Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುಟ್ಟ ಬ್ರೆಡ್,ಹುರಿದ...

ಸುಟ್ಟ ಬ್ರೆಡ್,ಹುರಿದ ಅಲೂಗಡ್ಡೆಯಿಂದಕ್ಯಾನ್ಸರ್ ಅಪಾಯ ?

ವಾರ್ತಾಭಾರತಿವಾರ್ತಾಭಾರತಿ24 Jan 2017 12:31 PM IST
share
ಸುಟ್ಟ ಬ್ರೆಡ್,ಹುರಿದ ಅಲೂಗಡ್ಡೆಯಿಂದಕ್ಯಾನ್ಸರ್ ಅಪಾಯ ?

ಲಂಡನ್, ಜ.24: ಸುಟ್ಟ ಟೋಸ್ಟ್, ಅತಿಯಾಗಿ ರೋಸ್ಟ್ ಮಾಡಲ್ಪಟ್ಟ ಆಲೂಗಡ್ಡೆ ಹಾಗೂ ಅತಿ ಉಷ್ಣಾಂಶದಲ್ಲಿ ಬೇಯಿಸಿದ ಸ್ಟಾರ್ಚ್ ಯುಕ್ತ ಆಹಾರ ಪದಾರ್ಥಗಳನ್ನು ಸೇವಿಸಿದವರಲ್ಲಿ ಕ್ಯಾನ್ಸರ್ ಅಪಾಯ ಹೆಚ್ಚಾಗಿರುತ್ತದೆ ಎಂದು ಸಂಶೋಧನೆಯ ಮೂಲಕ ತಿಳಿದು ಬಂದ ಹಿನ್ನೆಲೆಯಲ್ಲಿ ಇಂಗ್ಲೆಂಡಿನ ಫುಡ್ ಸ್ಟ್ಯಾಂಡರ್ಡ್ ಏಜೆನ್ಸಿ ಈ ನಿಟ್ಟಿನಲ್ಲಿ ಜಾಗೃತಿ ಅಭಿಯಾನವೊಂದನ್ನು ಹಮ್ಮಿಕೊಂಡಿದೆ.

ಪ್ರಾಣಿಗಳ ಮೇಲೆ ನಡೆಸಲಾದ ಈ ಪರೀಕ್ಷೆಯಲ್ಲಿ ಕ್ಯಾನ್ಸರ್ ಅಪಾಯ ಹೆಚ್ಚೆಂದು ಕಂಡು ಬಂದಿದ್ದರೂ ಮನುಷ್ಯರಲ್ಲೂ ಇಷ್ಟೇ ಅಪಾಯವುಂಟಾಗಬಹುದೆಂಬುದು ಇನ್ನೂ ಸಾಬೀತಾಗಿಲ್ಲ.

ಇಲಿಗಳ ಮೇಲೆ ನಡೆಸಲಾದ ಪರೀಕ್ಷೆಯಲ್ಲಿ ಅಕ್ರಿಲಮೈಡ್ ಎಂಬ ಕಂಪೌಂಡ್ ಅತ್ಯಧಿಕವಾಗಿದ್ದಲ್ಲಿ ಕ್ಯಾನ್ಸರ್ ಅಪಾಯ ಹೆಚ್ಚೆಂದು ಕಂಡು ಬಂದಿದೆ. ಇದೇ ಅಕ್ರಿಲಮೈಡ್ ನಿಂದಾಗಿ ಬ್ರೆಡ್ ಹಾಗೂ ಬಟಾಟೆಗಳನ್ನು ಕರಿದಾಗ, ಟೋಸ್ಟ್ ಮಾಡಿದಾಗ ಅವುಗಳು ಕಂದು ಬಣ್ಣಕ್ಕೆ ತಿರುಗುತ್ತವೆ. ಗ್ಲುಕೊಸ್ ಅಂಶವು ಅಸ್ಪರಗಿನ್ ಎಂಬ ಅಮಿನೊ ಆಸಿಡ್ ನೊಂದಿಗೆ ಸೇರಿದಾಗಹಾಗೂ ಈ ಆಹಾರ ಪದಾರ್ಥಗಳನ್ನು 120 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಿನ ಉಷ್ಣಾಂಶದಲ್ಲಿ ಬೇಯಿಸಿದಾಗ ಅಕ್ರಿಲಮೈಡ್ ಉಂಟಾಗುತ್ತದೆ.

ತುಂಬಾ ಹೊತ್ತು ಬೇಯಿಸಿದಾಗ ಅಥವಾ ಟೋಸ್ಟ್ ಮಾಡಿದಾಗ ಈ ಆಹಾರ ಪದಾರ್ಥಗಳು ಗೋಲ್ಡನ್ ಬಣ್ಣದಿಂದ ಕಂದು ಬಣ್ಣಕ್ಕೆ ಹಾಗೂ ನಂತರ ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಹೀಗೆ ಹೆಚ್ಚು ಹೆಚ್ಚು ಅಕ್ರಿಲಮೈಡ್ ಉತ್ಪತ್ತಿಗೊಂಡಾಗ ಕ್ಯಾನ್ಸರ್ ಉಂಟಾಗುವ ಅಪಾಯವೂ ಹೆಚ್ಚುತ್ತಾ ಹೋಗುತ್ತದೆ, ಎಂದು ತಜ್ಞರು ವಿವರಿಸುತ್ತಾರೆ.

ಜನರು ಟೋಸ್ಟ್ ಅಥವಾ ಬೇರ್ಯಾವುದೇ ಸ್ಟಾರ್ಚ್ ಯುಕ್ತ ಆಹಾರ ಕಪ್ಪು ಬಣ್ಣಕ್ಕೆ ತಿರುಗುವ ತನಕ ಕರಿಯಬಾರದು ಎಂದೂ ತಜ್ಞರು ಸಲಹೆ ನೀಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X