Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪ್ಪನ ಜೊತೆಗೇ ಮುಂದೆ ಸಾಗುತ್ತೇವೆ:...

ಅಪ್ಪನ ಜೊತೆಗೇ ಮುಂದೆ ಸಾಗುತ್ತೇವೆ: ಅಖಿಲೇಶ್

ವಾರ್ತಾಭಾರತಿವಾರ್ತಾಭಾರತಿ17 Jan 2017 10:52 PM IST
share

ಲಕ್ನೊ, ಜ.17: ಪಕ್ಷದ ಹಿರಿಯ ಮುಖಂಡ, ತನ್ನ ತಂದೆ ಮುಲಾಯಂ ಸಿಂಗ್ ಅವರೊಂದಿಗಿನ ತನ್ನ ಸಂಬಂಧ ಎಂದಿಗೂ ಮುರಿಯಲಾಗದು ಎಂದು ಹೇಳಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಮುಂಬರುವ ದಿನಗಳಲ್ಲಿ ‘ನೇತಾಜಿ’ಯವರನ್ನು ಜೊತೆಯಲ್ಲಿರಿಸಿಕೊಂಡೇ ಮುಂದುವರಿಯುವುದಾಗಿ ತಿಳಿಸಿದ್ದಾರೆ.

 ಪ್ರಸ್ತುತ ಸಮಾಜವಾದಿ ಪಕ್ಷವನ್ನು ರಾಜ್ಯದಲ್ಲಿ ಮರಳಿ ಅಧಿಕಾರಕ್ಕೆ ತರುವುದೇ ತನ್ನ ಪ್ರಥಮ ಆದ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಸರ್ವರನ್ನೂ ಜೊತೆಯಲ್ಲೇ ಕರೆದೊಯ್ಯುವುದಾಗಿ ಅವರು ತಿಳಿಸಿದರು. ನನಗೆ ಸೈಕಲ್ ಚಿಹ್ನೆ ದೊರೆಯುತ್ತದೆ ಎಂಬ ವಿಶ್ವಾಸವಿತ್ತು. ಇದೀಗ ಸಮಯ ಕಡಿಮೆಯಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಬೇಕಿದೆ. ಇದೊಂದು ದೊಡ್ಡ ಜವಾಬ್ದಾರಿಯಾಗಿದ್ದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಜವಾಬ್ದಾರಿ ನಿಭಾಯಿಸ ಲಾಗುವುದು ಎಂದು ಅಖಿಲೇಶ್ ತಿಳಿಸಿದರು. ತಮ್ಮ ಸರಕಾರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈ ವೇಳೆ ನಿವಾಸದ ಹೊರಗೆ ಸೇರಿದ್ದ ಅವರ ಬೆಂಬಲಿಗರು- ಸಬ್ ಬೋಲೇ ದಿಲ್ ಸೆ, ಅಖಿಲೇಶ್ ಭೈಯ್ಯ ಫಿರ್‌ಸೆ ( ಎಲ್ಲರೂ ಹೃದಯಾಂತರಾಳದಿಂದ ಹೇಳಿ- ಸೋದರ ಅಖಿಲೇಶ್ ಮತ್ತೆ ಗೆಲ್ಲಲಿ) ಎಂಬ ಘೋಷಣೆ ಕೂಗುತ್ತಿದ್ದರು. ಚುನಾವಣಾ ಆಯೋಗವು ತಮ್ಮ ಬಣಕ್ಕೆ ಸೈಕಲ್ ಚಿಹ್ನೆ ನೀಡಿದ ಬಳಿಕ ಅಖಿಲೇಶ್ ಸೋಮವಾರ ರಾತ್ರಿ ತನ್ನ ತಂದೆ ಮುಲಾಯಂಸಿಂಗ್ ಅವರನ್ನು ಭೇಟಿಯಾಗಿದ್ದರು. ಈ ಬಳಿಕ ಮೂರು ಹಳೆಯ ಫೋಟೋಗಳನ್ನು ಟ್ವಿಟರ್‌ನಲ್ಲಿ ಹಾಕಿದ್ದರು. ಅದರಲ್ಲಿ ಮುಲಾಯಂರೊಂದಿಗಿರುವ ಒಂದು ಫೋಟೋ ಇತ್ತು. ಉಳಿದ ಎರಡೂ ಫೋಟೋಗಳು ಜನವರಿ 1ರಂದು ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯದ್ದು. ಈ ಫೋಟೋಗಳ ಜೊತೆಗೆ- ಸೈಕಲ್ ಚಲ್ತೀ ಜಾಯೇಗಿ, ಆಗೇ ಬಡ್ತೆ ಜಾಯೇಗಿ (ಸೈಕಲ್ ಚಲಿಸುತ್ತಲೇ ಇರುತ್ತದೆ, ಮುಂದೆ ಸಾಗುತ್ತಲೇ ಇರುತ್ತದೆ) ಎಂಬ ಸಂದೇಶವನ್ನು ಕೂಡಾ ಪೋಸ್ಟ್ ಮಾಡಿದ್ದರು. ಪಕ್ಷದ ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಸಚಿವರು ಅಖಿಲೇಶ್ ನಿವಾಸಕ್ಕೆ ದೌಡಾಯಿಸಿ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ ಪಕ್ಷದ ಕಚೇರಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡು ಹೆಚ್ಚಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿದ್ದಾರೆ. ಅಖಿಲೇಶ್ ನಿವಾಸದ ಕೂಗಳತೆಯಲ್ಲಿರುವ ಮುಲಾಯಂ ಸಿಂಗ್ ಅವರ ಬಂಗಲೆಯಲ್ಲಿ ಈಗ ಹೆಚ್ಚಿನ ಚಟುವಟಿಕೆ ಕಂಡುಬರುತ್ತಿಲ್ಲ. ಮುಲಾಯಂ ಸೋದರ ಶಿವಪಾಲ್ ಯಾದವ್, ಅಂಬಿಕಾ ಚೌಧರಿ ಮುಂತಾದವರು ಮುಲಾಯಂ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X