Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಹುಜನ ಸಮಾಜವನ್ನು ಒಗ್ಗೂಡಿಸಿ ಸ್ವತಂತ್ರ...

ಬಹುಜನ ಸಮಾಜವನ್ನು ಒಗ್ಗೂಡಿಸಿ ಸ್ವತಂತ್ರ ರಾಜಕೀಯ ಅಧಿಕಾರದತ್ತ ಬಿ.ಎಸ್.ಪಿ : ವೇಲಾಯುಧನ್

ವಾರ್ತಾಭಾರತಿವಾರ್ತಾಭಾರತಿ17 Jan 2017 7:34 PM IST
share
ಬಹುಜನ ಸಮಾಜವನ್ನು ಒಗ್ಗೂಡಿಸಿ ಸ್ವತಂತ್ರ ರಾಜಕೀಯ ಅಧಿಕಾರದತ್ತ ಬಿ.ಎಸ್.ಪಿ : ವೇಲಾಯುಧನ್

ಬೆಳ್ತಂಗಡಿ, ಜ.17 : ಬಹುಜನ ಸಮಾಜ ಪಾರ್ಟಿಯು ಸರ್ವ ಜಾತಿ, ಧರ್ಮೀಯ ಬಹುಜನ ಸಮಾಜವನ್ನು ಒಗ್ಗೂಡಿಸಿ ಸಮಾನತೆ, ಸಹೋದರತಾ ಮಂತ್ರದಿಂದ ಸ್ವತಂತ್ರ ರಾಜಕೀಯ ಅಧಿಕಾರದತ್ತ ಮುನ್ನಡೆಯುತ್ತಿದೆ ಎಂದು ಬಿ.ಎಸ್.ಪಿ ರಾಜ್ಯ ಕಾರ್ಯದರ್ಶಿ ವೇಲಾಯುಧನ್ ಅಭಿಪ್ರಾಯಪಟ್ಟರು.

ಅವರು ಬಹುಜನ ಸಮಾಜ ಪಾರ್ಟಿಯ ನಾಯಕಿ ಮಾಯಾವತಿ ಅವರ 61ನೇ ಜನ್ಮದಿನಾಚರಣೆಯ ಅಂಗವಾಗಿ ಬಿ.ಎಸ್.ಪಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ನೇತೃತ್ವವದಲ್ಲಿ  ಜಿಲ್ಲಾ ಬಿ.ಎಸ್.ಪಿ. ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಬೃಹತ್ ದ್ವಿಚಕ್ರ ವಾಹನ ರ್ಯಾಲಿ ಬಳಿಕ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪಕ್ಷದ ಸಿದ್ಧಾಂತದ ಆಧಾರದಲ್ಲಿ ನಾಯಕಿ ಅಕ್ಕಾ ಮಾಯಾವತಿ ಅವರ ಮಾರ್ಗದರ್ಶನದಂತೆ ಈ ದೇಶದಲ್ಲಿ 6 ಸಾವಿರ ಜಾತಿಗಳನ್ನು ಸಹೋದರತ್ವದೆಡೆಗೆ ಮುನ್ನಡೆಸುತ್ತಿದ್ದಾರೆ ಎಂದರು.

ಬಿ.ಎಸ್.ಪಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಘಟಕದ ಅಧ್ಯಕ್ಷ ಸಂಜೀವ ಆರ್ ಅಧ್ಯಕ್ಷತೆ ವಹಿಸಿ, ಪಕ್ಷ ಸಂಘಟಿಸುವ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ  ಮಾತನಾಡಿದ ಬಹುಜನ ಚಿಂತಕ ರಘುಧರ್ಮಸೇನ್ ಅವರು, ನೋಟು ಬ್ಯಾನ್ ಬೆದರಿಕೆಯಿಂದ ನಮ್ಮ ಪಕ್ಷವನ್ನು ಹಿಮ್ಮೆಟ್ಟಿಸಲು ಬಹುಜನ ಸಮಾಜದ ರಾಜಕೀಯ ಸಿದ್ಧಾಂತವನ್ನು ಸೋಲಿಸಲು ಸಾಧ್ಯವಿಲ್ಲ. ಏಕೆಂದರೆ ಬಹುಜನ ಸಮಾಜವು ವ್ಯಕ್ತಿಯನ್ನು ಹೊತ್ತು ತಿರುಗುವವರಲ್ಲ . ಸಿದ್ಧಾಂತವನ್ನು ಎದೆಯಲ್ಲಿಟ್ಟುಕೊಂಡು ಪಕ್ಷ ಕಟ್ಟಿದವರು ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಬಿ.ಎಸ್.ಪಿ. ಅಧ್ಯಕ್ಷ ಗೋಪಾಲ್ ಮುತ್ತೂರು, ಪ್ರಧಾನ ಕಾರ್ಯದರ್ಶಿ ವಸಂತ ಕಕ್ಯಪದವು, ಸಂಯೋಜಕ ನಾರಾಯಣ ಬೋಧ್ ಮಾತನಾಡಿದರು.

 ಜಿಲ್ಲಾ ಬಿ.ಎಸ್.ಪಿ. ಉಪಾಧ್ಯಕ್ಷ ಶಿವರಾಮ್, ಮಂಗಳೂರು ಉತ್ತರ ಕ್ಷೇತ್ರ ಅಧ್ಯಕ್ಷ ಲೋಕೇಶ್ ಮಿತ್ತೂರು, ಪುತ್ತೂರು ವಿ.ಸ. ಕ್ಷೇತ್ರ ಅಧ್ಯಕ್ಷ ನಿಶಾಂತ್ ಉಪಸ್ಥಿತರಿದ್ದರು.

 ಲೋಕೇಶ್ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು, ತಾ ಬಿ.ಎಸ್.ಪಿ. ಪ್ರಧಾನ ಕಾರ್ಯದರ್ಶಿ ಗುರು ಇಂದಬೆಟ್ಟು ಸ್ವಾಗತಿಸಿದರು.

ಬೆಳ್ತಂಗಡಿ ಬಿ.ಎಸ್.ಪಿ. ಉಸ್ತುವಾರಿ ಶಿವಪ್ಪ ಗರ್ಡಾಡಿ ವಂದಿಸಿದರು.

ಪುಂಜಾಲಕಟ್ಟೆ ಬಸವನಗುಡಿಯಿಂದ ಹೊರಟ ಬೈಕ್ ರ್ಯಾಲಿ ಮಡಂತ್ಯಾರು,ಪಣಕಜೆ,ಮದ್ದಡ್ಕ, ಗುರುವಾಯನಕೆರೆ ಮೂಲಕ ಬೆಳ್ತಂಗಡಿ ಪ್ರವೇಶಿಸಿ ಅಂಬೇಡ್ಕರ್ ಭವನದಲ್ಲಿ ಸಮಾವೇಶಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X