Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈವಾನ್ ಬಗ್ಗೆ ಟ್ರಂಪ್ ಕ್ಯಾತೆ...

ತೈವಾನ್ ಬಗ್ಗೆ ಟ್ರಂಪ್ ಕ್ಯಾತೆ ತೆಗೆದಲ್ಲಿ ಚೀನಾ ಸುಮ್ಮನೆ ಕೂರದು :ಚೀನಿ ದೈನಿಕಗಳ ಮುನ್ನೆಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ16 Jan 2017 9:22 PM IST
share
ತೈವಾನ್ ಬಗ್ಗೆ ಟ್ರಂಪ್ ಕ್ಯಾತೆ ತೆಗೆದಲ್ಲಿ ಚೀನಾ ಸುಮ್ಮನೆ ಕೂರದು :ಚೀನಿ ದೈನಿಕಗಳ ಮುನ್ನೆಚ್ಚರಿಕೆ

ಶಾಂಘಾ,ಜ.16: ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ಅಧ್ಯಕ್ಷರಾಗಿ ಜನವರಿ 20ರಂದು ಪ್ರಮಾಣವಚನ ಸ್ವೀಕರಿಸಿದ ಬಳಿಕ ತೈವಾನ್‌ನ ಸ್ವಯಂಆಡಳಿತದ ಕುರಿತ ವಿವಾದದಲ್ಲಿ ಚೀನವನ್ನು ಉದ್ರೇಕಿಸುವುದನ್ನು ಮುಂದುವರಿಸಿದಲ್ಲಿ ಬೀಜಿಂಗ್ ಸುಮ್ಮನೆ ಕೈಕಟ್ಟಿಕೂರದು ಎಂದು ಎರಡು ಪ್ರಮುಖ ಚೀನಿ ದಿನಪತ್ರಿಕೆಗಳು ಎಚ್ಚರಿಕೆ ನೀಡಿವೆ.

ಡೊನಾಲ್ಡ್ ಟ್ರಂಪ್ ಅವರು ಶುಕ್ರವಾರ ವಾಲ್‌ಸ್ಟ್ರೀಟ್ ಜರ್ನಲ್ ಪತ್ರಿಕೆಗೆ ನೀಡಿದ ಸಂದರ್ಶನವೊಂದರಲ್ಲಿ, ‘ಏಕ ಚೀನಾ’ ನೀತಿಯು ಚರ್ಚಾಸ್ಪದ ವಿಷಯವಾಗಿದೆ ಎಂದು ಹೇಳಿದ್ದರು. ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿರುವ ಚೀನಿ ವಿದೇಶಾಂಗ ಸಚಿವಾಲಯವು, ‘ಏಕ ಚೀನಾ’ ನೀತಿಯು ಚೀನಾ-ಅಮೆರಿಕ ಬಾಂಧವ್ಯಕ್ಕೆ ತಳಹದಿಯಾಗಿದ್ದು, ಅದರಲ್ಲಿ ಚರ್ಚೆಗೆ ಆಸ್ಪದವೇ ಇಲ್ಲವೆಂದು ಹೇಳಿದೆ.

ಟ್ರಂಪ್ ಅವರು ಕಳೆದ ತಿಂಗಳು ತೈವಾನ್ ಅಧ್ಯಕ್ಷ ತ್ಸಾಯಿ ಇಂಗ್-ವೆನ್ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ಅಲ್ಲಿನ ಆಡಳಿತಕ್ಕೆ ಮನ್ನಣೆ ನೀಡಿರುವುದು ಚೀನಾವನ್ನು ಕೆರಳಿಸಿತ್ತು. ತೈವಾನ್, ತನ್ನ ಅವಿಭಾಜ್ಯ ಅಂಗವೆಂದು ಚೀನಾ ಪ್ರತಿಪಾದಿಸುತ್ತಿದೆ.

‘‘ ಒಂದು ವೇಳೆ ಟ್ರಂಪ್, ಅಧಿಕಾರ ಸ್ವೀಕರಿಸಿದ ಬಳಿಕ ಇದೇ ತಂತ್ರವನ್ನು ಅನುಸರಿಸಿದಲ್ಲಿ, ಪರಸ್ಪರ ಉಗ್ರ ಹಾಗೂ ಹಾನಿಕಾರಕವಾದ ವರ್ತನೆಗಳು ನಡೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಆಗ ಬೀಜಿಂಗ್‌ಗೆ ತನ್ನ ‘ಕೈಗವಸು’ಗಳನ್ನು ತೆಗೆಯದೆ ಬೇರೆ ಆಯ್ಕೆಯೇ ಇಲ್ಲವೆಂದು ಇಂಗ್ಲೀಷ್ ದಿನಪತ್ರಿಕೆ ಚೀನಾ ಡೈಲಿ ಹೇಳಿದೆ.

ಚೀನಾದ ಸರಕಾರಿ ಸ್ವಾಮ್ಯದ ಇನ್ನೊಂದು ಪ್ರಭಾವಿ ಟಾಬ್ಲಾಯ್ಡಾ ಗ್ಲೋಬಲ್ ಟೈಮ್ಸ್ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ. ಏಕ ಚೀನಾ ನೀತಿಯನ್ನು ಹಾಳುಗೆಡಹುವ ಟ್ರಂಪ್‌ರ ಪ್ರಯತ್ನದ ವಿರುದ್ಧ ಬಲವಾದ ಪ್ರತಿಕ್ರಮಗಳನ್ನು ಬೀಜಿಂಗ್ ಕೈಗೊಳ್ಳಲಿದೆಯೆಂದು ಅದು ಎಚ್ಚರಿಕೆ ನೀಡಿದೆ.

ಚೀನಾದ ಮುಖ್ಯಭೂಭಾಗವು ತೈವಾನ್‌ನ ಪುನರ್‌ಏಕೀಕರಣ ಪ್ರಕ್ರಿಯೆಯನ್ನು ತ್ವರಿತಗೊಳಿಸಲಿದೆ ಹಾಗೂ ತೈವಾನ್‌ನ ಸ್ವಾತಂತ್ರವನ್ನು ಪ್ರತಿಪಾದಿಸುವವರ ವಿರುದ್ಧ ನಿರ್ದಯವಾಗಿ ಹೋರಾಡಲಿದೆಯೆಂದು’’ ಪತ್ರಿಕೆಯು ಸಂಪಾದಕೀಯದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X