ರಾಜ್ಯ ಸಚಿವರ ಸಹಿತ ಕಾಂಗ್ರೆಸ್ ಮುಖಂಡರ ಮನೆಗಳಿಗೆ ಐಟಿ ದಾಳಿ, ಪರಿಶೀಲನೆ

ಬೆಳಗಾವಿ, ಜ.19: ರಾಜ್ಯ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಸಹಿತ ಹಲವು ಕಾಂಗ್ರೆಸ್ ಮುಖಂಡರ ಮನೆಗಳಿಗೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದ್ದು, ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಹಾಗೂ ಅವರ ಸಹೋದರ ಲಖನ್ ಜಾರಕಿಗೊಳಿ, ಸ್ಥಳೀಯ ಕಾಂಗ್ರೆಸ್ ಮುಖಂಡ ಮುಲ್ಲಾ ಅವರ ನಿವಾಸಗಳ ಮೇಲೂ ಸುಮಾರು 20 ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವ ಜಾರಕಿಹೊಳಿ ಮನೆಗೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳನ್ನು ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಮೂಲಗಳ ಪ್ರಕಾರ ಈ ದಾಳಿಯ ವೇಳೆ ಐಟಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಯಾವುಧೇ ಅಧಿಕೃತ ಮಾಹಿತಿಗಳು ಲಭಿಸಿಲ್ಲ.
Next Story





