Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರವಿವಾರ ಮೂರನೆ, ಅಂತಿಮ ಏಕದಿನ: ಸರಣಿ...

ರವಿವಾರ ಮೂರನೆ, ಅಂತಿಮ ಏಕದಿನ: ಸರಣಿ ವೈಟ್‌ವಾಶ್‌ನತ್ತ ಭಾರತದ ಚಿತ್ತ

ವಾರ್ತಾಭಾರತಿವಾರ್ತಾಭಾರತಿ21 Jan 2017 11:09 PM IST
share
ರವಿವಾರ ಮೂರನೆ, ಅಂತಿಮ ಏಕದಿನ: ಸರಣಿ ವೈಟ್‌ವಾಶ್‌ನತ್ತ ಭಾರತದ ಚಿತ್ತ

ಕೋಲ್ಕತಾ, ಜ.21: ಆತಿಥೇಯ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯ ಐತಿಹಾಸಿಕ ಈಡನ್‌ಗಾರ್ಡನ್ಸ್ ಸ್ಟೇಡಿಯಂನಲ್ಲಿ ರವಿವಾರ ನಡೆಯಲಿದ್ದು, ಕೊಹ್ಲಿ ಪಡೆ ಕ್ಲೀನ್‌ಸ್ವೀಪ್ ಸಾಧಿಸುವತ್ತ ಕಣ್ಣಿಟ್ಟಿದೆ. ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿಗೆ ಮೊದಲು ಭಾರತಕ್ಕೆ ಇದು ಕೊನೆಯ ಏಕದಿನ ಪಂದ್ಯವಾಗಿದೆ.

ದೀರ್ಘ ಸಮಯದಿಂದ ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ಗೆಲುವಿನ ಬರ ಎದುರಿಸುತ್ತಿದೆ. ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ಆಂಗ್ಲರು ಏಕದಿನ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಸೋತಿದ್ದಾರೆ. ರವಿವಾರ ನಡೆಯಲಿರುವ ಕೊನೆಯ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ.

ಭಾರತದ ಹಳೆ ಹುಲಿಗಳಾದ ಯುವರಾಜ್ ಸಿಂಗ್ ಹಾಗೂ ಮಹೇಂದ್ರ ಸಿಂಗ್ ಧೋನಿ ದ್ವಿತೀಯ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ಭಾರತ 15 ರನ್‌ಗಳ ರೋಚಕ ಗೆಲುವು ಸಾಧಿಸಲು ನೆರವಾಗಿದ್ದರು.

ಕಟಕ್‌ನಲ್ಲಿ ನಡೆದ 2ನೆ ಏಕದಿನ ಪಂದ್ಯದಲ್ಲಿ ಗೆಲ್ಲಲು 382 ರನ್ ಕಠಿಣ ಗುರಿ ಪಡೆದಿದ್ದ ಇಯಾನ್ ಮೋರ್ಗನ್ ನೇತೃತ್ವದ ಇಂಗ್ಲೆಂಡ್ ಕೊನೆಯ ತನಕ ಹೋರಾಟ ನಡೆಸಿದ್ದರೂ ಗೆಲುವು ಕೈತಪ್ಪಿತ್ತು. ಕಳೆದ ಪಂದ್ಯದಲ್ಲಿ ಮೋರ್ಗನ್ 81 ಎಸೆತಗಳಲ್ಲಿ 102 ರನ್ ಗಳಿಸಿ ಆಕ್ರಮಣಕಾರಿ ಪ್ರದರ್ಶನ ನೀಡಿದ್ದರು.

ಪುಣೆಯಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ 351 ರನ್ ಗುರಿ ಪಡೆದಿದ್ದ ಭಾರತ ನಾಯಕ ವಿರಾಟ್ ಕೊಹ್ಲಿ ಹಾಗೂ ಕೇದಾರ್ ಜಾಧವ್ ಅವರ ಅಮೋಘ ಆಟದ ನೆರವಿನಿಂದ ಯಶಸ್ವಿಯಾಗಿ ಚೇಸಿಂಗ್ ಮಾಡಿತ್ತು.

 ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ತನ್ನ ಹಿಂದಿನ ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ. ಧವನ್ ಕಳೆದೆರಡು ಪಂದ್ಯಗಳಲ್ಲಿ 1 ಹಾಗೂ 11 ರನ್ ಗಳಿಸಿದ್ದಾರೆ. ಫಾರ್ಮ್‌ನಲ್ಲಿರುವ ಅಜಿಂಕ್ಯ ರಹಾನೆ ಅವಕಾಶಕ್ಕಾಗಿ ಕಾಯುತ್ತಿರುವ ಕಾರಣ ಭಾರತ ಧವನ್ ಕಳಪೆ ಫಾರ್ಮ್‌ನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

 ಇನ್ನೋರ್ವ ಆರಂಭಿಕ ಆಟಗಾರ ಕೆಎಲ್ ರಾಹುಲ್ ಇನ್ನಷ್ಟೇ ಟೆಸ್ಟ್ ಕ್ರಿಕೆಟ್‌ನಲ್ಲಿ ತೋರಿರುವ ಪ್ರದರ್ಶನವನ್ನು ಪುನರಾವರ್ತಿಸಬೇಕಾಗಿದೆ. ರಾಹುಲ್ ಮೊದಲೆರಡು ಏಕದಿನಗಳಲ್ಲಿ ಕ್ರಮವಾಗಿ 8 ಹಾಗೂ 5 ರನ್ ಗಳಿಸಿದ್ದರು.

ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಆರಂಭಿಕ ಆಟಗಾರನಾಗಿರುವ ಕನ್ನಡಿಗ ರಾಹುಲ್ ಸ್ಥಿರ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿದ್ದಾರೆ. ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಪಂದ್ಯದಲ್ಲಿ ಒಂದೂ ವಿಕೆಟ್ ಪಡೆಯದೇ 60 ರನ್ ಬಿಟ್ಟುಕೊಟ್ಟು ದುಬಾರಿಯಾಗಿದ್ದರು. ಕಟಕ್‌ನಲ್ಲಿ ಉಮೇಶ್ ಯಾದವ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಭುವನೇಶ್ವರ ಕುಮಾರ್ ಡೆತ್ ಓವರ್‌ನಲ್ಲಿ ಬಿಗಿ ಬೌಲಿಂಗ್ ಮಾಡುತ್ತಿದ್ದಾರೆ.

ಕಟಕ್ ಪಂದ್ಯದಲ್ಲಿ ರನ್ ಹೊಳೆ ಹರಿದಿದ್ದು, ಒಟ್ಟು 747 ರನ್ ದಾಖಲಾಗಿತ್ತು. ಭಾರತಕ್ಕೆ ಸಮಬಲದ ಹೋರಾಟ ನೀಡಲು ವಿಫಲವಾಗುತ್ತಿರುವ ಇಂಗ್ಲೆಂಡ್ ಈಗಾಗಲೇ ಏಕದಿನ ಸರಣಿಯನ್ನು 2-0 ಅಂತರದಿಂದ ಕಳೆದುಕೊಂಡಿತ್ತು. ಇಂಗ್ಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್ ಅಲೆಕ್ಸ್ ಹೇಲ್ಸ್ ಬಲಗೈ ಮುರಿತಕ್ಕೆ ಒಳಗಾಗಿದ್ದು, ಹೇಲ್ಸ್ ಬದಲಿಗೆ ಜಾನಿ ಬೈರ್‌ಸ್ಟೋವ್ ಮೂರನೆ ಪಂದ್ಯದಲ್ಲಿ ಆಡಲಿದ್ದಾರೆ.

ಪಿಚ್ ಹಾಗೂ ವಾತಾವರಣ

ಎರಡು ವರ್ಷಗಳ ಹಿಂದೆ ಭಾರತ ಈಡನ್‌ಗಾರ್ಡನ್ಸ್‌ನಲ್ಲಿ ಕೊನೆಯ ಬಾರಿ ಏಕದಿನ ಪಂದ್ಯ ಆಡಿದ್ದು,ಆ ಪಂದ್ಯದಲ್ಲಿ ರೋಹಿತ್ ಶರ್ಮ 264 ರ್ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಗಾಯದ ಸಮಸ್ಯೆಯಿಂದಾಗಿ ರೋಹಿತ್ ಈಗ ತಂಡದಲ್ಲಿಲ್ಲ. ರಣಜಿ ಋತುವಿನಲ್ಲಿ ಈಡನ್ ಪಿಚ್‌ನಲ್ಲಿ ತಂಡಗಳು 59, 81, 90 ಹಾಗೂ 200 ರನ್ ಗಳಿಸಿ ಆಲೌಟಾಗಿವೆ. ಪಿಚ್ ಕಟಕ್‌ಗಿಂತ ಹೆಚ್ಚು ಹಸಿರಿನಿಂದ ಕೂಡಿದೆ. ಎರಡೂ ತಂಡದ ಬೌಲರ್‌ಗಳು ಮತ್ತೊಮ್ಮೆ 700ಕ್ಕೂ ಅಧಿಕ ರನ್ ಬಿಟ್ಟುಕೊಡದಿರುವ ವಿಶ್ವಾಸದಲ್ಲಿದ್ದಾರೆ.

ಅಂಕಿ-ಅಂಶ:

* ಇಂಗ್ಲೆಂಡ್ ತಂಡ ಈಡನ್‌ಗಾರ್ಡನ್ಸ್‌ನಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಸೋತಿದೆ.

*ಕಟಕ್ ಏಕದಿನದಲ್ಲಿ ಎಂಎಸ್ ಧೋನಿ 9000ಕ್ಕೂ ಅಧಿಕ ರನ್ ಗಳಿಸಿದ ಭಾರತದ ಐದನೆ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು.

*ಯುವರಾಜ್ ಸಿಂಗ್ 14ನೆ ಶತಕ ಬಾರಿಸಲು ಆರು ವರ್ಷ ತೆಗೆದುಕೊಂಡಿದ್ದರು. 2011ರ ವಿಶ್ವಕಪ್‌ನಲ್ಲಿ ಕೊನೆಯ ಬಾರಿ ಶತಕ ಬಾರಿಸಿದ್ದರು.

  ಭಾರತ: ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ಯುವರಾಜ್ ಸಿಂಗ್, ಎಂಎಸ್ ಧೋನಿ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಆರ್.ಅಶ್ವಿನ್, ಜಸ್‌ಪ್ರಿತ್ ಬುಮ್ರಾ, ಭುವನೇಶ್ವರ ಕುಮಾರ್, ಅಜಿಂಕ್ಯ ರಹಾನೆ, ಮನೀಷ್ ಪಾಂಡೆ, ಉಮೇಶ್ ಯಾದವ್, ಅಮಿತ್ ಮಿಶ್ರಾ.

ಇಂಗ್ಲೆಂಡ್: ಇಯಾನ್ ಮೊರ್ಗನ್(ನಾಯಕ), ಜೇಸನ್ ರಾಯ್, ಜೋ ರೂಟ್, ಜೋಸ್ ಬಟ್ಲರ್(ವಿಕೆಟ್‌ಕೀಪರ್), ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಲಿಯಾಮ್ ಪ್ಲಂಕೆಟ್, ಜಾಕ್ ಬಾಲ್, ಸ್ಯಾಮ್ ಬಿಲ್ಲಿಂಗ್ಸ್, ಲಿಯಾಮ್ ಡಾಸನ್, ಜಾನಿ ಬೈರ್‌ಸ್ಟೋವ್, ಆದಿಲ್ ರಶೀದ್.

ಪಂದ್ಯ ಆರಂಭದ ಸಮಯ: ಮಧಾಹ್ನ 1:30.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X