ಪುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಪುತ್ತೂರು,ಜ.23: ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ)ದ ಅಧ್ಯಕ್ಷರಾಗಿ ಪ್ರಸಾದ್ ಕೌಶಲ್ ಶೆಟ್ಟಿ ಅವರು ಭಾನುವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪುಡಾದ ನಿಕಟಪೂರ್ವ ಅಧ್ಯಕ್ಷ ಬೆಟ್ಟ ಈಶ್ವರ ಭಟ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಫಝ್ಲುಲ್ ರಹೀಂ, ಪ್ರಧಾನ ಕಾರ್ಯದರ್ಶಿ ಮಹೇಶ್ ರೈ ಅಂಕೊತ್ತಿಮಾರ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶ್ರೀರಾಂ ಪಕ್ಕಳ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Next Story





