Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವದ ಪ್ರಭಾವೀ ಪಾಸ್‌ಪೋರ್ಟ್‌ಗಳ ಪಟ್ಟಿ...

ವಿಶ್ವದ ಪ್ರಭಾವೀ ಪಾಸ್‌ಪೋರ್ಟ್‌ಗಳ ಪಟ್ಟಿ : ಪ್ರಥಮ ಸ್ಥಾನ ಯಾವ ದೇಶಕ್ಕೆ ?

ಭಾರತ ಪಟ್ಟಿಯಲ್ಲಿ ಎಲ್ಲಿದೆ ?

ವಾರ್ತಾಭಾರತಿವಾರ್ತಾಭಾರತಿ17 Jan 2017 7:29 PM IST
share
ವಿಶ್ವದ ಪ್ರಭಾವೀ ಪಾಸ್‌ಪೋರ್ಟ್‌ಗಳ ಪಟ್ಟಿ : ಪ್ರಥಮ ಸ್ಥಾನ ಯಾವ ದೇಶಕ್ಕೆ ?

ದುಬೈ, ಜ.17: ವಿಶ್ವದ ಅತ್ಯಂತ ಪ್ರಭಾವೀ ಪಾಸ್‌ಪೋರ್ಟ್‌ಗಳ ಪಟ್ಟಿಯಲ್ಲಿ ಜರ್ಮನಿ 157 ಮುಕ್ತ ವಿಸಾ ಅಂಕದೊಂದಿಗೆ ಅಗ್ರಸ್ಥಾನ ಪಡೆದರೆ, ಏಶಿಯನ್ ರಾಷ್ಟ್ರಗಳ ಪಟ್ಟಿಯಲ್ಲಿ ದಕ್ಷಿಣ ಕೊರಿಯಾವನ್ನು ಹಿಂದಿಕ್ಕಿದ ಸಿಂಗಾಪುರ ಅಗ್ರಸ್ಥಾನ ಪಡೆದಿದೆ.ಭಾರತೀಯ ಪಾಸ್‌ಪೋರ್ಟ್‌ಗೆ ಜಾಗತಿಕ ಮಟ್ಟದಲ್ಲಿ 78ನೇ ಸ್ಥಾನ ದೊರೆತಿದೆ.

ಭಾರತವು 46 ಮುಕ್ತ ವಿಸಾ ಅಂಕದೊಂದಿಗೆ 78ನೇ ಸ್ಥಾನದಲ್ಲಿದ್ದು ಚೀನಾ ಮತ್ತು ಪಾಕಿಸ್ತಾನವನ್ನು ಈ ಪಟ್ಟಿಯಲ್ಲಿ ಹಿಂದಿಕ್ಕಿದೆ. ಅಪಘಾನಿಸ್ತಾನವು ಕೇವಲ 23 ಅಂಕದೊಂದಿಗೆ ಈ ಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ರಾಷ್ಟ್ರೀಯ ಪಾಸ್‌ಪೋರ್ಟ್ ಬಳಸಿ ಇನ್ನೊಂದು ದೇಶಕ್ಕೆ ನಡೆಸುವ ಪ್ರಯಾಣದ ಪ್ರಮಾಣದ ಆಧಾರದಲ್ಲಿ ವಿಶ್ವದ ಜನಪ್ರಿಯ ಅಂತರ್ಜಾಲ ಸಂಸ್ಥೆ ‘ಆರ್ಟನ್ ಕ್ಯಾಪಿಟಲ್’ ಜಾಗತಿಕ ಶ್ರೇಯಾಂಕದ ಪಾಸ್‌ಪೋರ್ಟ್ ಸೂಚ್ಯಾಂಕ ತಯಾರಿಸಿದೆ. ಒಬ್ಬ ವ್ಯಕ್ತಿ ತನ್ನ ದೇಶದ ಪಾಸ್‌ಪೋರ್ಟ್ ಬಳಸಿಕೊಂಡು ಮುಕ್ತ ವಿಸಾ ಅಥವಾ ಆಗಮನ ಸಂದರ್ಭದ ವಿಸಾದ ಮೂಲಕ ಒಂದು ವರ್ಷದಲ್ಲಿ ಭೇಟಿ ನೀಡಿದ ರಾಷ್ಟ್ರಗಳ ಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಈ ಸೂಚ್ಯಾಂಕವನ್ನು ಸಿದ್ದಪಡಿಸಲಾಗುತ್ತದೆ.

ಗಡಿ ದಾಟಿ ಹೋಗಲು ಇರುವ ಅವಕಾಶವನ್ನು ಹೆಚ್ಚಿಸಲು ಮತ್ತು ಆತನ ಕುಟುಂಬಕ್ಕೆ ಭದ್ರತೆ ಸುಧಾರಿಸುವುದು ಈ ಪ್ರಕ್ರಿಯೆಯ ಹಿಂದಿರುವ ಉದ್ದೇಶವಾಗಿದೆ ಎಂದು ಆರ್ಟನ್ ಕ್ಯಾಪಿಟಲ್‌ನ ಸಿಇಒ ಜಾನ್ ಹ್ಯಾನ್‌ಫಿನ್ ಹೇಳಿದ್ದಾರೆ.

ಈ ಸಮೀಕ್ಷೆಗೆ ಹೊಸದಾಗಿ- ವಿಶ್ವ ಮುಕ್ತತೆ ಅಂಕ ಎಂಬ ವಿಭಾಗವನ್ನೂ ಸೇರಿಸಲಾಗಿದೆ. ವಿಶ್ವದಾದ್ಯಂತ ಸಂಚರಿಸಲು ಇರುವ ಮುಕ್ತಾವಕಾಶದ ಪ್ರಮಾಣವನ್ನು ಇಲ್ಲಿ ನಮೂದಿಸಲಾಗುತ್ತದೆ. 2016ರಲ್ಲಿ ಈ ವಿಭಾಗದಲ್ಲಿ 17,925 ಅಂಕ ದಾಖಲಾಗಿದ್ದರೆ 2017ರ ಪ್ರಥಮ ವರ್ಷದಲ್ಲೇ ಈ ಅಂಕದ ಪ್ರಮಾಣ 17,948 ದಾಟಿದೆ. ಗಡಿಗಳು ಮುಕ್ತವಾಗಿರುವುದರ ಸಂಕೇತ ಇದು. ಆದರೆ ಇದೇ ಪ್ರವೃತ್ತಿ ಮುಂದುವರಿಯಲಿದೆಯೇ ಎಂಬುದು ಇಲ್ಲಿ ಪ್ರಶ್ನೆಯಾಗಿದೆ. ಜಾಗತೀಕರಣದ ಬಗ್ಗೆ ಈಗಿರುವ ಹಿಂದೇಟಿನ ಧೋರಣೆ ಮತ್ತು ಪ್ರಸಕ್ತ ಇರುವ ಗುಳೆ ಹೋಗುವ ಸಮಸ್ಯೆಯ ಕಾರಣ ವಿಶ್ವ ಮುಕ್ತತೆ ಅಂಕದಲ್ಲಿ ಕ್ರಮೇಣ ಇಳಿಮುಖವಾಗುವ ಆತಂಕವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಹೂಡಿಕೆಯ ಮೂಲಕ ಪೌರತ್ವ ಎಂಬುದು 2 ಬಿಲಿಯನ್ ಅಮೆರಿಕನ್ ಡಾಲರ್ ವೌಲ್ಯದ ಒಂದು ಉದ್ದಿಮೆಯಾಗಿದೆ. ಪ್ರತೀವರ್ಷ ಸುಮಾರು 20 ಸಾವಿರ ಹೂಡಿಕೆದಾರರು ವಿಶ್ವದ ವಿವಿಧೆಡೆ ಹೂಡಿಕೆ ಮಾಡುವ ಮೂಲಕ ದ್ವಿತೀಯ ಪೌರತ್ವ ಪಡೆಯಲು ಮುಂದಾಗುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X