ಜ.26: ಗಣರಾಜ್ಯೋತ್ಸವ ದಿನಾಚರಣೆ
ಮಂಗಳೂರು, ಜ.23: ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವು ಜ.26ರಂದು ಬೆಳಗ್ಗೆ 9ಗಂಟೆಗೆ ಆಚರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಬಳಿಕ ಆಕರ್ಷಕ ಪಥಸಂಚಲನ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸರ್ವೋತ್ತಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





