Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ್ಯಾಯ ಬೆಲೆ ಅಂಗಡಿಗಳಲ್ಲೇ ಕೂಪನ್...

ನ್ಯಾಯ ಬೆಲೆ ಅಂಗಡಿಗಳಲ್ಲೇ ಕೂಪನ್ ವಿತರಣೆಗೆ ವ್ಯವಸ್ಥೆ: ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ17 Jan 2017 6:50 PM IST
share
ನ್ಯಾಯ ಬೆಲೆ ಅಂಗಡಿಗಳಲ್ಲೇ ಕೂಪನ್ ವಿತರಣೆಗೆ ವ್ಯವಸ್ಥೆ: ಸಚಿವ ಖಾದರ್

ಮಂಗಳೂರು, ಜ. 17: ಪಡಿತರ ಚೀಟಿದಾರ ಗ್ರಾಹಕರಿಗೆ ಸರಿಯಾದ ದರ ಮತ್ತು ಪ್ರಮಾಣದಲ್ಲಿ ರೇಷನ್ ಸಿಗುವಂತಾಗಲು ಕೂಪನ್ ವ್ಯವಸ್ಥೆ ಜಾರಿಗೆ ತಂದಿದ್ದೆವು. ಇದೀಗ ಅದನ್ನು ನ್ಯಾಯ ಬೆಲೆ ಅಂಗಡಿಗಳಲ್ಲೇ ಸೇವಾ ಕೇಂದ್ರ ಆರಂಭಿಸಿ, ಅಲ್ಲೇ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ನಗರದ ಸರ್ಕ್ಯೂಟ್‌ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡಿತರ ಚೀಟಿದಾರರಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಮಾ.31ರೊಳಗೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಪನ್ ವಿತರಣೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಎಪಿಎಲ್ ಕಾರ್ಡ್ ಪಡೆಯುವ ಪ್ರಕ್ರಿಯೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ದಿನದಲ್ಲೇ 1,101 ಮಂದಿ ಆನ್‌ಲೈನ್‌ನಲ್ಲಿ ಕಾರ್ಡ್‌ಗೆ ಅರ್ಜಿಗಳನ್ನು ಹಾಕಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದ 74 ಮಂದಿ, ಬಂಟ್ವಾಳದಿಂದ 95, ಮಂಗಳೂರಿನಿಂದ 791, ಪುತ್ತೂರಿನಿಂದ 111 ಮತ್ತು ಸುಳ್ಯ ತಾಲೂಕಿನಿಂದ 30 ಮಂದಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಪೈಕಿ 652 ಮಂದಿ ಸ್ವತಃ ಪ್ರಿಂಟ್ ಪಡೆದುಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಆನ್‌ಲೈನ್‌ನಲ್ಲಿ ಆಧಾರ್ ಕಾರ್ಡ್ ಸಂಖ್ಯೆ ಮಾತ್ರ ಪಡೆದುಕೊಂಡು ಎಪಿಎಲ್ ಕಾರ್ಡ್ ನೀಡುತ್ತಿದ್ದೇವೆ. ಈ ಯೋಜನೆಯನ್ನು ಇದೀಗ ಸಕಾಲಕ್ಕೆ ಸೇರಿಸಲಾಗಿದೆ ಎಂದರು.

ಬಿಪಿಎಲ್‌ಗೆ ಅರ್ಜಿ ಸಲ್ಲಿಕೆ

ಎಪಿಎಲ್ ಕಾರ್ಡ್ ಯಶಸ್ಸಿನ ಬಳಿಕ ಮುಂದಿನ ವಾರ ಆನ್‌ಲೈನ್ ಮೂಲಕ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಗೆ ಆರಂಭಿಲಾಗುವುದು. ಹಿಂದೆ ಅರ್ಜಿ ಸಲ್ಲಿಸಿದವರು ಕೂಡ ಗ್ರಾಮ ಪಂಚಾಯತ್‌ಗೆ ತೆರಳಿ ದಾಖಲೆ ಸಲ್ಲಿಸಬೇಕು ಎಂದು ಖಾದರ್ ಹೇಳಿದರು.

 ರಾಜ್ಯದ ಬಡಜನತೆಗೆ ಇನ್ನು ಮುಂದೆ ಪ್ರೊಟೀನ್‌ಯುಕ್ತ ಆಹಾರ ಧಾನ್ಯ ನೀಡುವ ಬಗ್ಗೆ ಈ ಹಿಂದೆ ಮುಖ್ಯಮಂತ್ರಿ ಘೋಷಿಸಿದ್ದರು. ಅದರಂತೆ ಇನ್ನು ಅಕ್ಕಿ, ಗೋಧಿ, ಸಕ್ಕರೆ ಜತೆಗೆ ಪ್ರತಿ ಕುಟುಂಬಕ್ಕೆ ಒಂದು ಕೆಜಿ ತೊಗರಿ ಬೇಳೆ ನೀಡಲಿದ್ದೇವೆ. ಈ ಯೋಜನೆಗೆ ಶೀಘ್ರದಲ್ಲೇ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ ಎಂದರು.

ಈಗಾಗಲೇ ಪಡಿತರ ಚೀಟಿ ಮೂಲಕ ನೀಡುತ್ತಿರುವ ನೀಲಿ ಬಣ್ಣದ ಸೀಮೆಯನ್ನು ಇಲಾಖೆಯು ಸ್ಥಗಿತಗೊಳಿಸಲಿದೆ. ಕೆಲವೆಡೆ ಸೀಮೆಎಣ್ಣೆಗೆ ಬೇಡಿಕೆ ಇರುವುದರಿಂದ ಮುಕ್ತ ಮಾರುಕಟ್ಟೆಯಲ್ಲಿ ಸೀಮೆಎಣ್ಣೆ ನೀಡುವ ಬಗ್ಗೆ ಸಿಎಂ ಜತೆ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಜಾರಿಗೆ ಬರಲಿದೆ. ಸೀಮೆಎಣ್ಣೆ ವಿತರಣೆಗೆ ಆಸಕ್ತರು ಜಿಲ್ಲಾ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X