ಬಿಎಸ್‌ವೈ ಸುತ್ತಾಡುವುದು ಬಿಟ್ಟು ರಾಜ್ಯಕ್ಕೆ ಹೆಚ್ಚು ಅನುದಾನ ಸಿಗುವಂತೆ ಮಾಡಲಿ: ಸಿದ್ದರಾಮಯ್ಯ

ಮಂಗಳೂರು, ಜ.19: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರಿಗೆ ರಾಜ್ಯ ಸರಕಾರವನ್ನು ಟೀಕಿಸುವುದೇ ಕೆಲಸ. ಅವರು ಗಣಪತಿಯ ಹಾಗೆ ಇಲ್ಲೇ ಸುತ್ತಾಡುವುದನ್ನು ಬಿಟ್ಟು ದಿಲ್ಲಿಯಲ್ಲಿ ಮಾತನಾಡಲಿ. ಬರ ಪರಿಹಾರಕ್ಕೆ ಸಂಬಂಧಿಸಿ ರಾಜ್ಯಕ್ಕೆ ಹೆಚ್ಚು ಅನುದಾನ ಸಿಗುವಂತೆ ಮಾಡಲು ಶ್ರಮಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರು ಮತ್ತು ಕಾಸರಗೋಡಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಬರ ಪರಿಹಾರಕ್ಕೆ ಕೇಂದ್ರದ ಕೊಡುಗೆ ಕುರಿತಂತೆ ರಾಜ್ಯ ಸರಕಾರವನ್ನು ಟೀಕಿಸುತ್ತಿರುವ ಬಿಎಸ್‌ವೈ ವಿರುದ್ಧ ಮುಖ್ಯಮಂತ್ರಿ ಕಿಡಿಕಾರಿದರು. ಸಚಿವ ರಮೇಶ್ ಜಾರಕಿಹೊಳಿ ಮನೆಗೆ ಐಟಿ ಅಧಿಕಾರಿಗಳ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಧಿಕಾರಿಗಳ ನಡೆಯಲಿ. ಸತ್ಯಾಂಶ ಹೊರಬೀಳಲಿ ಎಂದರು.
ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕೇವಲ ವದಂತಿ ಎಂದ ಸಿದ್ದರಾಮಯ್ಯ, ಎತ್ತಿನಹೊಳೆ ಯೋಜನೆ ವಿರುದ್ಧದ ಹೋರಾಟ ರಾಜಕೀಯ ಪ್ರೇರಿತ ಎಂದರು.







