೋಶಾಧಿಕಾರಿ ವೇದವ್ಯಾಸ, ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X