Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲ್ಪಸಂಖ್ಯಾತರ ಕಲ್ಯಾಣದ ಹೆಸರಿನಲ್ಲಿ...

ಅಲ್ಪಸಂಖ್ಯಾತರ ಕಲ್ಯಾಣದ ಹೆಸರಿನಲ್ಲಿ ಮುಸ್ಲಿಮರನ್ನು ವಿಭಜಿಸುತ್ತಿರುವ ಸಂಘಪರಿವಾರ: ಮುಸ್ಲಿಂ ಒಕ್ಕೂಟ ಖಂಡನೆ

ವಾರ್ತಾಭಾರತಿವಾರ್ತಾಭಾರತಿ17 Jan 2017 11:17 AM IST
share

ಮಂಗಳೂರು, ಜ.17: ಸಂಘಪರಿವಾರ ಭಾರತದ ಇತಿಹಾಸದ ಉದ್ದಕ್ಕೂ ರಾಷ್ಟ್ರದ ಅಲ್ಪಸಂಖ್ಯಾತರನ್ನು ಹಾಗೂ ದಲಿತರನ್ನು ದಮನ ಮಾಡುತ್ತಾ ಬಂದಿದೆ. ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಇತ್ಯಾದಿ ಹಂತದಲ್ಲೂ ಅದರ ವಿರುದ್ಧ ಷಡ್ಯಂತರಗಳನ್ನು ನಡೆಸುತ್ತಾ ಬಂದಿದೆ. ಅದರ ಜೊತೆಗೆ ಈ ರಾಷ್ಟ್ರದ ದಲಿತರು ಮತ್ತು ಮುಸ್ಲಿಮರು ಸಂಘಟಿತರಾಗುವುದು ಹಾಗೂ ಅಭಿವೃದ್ಧಿ ಹೊಂದುವುದನ್ನು ಸಹಿಸಲಾಗದ ಸಂಘಪರಿವಾರ , ರಾಷ್ಟ್ರದಾದ್ಯಂತ ವಿವಿಧ ರೀತಿಯ ವೈಭವೀಕೃತ ಹೆಸರುಗಳನ್ನು ಇಟ್ಟುಕೊಂಡು ಹೊಸ ಸಂಘಟನೆಗಳನ್ನು ರೂಪಿಸಿ ಸಂಘಟಿತರಾಗಿ ಸಮುದಾಯಗಳ ವಿರುದ್ಧ ವಿಷಬೀಜವನ್ನು ಬಿತ್ತಿ ಐಕ್ಯತೆಯನ್ನು ಒಡೆಯುತ್ತಿರುವುದನ್ನು ಮಂಗಳೂರು ಮುಸ್ಲಿಂ ಸಂಘಟನೆಗಳ ಒಕ್ಕೂಟ ಖಂಡಿಸುತ್ತದೆ.

ಇತ್ತೀಚೆಗೆ ಜ.9ರಂದು ನಡೆದ ಸಂಘಪರಿವಾರ ಪ್ರಾಯೋಜಕತ್ವದಲ್ಲಿ ಮಂಗಳೂರು ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಮಕ್ಕಾ ಮಸೀದಿ , ಅಜ್ಮೀರ್ ದರ್ಗಾದ ಬಾಂಬ್ ಸ್ಫೋಟದ ಆರೋಪಿ ಇಂದ್ರೇಶ್ ಕುಮಾರ್ ನ ನೇತೃತ್ವದಲ್ಲಿ ನಡೆದ "ಸರ್ವ ಧರ್ಮ ಸದ್ಭಾವನಾ ಸಂಗೋಷ್ಟಿ" ಎಂಬ ಕಾರ್ಯಕ್ರಮವನ್ನು ಕೇರಳದ ಕ್ಯಾಡರ್ ನಿವೃತ್ತ ನಿರ್ದೇಶಕ ಡಿಜಿಪಿ ಎಂ.ಎನ್ ಕೃಷ್ಣಮೂರ್ತಿಯವರ ಉಸ್ತುವಾರಿಯಲ್ಲಿ ಮಂಗಳೂರು ಪೋಲೀಸ್ ಕಮಿಷನರೇಟ್ ಡಿಸಿಪಿಗಳನ್ನು ಒಳಗೊಂಡಂತೆ ಕೆಲವು ಠಾಣಾಧಿಕಾರಿಗಳು ಮತ್ತು ಸಿಬ್ಬಂದಿ ವಿವಿಧ ಅಲ್ಪಸಂಖ್ಯಾತ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿರುವುದನ್ನು ಮತ್ತು ಕಾರ್ಯಕ್ರಮದಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿರುವುದು ಜಿಲ್ಲೆಯ ಅಲ್ಪಸಂಖ್ಯಾತರಲ್ಲಿ ಆತಂಕ ಮೂಡಿಸಿದೆ.

ಸರಕಾರಿ ಇಲಾಖೆಯು ಸಂಘಪರಿವಾರದ ಕಾರ್ಯಕ್ರಮದ ಜವಾಬ್ದಾರಿಯನ್ನು ಹೊತ್ತಿರುವುದು ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಎಲ್ಲಾ ಕಾರಣಕ್ಕೆ ಈ ಕಾರ್ಯಕ್ರಮದಲ್ಲಿ ಮುಖ್ಯ ಪಾತ್ರ ವಹಿಸಿರುವ ಪೋಲೀಸ್ ಅಧಿಕಾರಿಗಳ ಮೇಲೆ ಮೊಕದ್ದಮೆ ದಾಖಲಿಸಬೇಕು ಹಾಗೂ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಜಿಲ್ಲೆಯ ಸರ್ವಮುಸ್ಲಿಮರ ಪರವಾಗಿ ಮಂಗಳೂರು ಮುಸ್ಲಿಂ ಸಂಘಟನೆಗಳ ಒಕ್ಕೂಟ ಆಗ್ರಹಿಸುತ್ತದೆ. ಮಂಗಳೂರು ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಜ.18ರಂದು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲು ಪ್ರತಿಭಟನಾ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾರ್ಯಕ್ರಮ ಸಂಚಾಲಕ ನ್ಯಾಯವಾದಿ ಸಾದುದ್ದೀನ್ ಸ್ವಾಲಿಹ್ ಹಾಗೂ ಸಂಘಟನೆ ಅಧ್ಯಕ್ಷ ಅಶ್ರಫ್.ಕೆ ಇವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X