ಅರ್ಧ ಗಂಟೆಯೊಳಗೆ ಹಾಜರಾಗುವಂತೆ ನ್ಯಾಯಾಲಯ ಸಲ್ಲುಗೆ ಹುಕುಂ

ಜೋಧ್ ಪುರ, ಜ.18: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಅರ್ಧ ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಧೀಶರಾದ ದಲ್ಪತ್ ಸಿಂಗ್ ರಾಜಪುರೋಹಿತ್ ಆದೇಶ ನೀಡಿದ್ದಾರೆ.
ಸಲ್ಮಾನ್ ಖಾನ್ ಬೆಳಗ್ಗೆ 10:30ಕ್ಕೆ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಅವರು ಆಗಮಿಸುತ್ತಿದ್ದ ಕಾರ್ ಗೆ ಟಿಂಟೆಡ್ ಗ್ಲಾಸ್ ಅಳವಡಿಸಲಾಗಿತ್ತು. ಈ ಕಾರಣದಿಂದಾಗಿ ಕಾರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಇದರಿಂದಾಗಿ ಸಲ್ಮಾನ್ ಖಾನ್ ಬರುವುದು ವಿಳಂಬವಾಗಿದೆ.
ಸಲ್ಮಾನ್ ಖಾನ್ 18 ವರ್ಷಗಳ ಹಿಂದೆ ರಾಜಸ್ಥಾನದ ಜೋಧ್ ಪುರದ ಕಂಕಣಿ ಗ್ರಾಮದಲ್ಲಿ ಕೃಷ್ಣ ಮೃಗ ಬೇಟೆಯಾಡಲು ಅಕ್ರಮ ಶಸ್ತ್ರಾಸ್ತ್ರ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜೋಧ್ ಪುರದ ಸೆಷನ್ ನ್ಯಾಯಾಲಯವು ಇಂದು ತೀರ್ಪು ನೀಡಲಿದೆ
Next Story





