ಮಂಡೂರಿನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

ಹುಬ್ಬಳ್ಳಿ, ಜ.18: ಹುಬ್ಬಳ್ಳಿಯ ಮಂಡೂರಿನಲ್ಲಿ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ .
ಗೂಡ್ಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದೆ.ರೈಲಿನ ಚಕ್ರ ತುಂಡಾದ ಪರಿಣಾಮವಾಗಿ ರೈಲು ಹಳಿ ತಪ್ಪಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಆಂಧ್ರ ಪ್ರದೇಶದಿಂದ ರೈಲಿನಲ್ಲಿ ಅಕ್ಕಿ ಮೂಟೆ ತರಲಾಗುತ್ತಿತ್ತು. ಘಟನಾ ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ಧಾವಿಸಿದ್ದಾರೆ.
Next Story