Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಪ್ರಜಾಪ್ರಭುತ್ವ...

ದೇಶದಲ್ಲಿ ಪ್ರಜಾಪ್ರಭುತ್ವ ಹಾನಿಗೊಳಗಾಗುತ್ತಿದೆ: ಜಮಾಅತೆ ಇಸ್ಲಾಮೀ ಹಿಂದ್

ವಾರ್ತಾಭಾರತಿವಾರ್ತಾಭಾರತಿ20 Jan 2017 6:07 PM IST
share

ಚೆನ್ನೈ , ಜ.20 : ಜನವರಿ 14-17ರ ವರೆಗೆ ನಾಲ್ಕು ದಿನಗಳ ಕಾಲ ಚೆನ್ನೈಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕೇಂದ್ರ ಸಲಹಾ ಸಮಿತಿ ಸಭೆ ನಡೆಯಿತು.

ಜ.ಇ. ಹಿಂದ್ ರಾಷ್ಟ್ರಾಧ್ಯಕ್ಷರಾದ ಮೌಲಾನ ಜಲಾಲುದ್ದೀನ್ ಉಮರಿಯವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಸಲಹಾ ಸಮಿತಿಯ 18 ಸದಸ್ಯರು ಭಾಗವಹಿಸಿದ್ದರು.

ದೇಶದಲ್ಲಿ ಹಾನಿಗೊಳಗಾಗಿರುವ ಪ್ರಜಾಪ್ರಭುತ್ವ, ಮಾನವ ಹಕ್ಕುಗಳ ಉಲ್ಲಂಘನೆಯ ಘಟನೆಗಳು, ಪ್ರಜಾಸತ್ತಾತ್ಮಕ ಸಂಸ್ಥೆಗಳ ಸ್ವಾಯತ್ತತೆಯ ಅಭಾವ, ರಾಷ್ಟ್ರದ ಆರ್ಥಿಕತೆಯ ಮೇಲೆ ಕಾರ್ಪೋರೇಟ್‌ಗಳ ಅಕ್ರಮ ಪ್ರಾಬಲ್ಯ ಮತ್ತು ನವ ಉದಾರವಾದಿ ಮಾರುಕಟ್ಟೆ ಶಕ್ತಿಗಳ ನಡುವಿನ ಸಂಬಂಧವು ಆತಂಕಕಾರಿಯಾಗಿದೆ ಹಾಗೂ ಕೋಮುವಾದವು ದಬ್ಬಾಳಿಕೆ ಹಾಗೂ ನಿರಂಕುಶ ಪರಿಸ್ಥಿತಿಯೆಡೆಗೆ ರಾಷ್ಟ್ರವನ್ನು ನೂಕುತ್ತಿದೆ ಎಂದು ಸಲಹಾ ಸಮಿತಿ ಸದಸ್ಯರು ಆತಂಕ ವ್ಯಕ್ತಪಡಿಸಿದರು.

"ದೇಶದ ಸಂವಿಧಾನದಲ್ಲಿರುವ ಮೂಲಭೂತ ಮೌಲ್ಯಗಳನ್ನು ವ್ಯವಸ್ಥಿತವಾಗಿ ಹಾಳುಗೆಡವಲಾಗುತ್ತಿದೆ. ಸಂಸ್ಥೆಗಳ ಅಂತರ್ಗತ ಹಿತಾಸಕ್ತಿಗಳನ್ನು ಸರಿ ಹೊಂದಿಸಲು ದೇಶದ ಆರ್ಥಿಕ ನೀತಿಯಲ್ಲಿ ಅನಾರೋಗ್ಯಕರ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಸರಕಾರವು ಮಸೂದೆಗಳ ಪ್ರವೃತ್ತಿಯನ್ನು ಆಶ್ರಯಿಸಿದೆ ಹಾಗೂ ಕೇವಲ 30 ತಿಂಗಳಿನಲ್ಲಿ 23 ಮಸೂದೆಗಳನ್ನು ಜಾರಿಗೊಳಿಸಿದೆ ಎಂದು ಸಮಿತಿಯ ಸದಸ್ಯರು ಅಭಿಪ್ರಾಯಪಟ್ಟರು.

ಸಂವಿಧಾನದಲ್ಲಿ ಉಲ್ಲೇಖಿಸಿದಂತೆ ಮಾನವ ಹಕ್ಕುಗಳನ್ನು ಗೌರವಿಸುವುದು ಹಾಗೂ ಸಂರಕ್ಷಿಸುವುದು ಸರಕಾರದ ಮೂಲಭೂತ ಹಾಗೂ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಭಾರತವು ಕಲ್ಯಾಣ ರಾಷ್ಟ್ರವಾಗಿದೆ. ಶಾಸಕಾಂಗ, ನ್ಯಾಯಾಂಗ, ಆಡಳಿತಶಾಹಿಯ ಜೊತೆಗೆ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ಸರಿಯಾದ ಹಾಗೂ ಪರಿಣಾಮಕಾರಿಯಾದ ಕಾರ್ಯ ನಿರ್ವಹಣೆಯ ಮೇಲೆ ಕಲ್ಯಾಣ ರಾಷ್ಟ್ರವು ಅವಲಂಬಿತವಾಗಿದೆ ಎಂದು ಜಮಾಅತ್ ಇಸ್ಲಾಮಿ ಹಿಂದ್ ಸರಕಾರಕ್ಕೆ ನೆನಪಿಸಿದೆ.

ಅನಾಣ್ಯೀಕರಣದ ಪರಿಣಾಮವನ್ನು ಚರ್ಚಿಸಲಾಯಿತು. ಕಪ್ಪು ಹಣ, ತೆರಿಗೆ ವಂಚನಾ ತೆರಿಗೆ , ಆರ್ಥಿಕ ಅನೀತಿ ಹಾಗೂ ರಾಷ್ಟ್ರದಲ್ಲಾಗುತ್ತಿರುವ ವಂಚನೆಯನ್ನು ತೊಡೆದು ಹಾಕುವ ಅಗತ್ಯವಿದೆ. ಕೇಂದ್ರ ಸರಕಾರದ ಆರ್ಥಿಕ ಅನಾಣ್ಯೀಕರಣವು ತಮ್ಮ ಸ್ವಯಂ ಘೋಷಿತ ಉದ್ದೇಶಗಳನ್ನು ಸಾಕಾರಗೊಳಿಸುವಲ್ಲಿ ವಿಫಲಗೊಂಡಿದ್ದಲ್ಲದೇ, ದೇಶದ ಆರ್ಥಿಕತೆಯು ತುಂಬಲಾರದ ನಷ್ಟ ಅನುಭವಿಸಬೇಕಾಯಿತು. ಜೊತೆಗೆ ಮಿಲಿಯನ್ ಗಟ್ಟಲೆ ಜನರು ಸಂಕಷ್ಟಕ್ಕೆ ಸಿಲುಕಿಕೊಂಡರು ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.

ಈ ನಡೆಯಲ್ಲಿ ಆರ್‌ಬಿಐ ಸ್ವಾಯತ್ತತೆಯ ಮಧ್ಯ ಪ್ರವೇಶಿಸಿದ್ದು ಖಂಡನೀಯ. ದೇಶವನ್ನು ನಗದು ಆರ್ಥಿಕತೆಯಿಂದ, ನಗದು ರಹಿತ ಆರ್ಥಿಕತೆಯನ್ನಾಗಿ ಮಾಡಲು ನಿರ್ಧರಿಸುವ ತನ್ನ ಈ ನಿಲುವನ್ನು ಸರಕಾರವು ಕೈಬಿಡಬೇಕು ಹಾಗೂ ಹೊಸ ನೋಟು ಬಿಡುಗಡೆ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ರಾಷ್ಟ್ರವನ್ನು ಯಥಾ ಸ್ಥಿತಿಗೆ ತರಬೇಕು ಎಂದು ಸಮಿತಿಯು ಸರಕಾರಕ್ಕೆ ಮನವಿ ಮಾಡಿತು.

ಸಿರಿಯಾದಲ್ಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ಅಂತರ್ಯುದ್ಧವು ಹೃದಯವಿದ್ರಾವಕವಾಗಿದೆ. ಈ ಯುದ್ಧದ ಹಿಂದಿರುವ ನೈಜ ಉದ್ದೇಶವು ಆ ಪ್ರದೇಶದಲ್ಲಿರುವ ಹೇರಳವಾದ ನೈಸರ್ಗಿಕ ಸಂಪನ್ಮೂಲಗಳನ್ನು ವಶಪಡಿಸಿಕೊಳ್ಳುವುದಾಗಿದೆ. ಆ ಭಾಗದಲ್ಲಿರುವ ಮುಸ್ಲಿಮ್ ರಾಷ್ಟ್ರಗಳು ಸಿರಿಯಾದ ಜೊತೆಗೆ ಸಂಬಂಧವನ್ನು ಬಲಪಡಿಸಬೇಕು. ಶಾಂತಿ ಹಾಗೂ ವಿಶ್ವ ಭ್ರಾತೃತ್ವಕ್ಕಾಗಿ ಶ್ರಮಿಸಬೇಕು. ತತ್‌ಕ್ಷಣ ವಿದೇಶಿ ಸೈನ್ಯಗಳನ್ನು ಸಿರಿಯದಿಂದ ಹಿಂಪಡೆಯಬೇಕು. ವಿವಿಧ ದೇಶಗಳಲ್ಲಿ ನೆಲೆಸಿರುವ ಸಿರಿಯಾದ ನಿರಾಶ್ರಿತರನ್ನು ಅವರ ನಾಡಿಗೆ ಹಿಂತಿರುಗಿಸಬೇಕು. ಸಿರಿಯದಲ್ಲಿ ಪ್ರಜಾಪ್ರಭುತ್ವದ ಪ್ರಶಾಂತ ವಾತಾವರಣವನ್ನು ಸೃಷ್ಟಿಸಲು ಶ್ರಮಿಸಬೇಕು ಎಂದು ಜಮಾಅತೆ ಇಸ್ಲಾಮೀ ಹಿಂದ್ ಕೇಂದ್ರ ಸಲಹಾ ಸಮಿತಿ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X