ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು, ಜ.21: ನಗರದ ಕಾಲೇಜೊಂದರ ಅಂತಿಮ ಬಿಬಿಎಂ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಪಾಂಡೇಶ್ವರ ನ್ಯೂರೋಡ್‌ನ ಯಶಸ್ವಿನಿ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮನೆಯ ಕೋಣೆಯ ್ಯಾನ್‌ಗೆ ಶಾಲನ್ನು ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಈಕೆಗೆ ಬಂಟ್ವಾಳದ ಯುವಕನೋರ್ವನೊಂದಿಗೆ ಮದುವೆ ನಡೆಸಲು ಮಾತುಕತೆ ನಡೆಸಲಾಗಿತ್ತು. ಪದವಿ ಬಳಿಕ ಮದುವೆ ನಡೆಸುವುದಾಗಿ ನಿರ್ಧರಿಸಲಾಗಿತ್ತು. ಆದರೆ, ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮದುವೆಯಾಗಬೇಕಿದ್ದ ಯುವಕ ತೀರಿಕೊಂಡಿದ್ದ ಹಿನ್ನೆಲೆಯಲ್ಲಿ ಈಕೆ ತೀವ್ರ ನೊಂದಿಕೊಂಡಿದ್ದಳು. ಇದರಿಂದಲೇ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





