Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಟ್ಟಭದ್ರರಿಂದ ವಿವೇಕಾನಂದರ ವಿಚಾರಗಳ...

ಪಟ್ಟಭದ್ರರಿಂದ ವಿವೇಕಾನಂದರ ವಿಚಾರಗಳ ತಿರುಚುವಿಕೆ: ಸಿದ್ದರಾಮಯ್ಯ ಎಚ್ಚರಿಕೆ

‘ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ’

ವಾರ್ತಾಭಾರತಿವಾರ್ತಾಭಾರತಿ18 Jan 2017 7:32 PM IST
share
ಪಟ್ಟಭದ್ರರಿಂದ ವಿವೇಕಾನಂದರ ವಿಚಾರಗಳ ತಿರುಚುವಿಕೆ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಜ.18: ದೇಶದಲ್ಲಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿವೇಕಾನಂದರ ವಿಚಾರಗಳನ್ನು ತಿರುಚುವ ಪ್ರಯತ್ನ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಜನತೆಗೆ ಎಚ್ಚರಿಕೆ ನೀಡಿದರು.

ಬುಧವಾರ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ’ ಮತ್ತು ರಾಜ್ಯಮಟ್ಟದ ಕಾರ್ಯಕ್ರಮಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದ ಸಮೃದ್ಧ ರಾಷ್ಟ್ರ ನಿರ್ಮಾಣ ಹಾಗೂ ಸಾಮರಸ್ಯದ ಸಮಾಜ ನಿರ್ಮಾಣದ ಕನಸನ್ನು ಕಂಡಿದ್ದರು. ಇದನ್ನು ನನಸು ಮಾಡುವ ನಿಟ್ಟಿನಲ್ಲಿ ಯುವಜನತೆಗೆ ಉದಾತ್ತ ಚಿಂತನೆಗಳನ್ನು ಬೋಧಿಸಿದ್ದಾರೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅವರ ವಿಚಾರಗಳನ್ನು ತಿರುಚುವ ಪ್ರಯತ್ನ ನಡೆಸುತ್ತಿವೆ. ಈ ಬಗ್ಗೆ ಯುವ ಸಮೂಹ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯುವ ಜನತೆಯ ಬಗ್ಗೆ ಅಪಾರ ವಿಶ್ವಾಸವಿದ್ದ ವಿವೇಕಾನಂದರು ಯಾವುದೇ ಜಾತಿ, ಧರ್ಮಕ್ಕೆ ಜೋತುಬಿದ್ದವರಲ್ಲ. ಹಾಗೂ ಧರ್ಮವನ್ನು ನಿರಾಕರಿಸಿದವರೂ ಅಲ್ಲ. ಧರ್ಮದಲ್ಲಿದ್ದೇ ಅದನ್ನು ಟೀಕಿಸಿ, ವಿಶ್ಲೇಷಿಸಿ ಜನರಿಗೆ ಅಧ್ಯಾತ್ಮ ಮತ್ತು ಧರ್ಮವನ್ನು ಬೋಧಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಮ್ಮ ಸಮಾಜ ಯಾವುದೇ ಕಾರಣಕ್ಕೂ ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿಭಜನೆ ಆಗಬಾರದು. ಭಾರತದಲ್ಲಿ ಎಲ್ಲ ಧರ್ಮಗಳು ಒಟ್ಟಾಗಿ ಬಾಳುವ ಅವಕಾಶ ಇರಬೇಕು. ಆ ಮೂಲಕ ಸಾಮರಸ್ಯದ ಸಮಾಜವನ್ನು ಕಟ್ಟಬೇಕು ಎಂದು ವಿವೇಕಾನಂದರು ಬಯಸಿದ್ದರು. ಅದಕ್ಕಾಗಿಯೇ ವಿವೇಕಾನಂದರು ಭಾರತಕ್ಕೆ ವೇದಾಂತದ ಮೆದುಳು, ಇಸ್ಲಾಂ ಧರ್ಮದ ದೇಹ ಇರಬೇಕೆಂದು ಹೇಳಿದ್ದರು. ಈ ಎರಡು ಧರ್ಮಗಳ ಮಿಲನ ಆದಾಗ ಮಾತ್ರ ಸಾಮರಸ್ಯದ ಸಮಾಜ ನಿರ್ಮಾಣ ಆಗುತ್ತದೆ ಎಂದು ಅವರು ಹೇಳಿದರು.

ಯಾವುದೇ ಪಕ್ಷ, ಸಿದ್ಧಾಂತ, ಧರ್ಮ ಹಾಗೂ ಜಾತಿಗೆ ಸೀಮಿತವಾದ ವಿವೇಕಾನಂದರು ಧರ್ಮಕ್ಕಿಂತ ಮನುಷ್ಯತ್ವಕ್ಕೆ ಹೆಚ್ಚು ಒತ್ತು ಕೊಟ್ಟವರು. ಮೊದಲು ಮನುಷ್ಯ, ತದನಂತರವೇ ಧರ್ಮ ಹಾಗೂ ದೇವರೆಂದು ಪ್ರಬಲವಾಗಿ ಪ್ರತಿಪಾದಿಸಿದ್ದಾರೆ. ಇಂತಹ ಆದಶರ್ರ್ಗಳು ಮಾತ್ರ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಲ್ಲದು ಎಂದು ಅವರು ಹೇಳಿದರು.

ಅಸ್ಪಶ್ಯತೆ ಒಂದು ಮಾನಸಿಕ ರೋಗ. ಕೆಲವು ಪಟ್ಟಭದ್ರರು ಅದನ್ನು ತಮ್ಮ ಸ್ವಾರ್ಥಕ್ಕಾಗಿ ಜೀವಂತವಾಗಿಡುತ್ತಿದ್ದಾರೆ. ಜಾತಿ ಪದ್ಧತಿ, ಶೋಷಣೆಯಂತಹ ಅನಿಷ್ಟಗಳನ್ನು ಹೋಗಲಾಡಿಸಲು ಯುವ ಜನತೆ ಟೊಂಕ ಕಟ್ಟಿ ನಿಲ್ಲಬೇಕು. ವೈಚಾರಿಕೆ, ವೈಜ್ಞಾನಿಕತೆಯ ತಳಹದಿಯ ಮೇಲೆ ದೇಶವನ್ನು ಕಟ್ಟಬೇಕು ಎಂದು ಸ್ವಾಮಿ ವಿವೇಕಾನಂದರು ಕರೆ ನೀಡಿದ್ದರು. ಅವರ ಆಶಯವನ್ನು ನಾವೆಲ್ಲರೂ ಈಡೇರಿಸೋಣವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಲ್ಪಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಆರ್.ರೋಷನ್ ಬೇಗ್, ಟಿ.ಬಿ. ಜಯಚಂದ್ರ, ಆರ್.ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ, ಎಚ್.ಕೆ. ಪಾಟೀಲ್, ಉಮಾಶ್ರೀ, ಯು.ಟಿ. ಖಾದರ್, ಡಾ. ಶರಣ್ ಪ್ರಕಾಶ್ ಪಾಟೀಲ್, ವಿನಯ್ ಕುಲಕರ್ಣಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನೆ.ಲ.ನರೇಂದ್ರ ಬಾಬು, ಮೇಯರ್ ಜಿ. ಪದ್ಮಾವತಿ, ಅಧಿಕಾರಿಗಳಾದ ಭರತ್ ಲಾಲ್ ಮೀನಾ, ಡಾ. ರಜನೀಶ್ ಗೊಯಲ್, ಮಂಜುನಾಥ್ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು. ಮೈಸೂರಿನ ರಾಮಕಷ್ಣ ಆಶ್ರಮದ ಅಧ್ಯಕ್ಷ ಆತ್ಮಜ್ಞಾನಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಬಿಜೆಪಿ ನಾಯಕರ ಗೈರು

-ಯುವ ಸಪ್ತಾಹ ಸಮಾವೇಶದ ಆಮಂತ್ರಣ ಪತ್ರಿಕೆಯಲ್ಲಿ ಬಿಜೆಪಿ ನಾಯಕರಾದ ಕೇಂದ್ರ ಸಚಿವ ಅನಂತ್ ಕುಮಾರ್, ಡಿ.ವಿ. ಸದಾನಂದಗೌಡ ಸೇರಿದಂತೆ ಹಲವು ಬಿಜೆಪಿ ಮುಖಂಡರ ಹೆಸರಿದ್ದರೂ ಯಾರೊಬ್ಬರೂ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ.

-ರಾಜ್ಯ ಸರಕಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಗೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಮಂದಿ ವಿದ್ಯಾರ್ಥಿಗಳು ಆಗಮಿಸಿದ್ದರು. ಅರಮನೆ ಮೈದಾನದ ರಸ್ತೆಯುದ್ದಕ್ಕೂ ವಿದ್ಯಾರ್ಥಿಗಳ ದಂಡೇ ಕಂಡು ಬರುತ್ತಿತ್ತು. ವಿದ್ಯಾರ್ಥಿಗಳು ತಮ್ಮ ಶರ್ಟ್‌ಗಳ ಮೇಲೆ ವಿವೇಕಾನಂದರ ಭಾವಚಿತ್ರಗಳನ್ನು ಹಾಕಿಕೊಂಡು ಜೈಕಾರ ಹಾಕುತ್ತಲೆ ಕಾರ್ಯಕ್ರಮದ ಸ್ಥಳಕ್ಕೆ ಹೋಗುತ್ತಿದದ್ದು ಕಂಡುಬಂತು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಶಿಕ್ಷಣದ ಸುಧಾರಣೆಗೆ ಸರಕಾರ ಕೈಗೊಂಡಿರುವ ಹಲವು ಯೋಜನೆಗಳನ್ನು ಇಂದಿನ ಕಾರ್ಯಕ್ರಮದಲ್ಲಿ ಪ್ರಕಟಿಸಲು ನಿರ್ಧರಿಸಿದ್ದರು. ಆದರೆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವ ಯೋಜನೆಯನ್ನು ಪ್ರಕಟಿಸಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X