ಕಾರು-ರಿಕ್ಷಾ ಢಿಕ್ಕಿ: ಆಟೋ ಚಾಲಕ ಗಂಭೀರ

ಕಾಸರಗೋಡು, ಜ.17: ಕಾರು-ಆಟೋ ರಿಕ್ಷಾ ಢಿಕ್ಕಿ ಹೊಡೆದು ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಉದುಮ ಪಳ್ಳ ಎಂಬಲ್ಲಿ ನಡೆದಿದೆ.
ಗಾಯಗೊಂಡ ಶಶಿ (35) ಎಂಬವರನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಸರಗೋಡಿನಿಂದ ಪಾಲಕುನ್ನು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಎದುರಿನಿಂದ ಬರುತ್ತಿದ್ದ ಆಟೋ ನಡುವೆ ಅಪಘಾತ ನಡೆದಿದೆ.
ಅಪಘಾತದಿಂದ ಎರಡು ವಾಹನಗಳು ಜಖಂ ಗೊಂಡಿದೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
Next Story





