Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ಸಕ್ರಿಯವಾಗಿವೆ ’ಹನಿ...

ಶಿವಮೊಗ್ಗದಲ್ಲಿ ಸಕ್ರಿಯವಾಗಿವೆ ’ಹನಿ ಟ್ರ್ಯಾಪ್’ ತಂಡಗಳು!

ಜಾಲಕ್ಕೆ ಸಿಲುಕಿ ಪರಿತಪಿಸುತ್ತಿರುವ ಹಲವು ಮಂದಿ?

ವಾರ್ತಾಭಾರತಿವಾರ್ತಾಭಾರತಿ21 Jan 2017 11:32 PM IST
share

ಶಿವಮೊಗ್ಗ, ಜ.21: ಬೆಂಗಳೂರಿನಂತಹ ಮಹಾನಗರಗಳಲ್ಲಿ ಕಂಡುಬರುತ್ತಿದ್ದ ‘ಹನಿ ಟ್ರ್ಯಾಪ್’ ನಂತಹ ದಂಧೆ ಶಿವಮೊಗ್ಗದಂತಹ ನಗರಗಳಿಗೂ ವ್ಯಾಪಿಸಿರುವುದು ಇತ್ತೀಚೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಿಂದ ಬಯಲಾಗಿದೆ. ಹಾಗೆಯೇ ‘ಹನಿ ಟ್ರ್ಯಾಪ್’ ದಂಧೆ ನಡೆಸುವ ಹಲವು ತಂಡಗಳು ಶಿವಮೊಗ್ಗ ನಗರ ಹಾಗೂ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವ ಮಾಹಿತಿಗಳು ಕೇಳಿಬರ ಲಾರಂಭಿಸಿವೆ!
ಈ ಜಾಲದವರ ಕೈಗೆ ಸಿಲುಕಿ ಹಲವರು ಭಾರೀ ಪ್ರಮಾಣದಲ್ಲಿ ಹಣ ಕಳೆದುಕೊಂಡಿದ್ದಾರೆನ್ನಲಾಗಿದೆ. ಈ ಜಾಲಕ್ಕೆ ಸಿಲುಕಿದ ಬಹುತೇಕರು ಎಲ್ಲಿ ತಮ್ಮ ಸೆಕ್ಸ್ ವೀಡಿಯೊ ಬಹಿರಂಗವಾಗಲಿದೆಯೋ ಎಂಬ ಆತಂಕದಿಂದ, ಮಾನ-ಮರ್ಯಾದೆಗೆ ಅಂಜಿ ಪೊಲೀಸರ ಗಮನಕ್ಕೆ ತರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಈ ದಂಧೆ ನಡೆಸುವವರು ನಿರಾತಂಕವಾಗಿ ತಮ್ಮ ಕೃತ್ಯ ನಡೆಸಿಕೊಂಡು ಹೋಗುತ್ತಿದ್ದಾರೆ!
ಗೊತ್ತಿರಲಿಲ್ಲ!: ಶಿವಮೊಗ್ಗ ನಗರದಲ್ಲಿ ‘ಹನಿ ಟ್ರ್ಯಾಪ್’ ದಂಧೆ ಸಕ್ರಿಯವಾಗಿರುವ ಬಗ್ಗೆ ನಾಗರಿಕರಿಗಿರಲಿ ಸ್ವತಃ ಪೊಲೀಸ್ ಇಲಾಖೆಗೂ ಮಾಹಿತಿಯಿರಲಿಲ್ಲ. ಕಳೆದ ಕೆಲ ವಾರಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯ ನರ್ಸ್‌ವೊಬ್ಬರು ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಿಸಿದ್ದರು. ‘ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಹೊಂದಿದ ವ್ಯಕ್ತಿಯೋರ್ವ ಇದನ್ನು ವೀಡಿಯೊ ಚಿತ್ರೀಕರಣ ಮಾಡಿಕೊಂಡು ಬ್ಲ್ಯಾಕ್‌ಮೇಲ್ ನಡೆಸುತ್ತಿದ್ದಾನೆ. ತಾನು ಹೇಳಿದ ಪುರುಷರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸುತ್ತಿ್ದಾನೆ’ ಎಂದು ನರ್ಸ್ ಪೊಲೀಸರಿಗೆ ದೂರಿದ್ದರು. ಇದರ ಆಧಾರದ ಮೇಲೆ ಪೊಲೀಸರು ನರ್ಸ್ ಆರೋಪಿಸಿದ್ದ ವ್ಯಕ್ತಿ ಸೇರಿದಂತೆ ಮೂವರನ್ನು ಬಂಧಿಸಿದ್ದರು. ಈ ವೇಳೆ ಆರೋಪಿಗಳು ಕಳೆದ ಕೆಲ ವರ್ಷಗಳಿಂದ ಗುಪ್ತವಾಗಿ ‘ಹನಿ ಟ್ರ್ಯಾಪ್’ ದಂಧೆ ನಡೆಸಿಕೊಂಡು ಬರುತ್ತಿರುವುದು ಬೆಳಕಿಗೆ ಬಂದಿತ್ತು. ಈ ದಂಧೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರದ ಕೆಲವರು ಭಾಗಿಯಾಗಿದ್ದು ಪೊಲೀಸರಿಗೆ ಗೊತ್ತಾಗಿತ್ತು. ಶಿವಮೊಗ್ಗ ನಗರದಲ್ಲಿ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅತ್ತ ನೆರೆಯ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ‘ಹನಿ ಟ್ರ್ಯಾಪ್’ ತಂಡವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಇಬ್ಬರು ಮಹಿಳೆಯರನ್ನು ಕೂಡ ಅಲ್ಲಿನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಅಲ್ಲಿನ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಇನ್ನಷ್ಟು ಜನರನ್ನು ಬಂಧಿಸಲು ಮುಂದಾಗಿದ್ದಾರೆ.


ಏನಿದು ದಂಧೆ?: ‘ಹನಿ ಟ್ರ್ಯಾಪ್’ ತಂಡದಲ್ಲಿರುವ ಯುವತಿ - ಮಹಿಳೆಯರು ಕಾರ್ಯಕ್ರಮ ಸೇರಿದಂತೆ ವಿವಿಧೆಡೆ ಹಣವಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಳ್ಳುತ್ತಾರೆ. ತದನಂತರ ಇವರೊಂದಿಗೆ ಸಲಿಗೆ ಬೆಳೆಸಿಕೊಂಡು ತಾವಿರುವ ಸ್ಥಳಗಳಿಗೆ ಆಹ್ವಾನಿಸುತ್ತಾರೆ. ಅವರೊಂದಿಗೆ ನಡೆಸುವ ಲೈಂಗಿಕ ಚಟುವಟಿಕೆಯನ್ನು ಮೊದಲೇ ಕೋಣೆಯೊಂದರಲ್ಲಿ ಅಳವಡಿಸಿರುವ ಗುಪ್ತ ಕ್ಯಾಮರಾಗಳ ಮೂಲಕ ಸೆರೆ ಹಿಡಿಯುತ್ತಾರೆ. ನಂತರ ಸೆಕ್ಸ್ ದೃಶ್ಯಾವಳಿಗಳನ್ನು ಬಹಿರಂಗಪಡಿಸುವ ಬೆದರಿಕೆ ಹಾಕಿ, ಹಣಕ್ಕೆ ಬ್ಲ್ಯಾಕ್‌ಮೇಲ್ ನಡೆಸುತ್ತಾರೆ. ಇಂತಹ ಕೃತ್ಯಗಳಿಗೆ ‘ಹನಿ ಟ್ರ್ಯಾಪ್’ ಎಂದು ಹೆಸರಿಡಲಾಗಿದೆ. ಈ ತಂಡದಲ್ಲಿರುವ ಯುವತಿಯರು, ಮಹಿಳೆಯರ ಹಿಂದೆ ದೊಡ್ಡ ತಂಡವೇ ಕಾರ್ಯನಿರ್ವಹಣೆ ಮಾ
 ಗಿರಾಕಿಗಳನ್ನು ಹುಡುಕಿ ತರಲು ‘ಪಿಂಪ್’ಗಳು ಇದ್ದಾರೆ! ತಮ್ಮದೆ ಆದ ನೆಟ್‌ವರ್ಕ್ ರಚಿಸಿಕೊಂಡು ಅತ್ಯಂತ ಗುಪ್ತವಾಗಿ ಈ ತಂಡಗಳು ಕಾರ್ಯನಿರ್ವಹಣೆ ಮಾಡುತ್ತಿ ರುತ್ತವೆ. ದೊಡ್ಡ ಮಟ್ಟದಲ್ಲಿ ಹಣದ ವ್ಯವಹಾರ ನಡೆಸುತ್ತವೆ. ಹನಿ ಟ್ರ್ಯಾಪ್ ಜಾಲಕ್ಕೆ ಸಿಲುಕಿದವರು ಎಲ್ಲಿ ತಮ್ಮ ಸೆಕ್ಸ್ ವೀಡಿಯೊ ಬಯಲಾಗುವುದೋ ಎಂಬ ಆತಂಕ, ಮಾನ-ಮರ್ಯಾದೆಗೆ ಹೆದರಿ ಮಾಹಿತಿಯನ್ನು ಹೊರ ಹಾಕುವುದಿಲ್ಲ.

ಪೊಲೀಸರ ಗಮನಕ್ಕೆ ತರುವುದಿಲ್ಲ. ಜಾಲದವರು ಕೇಳಿದಷ್ಟು ಹಣ ಕೊಟ್ಟು ಸುಮ್ಮನಾಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ದಂಧೆಕೋರರು ಭಾರೀ ಪ್ರಮಾಣದಲ್ಲಿ ‘ಹನಿ ಟ್ರ್ಯಾಪ್’ ದಂಧೆಗಿಳಿದಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಕಷ್ಟಿದ್ದಾರೆ: ಶಿವಮೊಗ್ಗ ನಗರದಲ್ಲಿ ಹಲವು ಪ್ರಭಾವಿಗಳು, ಹಣವಂತರು ಈ ಜಾಲಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹಲವು ‘ಹನಿ ಟ್ರ್ಯಾಪ್’ ತಂಡಗಳು ಕಾರ್ಯಾಚರಿಸುತ್ತಿರುವ ಮಾಹಿತಿ ಕೇಳಿಬರುತ್ತಿದೆ. ಪೊಲೀಸರ ವಿಸ್ತೃತ ತನಿಖೆಯ ನಂತರವಷ್ಟೇ ಈ ತಂಡಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X