Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಎಂಆರ್‌ಪಿಎಲ್‌ಗೆ ಬಲತ್ಕಾರದ ಭೂಸ್ವಾಧೀನ...

​ಎಂಆರ್‌ಪಿಎಲ್‌ಗೆ ಬಲತ್ಕಾರದ ಭೂಸ್ವಾಧೀನ ಇಲ್ಲ: ಸಚಿವ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ21 Jan 2017 11:11 PM IST
share
​ಎಂಆರ್‌ಪಿಎಲ್‌ಗೆ ಬಲತ್ಕಾರದ ಭೂಸ್ವಾಧೀನ ಇಲ್ಲ: ಸಚಿವ ದೇಶಪಾಂಡೆ

ಮಂಗಳೂರು, ಜ.21: ನಾಲ್ಕನೆ ಹಂತದಲ್ಲಿ ಎಂಆರ್‌ಪಿಎಲ್ ವಿಸ್ತರಣೆಗಾಗಿ ಭೂಮಿಯನ್ನು ಬಲತ್ಕಾರದಿಂದ ಸ್ವಾಧೀನಪಡಿಸುವುದಿಲ್ಲ ಎಂದು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ.

ಕದ್ರಿಯ ಮಂಜುನಾಥ ಕ್ಷೇತ್ರದಲ್ಲಿ ಶನಿವಾರ ರಜತ ದ್ವಾರ ಸಮರ್ಪಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

ಭೂಮಿಯನ್ನು ಸ್ವಾಧೀನಪಡಿಸುವ ಪ್ರಕ್ರಿಯೆಗೆ ರೈತರಿಂದ ವಿರೋಧ ವ್ಯಕ್ತವಾಗಿರುವುದು ತನ್ನ ಗಮನಕ್ಕೆ ಬಂದಿದೆ. ಆದರೆ ಯಾವ ಕಾರಣಕ್ಕೂ ಬಲತ್ಕಾರದ ಭೂಸ್ವಾಧೀನವಿಲ್ಲ. ಏನೇ ಇದ್ದರೂ ರೈತರು, ಭೂಮಿಯ ಮಾಲಕರ ವಿಶ್ವಾಸವನ್ನು ತೆಗೆದುಕೊಳ್ಳಲಾಗುವುದು. ಅವರಿಗೆ ಯೋಗ್ಯ ಪರಿಹಾರ ನೀಡಿ ಭೂಮಿಯನ್ನು ಪಡೆಯಲು ಪ್ರಯತ್ನಿಸಲಾಗುವುದು ಎಂದು ದೇಶಪಾಂಡೆ ನುಡಿದರು.

ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ಸರಕಾರಕ್ಕಿದೆ. ರೈತರು ಮತ್ತು ಜನತೆಗೆ ಮಾರಕವಾದ ಕೈಗಾರಿಕೆಗಳ ಅನುಷ್ಠಾನಕ್ಕೆ ಸರಕಾರ ಮುಂದಾಗುವುದಿಲ್ಲ. ಎಂಆರ್‌ಪಿಎಲ್ ವಿಸ್ತರಣೆಗಾಗಿ ಕಾಯ್ದೆ ಉಲ್ಲಂಘಿಸಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿಲ್ಲ. 1996-97ರಲ್ಲಿ ಎಂಆರ್‌ಪಿಎಲ್ ಸ್ಥಾಪನೆಯ ವೇಳೆಯೂ ಪರ- ವಿರೋಧ ಕೇಳಿ ಬಂದಿದ್ದರೂ ಅನುಷ್ಠಾನಗೊಂಡಿದೆ. ದೇಶ ಮತ್ತು ರಾಜ್ಯ ಅಭಿವೃದ್ಧಿಗೆ ಕೈಗಾರಿಕೆಗಳು ಅನಿವಾರ್ಯವಾಗಿದೆ ಎಂದು ದೇಶಪಾಂಡೆ ಹೇಳಿದರು.

 ಪ್ರಸ್ತುತ ವಿಸ್ತರಣೆಗಾಗಿ ಎಂಆರ್‌ಪಿಎಲ್ 25 ಸಾವಿರ ಕೋ.ರೂ. ಹೂಡಿಕೆ ಮಾಡಿದೆ. ಈ ಬಗ್ಗೆ ಭೂಸ್ವಾಧೀನಕ್ಕಾಗಿ ಕೆಐಎಡಿಬಿ ನೋಟಿಫಿಕೇಶನ್ ಮಾಡಲಾಗಿದೆ. ಜಮೀನು ಕಳೆದುಕೊಳ್ಳುವ ಸಂತ್ರಸ್ತರಿಗೆ ಕಾನೂನು ರೀತಿಯಲ್ಲಿ ಪರಿಹಾರ ನೀಡಲಾಗುವುದು. ಸ್ಥಳೀಯರಿಗೆ ಉದ್ಯೋಗ ನೀಡಲು ಪ್ರಯತ್ನುಸಲಾಗುವುದು ಎಂದು ದೇಶಪಾಂಡೆ ಹೇಳಿದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಪ್ರವಾಸಿ ಭಾರತ ಕಾರ್ಯಕ್ರಮ ಯಶಸ್ವಿಯಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮೆಚ್ಚುಗೆ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ಬರಲಾಗಲ ತೀವ್ರಗೊಂಡಿದೆ. ಬರ ಪರಿಹಾರಕ್ಕಾಗಿ ರಾಜ್ಯ ಸರಕಾರ ಕೇಂದ್ರದಿಂದ 4,700 ಕೋ.ರೂ. ಅನುದಾನ ಕೇಳಿತ್ತು. ಆದರೆ ಕೇಂದ್ರ ಕೇವಲ 1,787 ಕೋ. ರೂ. ಮಾತ್ರ ನೀಡಿದೆ ಎಂದರು.

 ರಾಜ್ಯದ 17 ವಿಶ್ವವಿದ್ಯಾಲಯಗಳಲ್ಲಿ ಅಂದಾಜು 500 ಕೋ.ರೂ. ಅವ್ಯವಹಾರ ನಡೆದಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ದೇಶಪಾಂಡೆ ಈ ಬಗ್ಗೆ ತನಿಖೆ ನಡೆಸಿದರೆ ಸತ್ಯಾಂಶ ಹೊರಬೀಳಲಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಾಗಿದೆ ಎಂದರು.


 ತಮಿಳುನಾಡಿನ ಜಲ್ಲಿಕಟ್ಟುಗೆ ಸುಗ್ರಿವಾಜ್ಞೆ ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಕೇಂದ್ರ ಸರಕಾರ ಅನುಮೋದ ನೀಡಿದಂತೆ ರಾಜ್ಯದ ಕಂಬಳ ಸಮಸ್ಯೆಯ ಬಗ್ಗೆಯೂ ಸುಗ್ರಿವಾಜ್ಞೆ ಜಾರಿಗೊಳಿಸಬೇಕಾದರೆ ಸೂಕ್ತ ಬೇಡಿಕೆಯನ್ನು ಸಲ್ಲಿಸುವ ಅಗತ್ಯವಿದೆ. ಆ ಬಳಿಕ ಈ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X