Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.19ರಂದು ಗಣೇಶ್ ಮೆಡಿಕಲ್ಸ್ ಆ್ಯಂಡ್...

ಜ.19ರಂದು ಗಣೇಶ್ ಮೆಡಿಕಲ್ಸ್ ಆ್ಯಂಡ್ ಸೂರ್ಯ ಲೈಫ್‌ಕೇರ್ ಉದ್ಘಾಟನೆ

ಮಂಗಳೂರು ಪಂಪ್‌ವೆಲ್‌ನಲ್ಲಿ ನೂತನ ಔಷಧ ಮಾರಾಟ ಮಳಿಗೆ

ವಾರ್ತಾಭಾರತಿವಾರ್ತಾಭಾರತಿ18 Jan 2017 6:45 PM IST
share
ಜ.19ರಂದು ಗಣೇಶ್ ಮೆಡಿಕಲ್ಸ್ ಆ್ಯಂಡ್ ಸೂರ್ಯ ಲೈಫ್‌ಕೇರ್ ಉದ್ಘಾಟನೆ

ಮಂಗಳೂರು, ಜ.18: ಔಷಧ ಮಾರಾಟಕ್ಕೆ ಹೆಸರುವಾಸಿಯಾಗಿರುವ ಗಣೇಶ್ ಮೆಡಿಕಲ್ಸ್‌ನ ನೂತನ ಮಳಿಗೆ ‘ಗಣೇಶ್ ಮೆಡಿಕಲ್ಸ್ ಆ್ಯಂಡ್ ಲೈಫ್‌ಕೇರ್’ ಜ.19ರಂದು ನಗರದ ಪಂಪ್‌ವೆಲ್‌ನ ಕ್ಲಾಸಿಕ್ ಗೇಟ್‌ವೇ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ.

ಜ.19ರಂದು ಬೆಳಗ್ಗೆ 9:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್, ಅವರ್ ಲೇಡಿ ಆಫ್ ದಿ ಹೋಲಿ ರೊಸಾರಿಯೊ ಕೆಥೆಡ್ರಲ್‌ನ ಧರ್ಮಗುರು ವಂ. ಜೆ.ಬಿ.ಕ್ರಾಸ್ತಾ ಆಶೀರ್ವಚನ ನೀಡುವರು. ಮುಖ್ಯ ಅತಿಥಿಗಳಾಗಿ ಶಕ್ತಿನಗರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಟ್ರಸ್ಟಿ ಕೆ.ಸಿ.ನಾಕ್ ಮತ್ತು ತಾರಾಕ್ಷಿ ನಾರಾಯಣನ್ ಭಾಗವಹಿಸಲಿದ್ದಾರೆ.

ಎಲ್ಲ ವಿಧದ ಔಷಧಗಳೂ ಲಭ್ಯ

1973ರಲ್ಲಿ ಸದಾನಂದ ಶೆಟ್ಟಿಯವರಿಂದ ಸ್ಥಾಪಿಸಲ್ಪಟ್ಟ ಗಣೇಶ್ ಮೆಡಿಕಲ್ಸ್ ದ.ಕ. ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳು ಹಾಗೂ ಕೇರಳದ ಕಾಸರಗೋಡು, ಕಣ್ಣೂರು ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಹೆಸರುವಾಸಿಯಾಗಿದೆ. ಬಳಿಕ ಸಹಸಂಸ್ಥೆಯಾಗಿ 2009ರಲ್ಲಿ ಜೀವರಕ್ಷಕ ಔಷಧ ವಿತರಣಾ ಸಂಸ್ಥೆ ‘ಸೂರ್ಯ ಲೈಫ್‌ಕೇರ್’ ಆರಂಭಗೊಂಡಿತು. ಎಲ್ಲ ವಿಧದ ಔಷಧಗಳು ಹಾಗೂ ಬೇರೆ ಕಡೆಗಳಲ್ಲಿ ವಿರಳವಾಗಿ ಸಿಗುವಂತಹ ಔಷಧಗಳನ್ನು ಒದಗಿಸುವ ಮೂಲಕ ಈ ಸಂಸ್ಥೆ ಹೆಸರುವಾಸಿಯಾಗಿದೆ.

ಜೀವರಕ್ಷಕ ಔಷಧಗಳ ಕೊರತೆ ಹಾಗೂ ಸೂರ್ಯ ಲೈಫ್‌ಕೇರ್‌ನ ಯಶಸ್ಸಿನ ಹಿನ್ನೆಲೆಯಲ್ಲಿ ಮಣಿಪಾಲ ಮತ್ತು ಕಾಸರಗೋಡಿನಲ್ಲಿ ಸಂಸ್ಥೆಯು ಶಾಖೆಗಳನ್ನು ತೆರೆದು ಯಶಸ್ವಿಯಾಯಿತು. ಬೆಳೆಯುತ್ತಿರುವ ಮಂಗಳೂರು ಮಹಾನಗರದಲ್ಲಿ ಉತ್ತಮ ಗುಣಮಟ್ಟದ ಅಂತಾರಾಷ್ಟ್ರೀಯ ಮಾದರಿಯ ಔಷಧ ಮಳಿಗೆ ಅಗತ್ಯ ಎನ್ನುವ ನಿಟ್ಟಿನಲ್ಲಿ ಪಂಪ್‌ವೆಲ್‌ನಲ್ಲಿ ವಿಶಾಲ ಮಳಿಗೆಯನ್ನು ತೆರೆಯಲು ಉದ್ದೇಶಿಸಲಾಗಿದೆ. ನೂತನ ಮಳಿಗೆ ವಿಶಾಲವಾಗಿದ್ದು, ಸಂಪೂರ್ಣ ಹವಾನಿಯಂತ್ರಿತವಾಗಿದೆ.

ಪಂಪ್‌ವೆಲ್‌ನ ನೂತನ ಮಳಿಗೆ ಜ.19ರಂದು ಉದ್ಘಾಟನೆಗೊಂಡರೂ ಗ್ರಾಹಕರ ಸೇವೆಗೆ ಮುಂದಿನ ತೆರೆದುಕೊಳ್ಳಲಿದೆ. ಸದಾನಂದ ಶೆಟ್ಟಿ ದಂಪತಿಯ ಮಾರ್ಗದರ್ಶನ, ಕುಟುಂಬದ ಸದಸ್ಯರ ಸಹಕಾರ, ದಕ್ಷ ಮತ್ತು ಅನುಭವಿ ಸಿಬ್ಬಂದಿಯ ಸೇವೆ ಗ್ರಾಹಕರಿಗೆ ಇಲ್ಲಿ ಲಭ್ಯವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X