Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ರಿಗೇಡ್ ಕಲಹಕ್ಕೆ ಹೊಸ ತಿರುವು

ಬ್ರಿಗೇಡ್ ಕಲಹಕ್ಕೆ ಹೊಸ ತಿರುವು

ಈಶ್ವರಪ್ಪಗೆ ಟಿಕೆಟ್ ತಪ್ಪಿಸಲು ಬಿಎಸ್‌ವೈ ಬಣದ ಸಂಚು?

ಬಿ ರೇಣುಕೇಶ್ಬಿ ರೇಣುಕೇಶ್19 Jan 2017 11:26 PM IST
share
ಬ್ರಿಗೇಡ್ ಕಲಹಕ್ಕೆ ಹೊಸ ತಿರುವು

ಶಿವಮೊಗ್ಗ,ಜ.19: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ನಡುವೆ ಏರ್ಪಟ್ಟಿರುವ ಕಲಹ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಇದು ಬಣ ರಾಜಕಾರಣಕ್ಕೂ ಎಡೆ ಮಾಡಿಕೊಟ್ಟಿದ್ದು, ಕೆಲ ಮುಖಂಡರು ಬಿಎಸ್‌ವೈ-ಕೆಎಸ್‌ಇ ಪರ-ವಿರುದ್ಧವಾಗಿ ಹೇಳಿಕೆ ನೀಡಲಾರಂಭಿಸಿದ್ದಾರೆ. ಈ ನಡುವೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ? ಎಂಬ ಚರ್ಚೆಯೂ ಕೂಡ ಮುನ್ನೆಲೆಗೆ ಬಂದಿದೆ. ಕಳೆದ ಹಲವು ವರ್ಷಗಳಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿಕೊಂಡು ಬರುತ್ತಿರುವ ಕೆ.ಎಸ್.ಈಶ್ವರಪ್ಪಅವರಿಗೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪಕ್ಷದಲ್ಲಿಯೇ ಪ್ರತಿಸ್ಪರ್ಧಿಗಳು ಹುಟ್ಟಿಕೊಂಡಿದ್ದಾರೆ.


ವಿಶೇಷವಾಗಿ ಬಿ.ಎಸ್.ಯಡಿಯೂರಪ್ಪಪಾಳೆಯದಲ್ಲಿ ಗುರುತಿಸಿಕೊಂಡಿರುವ ಕೆಲ ನಾಯಕರು ತಾವು ಕೂಡ ಶಿವಮೊಗ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳೆಂದು ಬಹಿರಂಗವಾಗಿಯೇ ಹೇಳಿಕೊಂಡು ಓಡಾಡಲಾರಂಭಿಸಿದ್ದಾರೆ. ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ರಾಜ್ಯಸಭೆ ಸದಸ್ಯ, ಬಿ.ಎಸ್.ಯಡಿಯೂರಪ್ಪ ಪಾಳೆಯದಲ್ಲಿ ಗುರುತಿಸಿಕೊಂಡಿರುವ ಆಯನೂರು ಮಂಜುನಾಥ್ ಅವರು ಶಿವಮೊಗ್ಗ ವಿಾನಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಘೋಷಿಸಿದ್ದಾರೆ. ಈ ಮೂಲಕ ಕೆಎಸ್‌ಇಗೆ ನೇರಾನೇರ ಟಾಂಗ್ ನೀಡುವ ಕೆಲಸ ಮಾಡಿದ್ದಾರೆ.


ಈ ನಡುವೆ ಬಿ.ಎಸ್‌ವೈ ಅವರೇ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಕಳೆದೊಂದು ತಿಂಗಳಿನಿಂದ ದಟ್ಟವಾಗಿ ಹಬ್ಬಿದ್ದವು. ಮತ್ತೊಂದೆಡೆ ಕೆಲ ತಿಂಗಳಿನಿಂದ ಬಿಎಸ್‌ವೈ ಅವರು ಶಿವಮೊಗ್ಗ ನಗರದಲ್ಲಿ ಭರ್ಜರಿಯಾಗಿಯೇ ಸುತ್ತಾಡಲಾರಂಭಿಸಿದ್ದು, ಈ ವದಂತಿಗಳಿಗೆ ಪುಷ್ಟಿ ನೀಡುವಂತಾಗಿತ್ತು. ಮತ್ತೊಂದೆಡೆ ಪಕ್ಷದ ಕೆಲ ಹಿರಿಯ ನಾಯಕರು ಹಾಗೂ ಸ್ಥಳೀಯ ಸಂಘಪರಿವಾರದ ವ ುುಖಂಡರು ಶಿವಮೊಗ್ಗದಿಂದ ಕಣಕ್ಕಿಳಿಯುವ ಕೆಎಸ್‌ಇ ನಿರ್ಧಾರಕ್ಕೆ ಬೆಂಬಲವಾಗಿ ನಿಂತುಕೊಂಡಿದ್ದಾರೆ. ಅಷ್ಟು ಸುಲಭವಾಗಿ ಅವರಿಗೆ ಟಿಕೆಟ್ ನಿರಾಕರಣೆ ಮಾಡಲು ಸಾಧ್ಯವಾಗುವುದಿಲ್ಲ.

ಈ ವಿಷಯದಲ್ಲಿ ಬಿಎಸ್‌ವೈ ಅವರಾಗಲಿ ಅಥವಾ ಇತರ ಮುಖಂಡರಾಗಲಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಆಗುುದಿಲ್ಲ ಎಂಬುದು ಕೆಎಸ್‌ಇ ಬೆಂಬಲಿಗರ ಅಭಿಪ್ರಾಯ. ಮತ್ತೊಂದೆಡೆ ಬಿಎಸ್‌ವೈ ಬಣದಲ್ಲಿ ಗುರುತಿಸಿಕೊಂಡಿರುವ ಆಯನೂರು ಮಂಜುನಾಥ ಅವರು ತಾವು ಕೂಡ ಶಿವಮೊಗ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಘೋಷಿಸಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚು ಮಾಡಿ, ಅಂತಿಮವಾಗಿ ಬಿಎಸ್‌ವೈ ಅವರನ್ನು ಕಣಕ್ಕಿಳಿಸುವ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಟ್ಟಾರೆ ‘ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲೆದರು...’ ಎಂಬ ಮಾತಿನಂತೆ ಬಿಜೆಪಿಯಲ್ಲಿ ಟಿಕೆಟ್ ಕಲಹ ಆರಂಭವಾಗಿದ್ದು, ಶಿವಮೊಗ್ಗ ಕ್ಷೇತ್ರದಿಂದ ಅಖಾಡಕ್ಕಿಳಿಯುವವರ್ಯಾರೆಂಬ ಕುತೂಹಲ ಮೂಡಿಸಿದೆ. ಜೆಡಿಎಸ್ ಪಟ್ಟಿಯಲ್ಲಿ ಎಂ.ಶ್ರೀಕಾಂತ್ ಹೆಸರು
   ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಂ.ಶ್ರೀಕಾಂತ್ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ. ಜೆಡಿಎಸ್ ಈಗಾಗಲೇ ರಾಜ್ಯದ ಹಲವು ವಿಧಾನಸಭಾ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಇದರಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಎಂ.ಶ್ರೀಕಾಂತ್ ಅವರ ಹೆಸರಿದ್ದು, ಬಹುತೇಕ ಅವರು ಕಣಕ್ಕಿಳಿಯುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ವಿಭಾಗೀಯ ಮುಖ್ಯಸ್ಥ ಆಯನೂರು ಮಂಜುನಾಥ್ ರಾಜೀನಾಮೆ!
ಶಿವಮೊಗ್ಗ: ಇತ್ತೀಚೆಗೆ ಕೆ.ಎಸ್. ಈಶ್ವರಪ್ಪವಿರುದ್ಧ ಬಹಿರಂಗ ಟೀಕಾಪ್ರಹಾರ ನಡೆಸಿ ಹರಿಹಾಯ್ದಿದ್ದ ಬಿ.ಎಸ್. ಯಡಿಯೂರಪ್ಪ ಪಾಳೆಯದಲ್ಲಿ ಗುರುತಿ 
 ಸಿಕೊಂಡಿರುವ ರಾಜ್ಯಸಭೆಯ ಮಾಜಿ ಸದಸ್ಯ ಆಯನೂರು ಮಂಜುನಾಥ್, ಬುಧವಾರ ತುಮಕೂರಿನಲ್ಲಿ ಕೆಎಸ್ ಈಶ್ವರಪ್ಪ ಅವರು ಬಿಎಸ್‌ವೈ ವಿರುದ್ಧ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಶಿವಮೊಗ್ಗ-ಚಿಕ್ಕಮಗಳೂರು-ಉತ್ತರ ಕನ್ನಡ ಜಿಲ್ಲಾ ವಿಭಾಗೀಯ ಪ್ರಭಾರಿ ಸ್ಥಾನಕ್ಕೆ ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೇವಡಿ, ವ್ಯಂಗ್ಯಭರಿತ ಮೊನಚು ಮಾತುಗಳಿಂದ ಕೆ.ಎಸ್ ಈಶ್ವರಪ್ಪ ಮತ್ತವರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡರು.
ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುವ ನಿರೀಕ್ಷೆಯಲ್ಲಿದ್ದಾರೆ. ಕಾರ್ಯಕರ್ತರ ನಿರೀಕ್ಷೆ ಕೂಡ ಇದೇ ಆಗಿದೆ. ಆದರೆ ಬಿಎಸ್‌ವೈ ಮುಖ ನೋಡಿ ವೋಟು ಕೊಡುವುದಿಲ್ಲ ಎಂಬ ಕೆಎಸ್‌ಇ ನೀಡಿರುವ ಹೇಳಿಕೆಯನ್ನು ಗಮನಿಸಿದರೆ, ಬಿಎಸ್‌ವೈ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಅಮಿತ್ ಶಾ ಹಾಗೂ ಮೋದಿಯವರ ನಿರ್ಧಾರವೇ ಸರಿಯಿಲ್ಲವೆಂಬಂತಾಗಿದೆ ಎಂದು ಕೆಎಸ್‌ಇ ವಿರುದ್ಧ ಹರಿಹಾಯ್ದರು. ಕೆಎಸ್ ಈಶ್ವರಪ್ಪ ಹಾಗೂ ಅವರ ಜೊತೆಗಿರುವ 24 ಮಂದಿ ಮಾತ್ರ ಪಕ್ಷದ ಸಂಘಟನೆಗೆ ತಲೆಕೆಡಿಸಿಕೊಂಡಿದ್ದಾರೆ. ಅವರೇ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆಂಬ ಭರವಸೆಯ ಮೇರೆಗೆ ಶಿವಮೊಗ್ಗ-ಚಿಕ್ಕಮಗಳೂರು ಹಾಗೂ ಉತ್ತರ ಕರ್ನಾಟಕ ಪ್ರಭಾರಿ ಸ್ಥಾನಕ್ಕೆ ತಾವು ರಾಜೀನಾಮೆ ಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.


ಶಿವಮೊಗ್ಗ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ: ಆಯನೂರು
 ತಾನು ಇದೀಗ ಮಾಜಿ ರಾಜ್ಯಸಭಾ ಸದಸ್ಯನಾಗಿದ್ದೇನೆ. ಹಾಗೆಯೇ ತಾವು ಈ ಹಿಂದೆ ಪ್ರತಿನಿಧಿಸಿಕೊಂಡು ಬರುತ್ತಿದ್ದ ಶಿವಮೊಗ್ಗ ಗ್ರಾಮಾಂತರವು ಮೀಸಲು ಕ್ಷೇತ್ರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆ.ಎಸ್.ಈಶ್ವರಪ್ಪಅವರು ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಅವರ ಅಧಿಕಾರಾವಧಿ ಇನ್ನೂ ಎರಡು ವರ್ಷವಿದೆ. ಎರಡೆರಡು ದೋಣಿಗಳಲ್ಲಿ ಪ್ರಯಾಣ ನಡೆಸಲು ಆಗುವುದಿಲ್ಲ. ಮತ್ತೊಂದೆಡೆ ಹೈಕಮಾಂಡ್ ತಾನೇ, ತನ್ನನ್ನು ಹೊರತುಪಡಿಸಿ ಶಿವಮೊಗ್ಗದಲ್ಲಿ ಪಕ್ಷದಿಂದ ಬೇರೆ ಯಾರೂ ಗೆಲ್ಲಲು ಆಗುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿಕೊಂಡು ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿಯುವ ನಿರ್ಧಾರ ಮಾಡಿದ್ದೇನೆ’ ಎಂದು ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಅವರು ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.

share
ಬಿ ರೇಣುಕೇಶ್
ಬಿ ರೇಣುಕೇಶ್
Next Story
X