Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಣಾಳಿಕೆಯ 125 ಭರವಸೆಗಳು ಈಡೇರಿವೆ:...

ಪ್ರಣಾಳಿಕೆಯ 125 ಭರವಸೆಗಳು ಈಡೇರಿವೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ20 Jan 2017 8:10 PM IST
share
ಪ್ರಣಾಳಿಕೆಯ 125 ಭರವಸೆಗಳು ಈಡೇರಿವೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಶಿವಮೊಗ್ಗ, ಜ.20 : ಅಧಿಕಾರಕ್ಕೆ ಬರುವಾಗ ಜನರಿಗೆ ನೀಡಿದ ಆಶ್ವಾಸನೆಯ 165 ಭರವಸೆಗಳಲ್ಲಿ ಈಗಾಗಲೇ 125 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಸೇರಿದಂತೆ ವಿವಿಧ ಇಲಾಖೆಗಳಿಂದ ಶುಕ್ರವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಈ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಪ್ರಣಾಳಿಕೆಯಲ್ಲಿ 165 ಭರವಸೆಗಳನ್ನು ಜನರಿಗೆ ನೀಡಲಾಗಿತ್ತು. ಅದರಂತೆ ಈವರೆಗೆ 125 ಭರವಸೆಗಳನ್ನು ಈಡೇರಿಸಲಾಗಿದ್ದು ಇನ್ನುಳಿದ ಅವಧಿಯಲ್ಲಿ ಇನ್ನು ಹಲವು ಜನಪರ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಅವರು ತಿಳಿಸಿದರು.

ಪ್ರತಿ ವರ್ಷದ ಬಜೆಟ್ ಮಂಡಿಸುವ ಮುನ್ನ ಪ್ರಣಾಳಿಕೆಯ ಭರವಸೆಗಳನ್ನು ಮುಂದಿಟ್ಟುಕೊಂಡೇ ಸಿದ್ಧತೆ ಮಾಡಲಾಗುವುದು. ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಚಾಚೂ ತಪ್ಪದೆ ಈಡೇರಿಸಿದ ಹೆಗ್ಗಳಿಕೆ ನಮ್ಮದು. ನುಡಿದಂತೆ ನಡೆದ ಸರ್ಕಾರ ನಮ್ಮದು ಎಂದು ಹೇಳಿದರು.

ಎಲ್ಲಾ ಜಾತಿ ವರ್ಗದ ಬಡವರಿಗೆ ಸಾಮಾಜಿಕ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಎಲ್ಲ ಸಮುದಾಯದ ದುರ್ಬಲರಿಗೆ ಸಮಾಜಿಕ ಮತ್ತು ಆರ್ಥಿಕ ಸ್ವಾವಲಂಬನೆ ಸಿಕ್ಕಾಗ ಮಾತ್ರ ಆ ಸರ್ಕಾರದ ಉದ್ದೇಶ ಈಡೇರುತ್ತದೆ. ಅದರಂತೆ ನಾವು ನುಡಿದಂತೆ ನಡೆದಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಸಮಾಜದಲ್ಲಿ ಸಮಾನತೆ ಬರಬೇಕು ಎಂಬುದು ಹೊಸ ವಿಚಾರವಲ್ಲ.  ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಅಂದೇ ಹೇಳಿದ್ದರು. ಅದರಂತೆ ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಎಲ್ಲ ಸರ್ಕಾರಗಳ ಜವಾಬ್ದಾರಿ . ಅದರಂತೆ ನಾವು ನಡೆದುಕೊಂಡಿದ್ದೇವೆ ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ ಹಲವಾರು ಅಭಿವೃದ್ಧಿಗಳು ಆಗಬೇಕಿದೆ. ಸ್ಥಳೀಯ ಶಾಸಕರು ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ತಂದಿದ್ದಾರೆ. ಅವರ ಬೇಡಿಕೆಯಂತೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಹಂತ ಹಂತವಾಗಿ ಎಲ್ಲ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಈ ಭಾಗದ ರೈತರ ಬಗ್ಗೆ ಅಪಾರ ಕಾಳಜಿ. ಅರಣ್ಯ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನ ಆಗಬೇಕು, ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಭೂಮಿಯಲ್ಲಿ ಮನೆನಿರ್ಮಿಸಿಕೊಂಡವರಿಗೆ ಹಕ್ಕು ಪತ್ರ ನೀಡಬೇಕು, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು, ವೈದ್ಯರ ನೇಮಕಾತಿ ಆಗಬೇಕು, ಅರಣ್ಯ ಇಲಾಖೆಯಿಂದ ರೈತರಿಗೆ ತೊಂದರೆ ಆಗಬಾರದು ಎಂಬುದು ಅವರ ಕಳಕಳಿ. ಅದಂತೆ ಅವರ ಎಲ್ಲ ಆಶಯದಂತೆ ಸರ್ಕಾರ ನಡೆದುಕೊಳ್ಳುತ್ತಿದೆ. ಇತ್ತೀಚೆಗೆ ಗೋಮಾಳದ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನ  ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ತಾವು ಸಚಿವರಾಗಿ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯ ಗ್ರಾಮಾಂತರ ಪ್ರದೇಶದ 94ಸಿ 5367 ಹಾಗೂ ನಗರ ಭಾಗದ 94ಸಿಸಿ 2 ಸಾವಿರ ಅ ದಾರರಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ಫೆ.21ರವರೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದೆ. ಅಲ್ಲದೆ 12 ಸಾವಿರ ಬಗರ್ಹುಕುಂ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗಿದೆ. ಅರಣ್ಯ ಹಕ್ಕು ಕಾಯ್ದೆಯ 89 ಸಾವಿರ ಅರ್ಜಿ  ಬಾಕಿ ಇದ್ದು ಇವರಿಗೂ ಹಕ್ಕುಪತ್ರಗಳನ್ನು ಕೊಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ದುಡಿಯುವ ಕೈಗೆ ಉದ್ಯೋಗ ಕೊಡಬೇಕು. ಈ ನಿಟ್ಟಿನಲ್ಲಿ ಯುವಕರಿಗಾಗಿ ಜಿಲ್ಲೆಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಯೋಗ ಮೇಳದ ಲಾಂಚನ ಬಿಡುಗಡೆಗೊಳಿಸಿದರು.

ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಮುಖ್ಯ ಅತಿಥಿಯಾಗಿದ್ದರು. ಸ್ಥಳೀಯ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಕ್ರೀಡಾ ಸಚಿವ ಪ್ರಮೋದ ಮಧ್ವರಾಜ್, ಶಾಸಕರಾದ ಆರ್.ಪ್ರಸನ್ನಕುಮಾರ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಕಾಡಾ ಅಧ್ಯಕ್ಷ ಸುಂದರೇಶ್, ಸೂಡಾ ಅಧ್ಯಕ್ಷ ಕೆ.ಎಂ.ಉಸ್ಮಾನ್, ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಎಸ್.ಕೆ.ಮರಿಯಪ್ಪ, ಜಿಲ್ಲಾಧಿಕಾರಿ ಎಂ.ಲೋಕೇಶ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಭಿನವ ಖರೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X