Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ...

ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ ಎಟಿಎಂ ದರೋಡೆ

21 ಲಕ್ಷಕ್ಕೂ ಅಧಿಕ ಹಣ ದೋಚಿ ಡಕಾಯಿತರು ಪರಾರಿ

ವಾರ್ತಾಭಾರತಿವಾರ್ತಾಭಾರತಿ24 Jan 2017 5:39 PM IST
share
ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ ಎಟಿಎಂ ದರೋಡೆ

ತುಮಕೂರು, ಜ.24: ಬ್ಯಾಂಕ್‌ವೊಂದರ ಎಟಿಎಂ ಕೇಂದ್ರಕ್ಕೆ ನುಗ್ಗಿರುವ ಶಸ್ತ್ರಸಜ್ಜಿತ ನಾಲ್ಕು ಮಂದಿ ಮುಸುಕುಧಾರಿ ವ್ಯಕ್ತಿಗಳು ಭದ್ರತಾ ಸಿಬ್ಬಂದಿಯನ್ನು ಕಟ್ಟಿಹಾಕಿ ಎಟಿಎಂನಲ್ಲಿದ್ದ ಹಣದ ಬಾಕ್ಸ್ ಒಡೆದು ಸುಮಾರು 21 ಲಕ್ಷಕ್ಕೂ ಅಧಿಕ ನಗದನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ನಗರದ ಗುಬ್ಬಿ ಗೇಟ್ ಬಳಿ ಮಂಗಳವಾರ ಮಧ್ಯರಾತ್ರಿ ಬಳಿಕ ನಡೆದಿದೆ.

ಇಲ್ಲಿನ ಗುಬ್ಬಿಗೇಟ್‌ನ ಬೈಪಾಸ್ ಬಳಿ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್‌ನ ಎಟಿಎಂ ಕೇಂದ್ರಕ್ಕೆ ರಾತ್ರಿ 3 ಗಂಟೆಯಲ್ಲಿ ಶಸ್ತ್ರಸಜ್ಜಿತ ಮುಸುಕುಧಾರಿ ನಾಲ್ಕು ಮಂದಿ ದರೋಡೆಕೋರರ ಪೈಕಿ ಇಬ್ಬರು ನುಗ್ಗಿ ಎಟಿಎಂ ಕೇಂದ್ರದಲ್ಲಿ ಭದ್ರತಾ ಸಿಬ್ಬಂದಿ ಗಂಗಣ್ಣನನ್ನು ಬೆದರಿಸಿ ಕಟ್ಟಿಹಾಕಿ ಎಟಿಎಂ ಯಂತ್ರದ ಸಿಕ್ರೇಟ್ ಲಾಕ್‌ನಿಂದ ಹಣದ ಬಾಕ್ಸ್‌ನ್ನು ತೆಗೆದು ಅದರಲ್ಲಿದ್ದ 2 ಸಾವಿರ ಮುಖಬೆಲೆಯ 11 ಲಕ್ಷ 16 ಸಾವಿರ ರೂ., 100 ಮುಖ ಬೆಲೆಯ 2 ಲಕ್ಷ 82 ಸಾವಿರದ ಮುನ್ನೂರು ರೂ. ಹಾಗೂ 500 ಮುಖ ಬೆಲೆಯ 7 ಲಕ್ಷ 70 ಸಾವಿರ ರೂ. ನಗದನ್ನು ದೋಚಿಕೊಂಡು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾರೆನ್ನಲಾಗಿದೆ.

ನಗರಠಾಣೆ ಪಿಎಸ್ಸೈ ಉಮಾಶಂಕರ್ ಮತ್ತು ಸಿಬ್ಬಂದಿ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾಪಂತ್, ಅಡಿಷನಲ್ ಎಸ್ಪಿ ಜಿ.ಬಿ.ಮಂಜುನಾಥ್, ಡಿವೈಎಸ್ಪಿ ಚಿದಾನಂದ ಸ್ವಾಮಿ, ನಗರ ಸರ್ಕಲ್ ಇನ್‌ಸ್ಪೆಕ್ಟರ್ ಗಂಗಲಿಂಗಯ್ಯ, ತಿಲಕ್‌ಪಾರ್ಕ್ ಸರ್ಕಲ್ ಇನ್‌ಸ್ಪೆಕ್ಟರ್ ರಾಘವೇಂದ್ರ ಮತ್ತವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸಹ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತುಮಕೂರು ತಾಲೂಕಿನ ಮಲ್ಲಪ್ಪನಪಾಳ್ಯ ವಾಸಿ ಗಂಗಣ್ಣ ಭದ್ರತಾ ಸಿಬ್ಬಂದಿಯಾಗಿ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 3 ಗಂಟೆ ಸುಮಾರಿಗೆ ಡಕಾಯಿತರು ಬಂದು ನನ್ನನ್ನು ಕಟ್ಟಿ ಹಾಕಿ ಈ ಕೃತ್ಯವೆಸಗಿದ್ದಾರೆಂದು ಪೊಲೀಸರಿಗೆ ತಿಳಿಸಿದ್ದಾನೆ. ಆದರೆ ಪೊಲೀಸರ ಪ್ರಕಾರ ನಿನ್ನೆ ಸಂಜೆ 4 ಗಂಟೆಯಲ್ಲಿ ಎಟಿಎಂ ಕೇಂದ್ರಕ್ಕೆ ಗನ್‌ಮನ್ ಹಾಗೂ ಕಂಪೆನಿ ವ್ಯವಸ್ಥಾಪಕ ಸೇರಿದಂತೆ ನಾಲ್ಕು ಮಂದಿ ಬಂದು ಎಟಿಎಂಗೆ ಹಣ ತುಂಬಿದ್ದ ವ್ಯಕ್ತಿಗಳೇ ನಕಲಿ ಕೀ ಬಳಸಿ ಭದ್ರತಾ ಸಿಬ್ಬಂದಿಯನ್ನು ಬಳಸಿಕೊಂಡು ಎಟಿಎಂ ಕೇಂದ್ರದ ಬಾಗಿಲು ತೆರೆದು ಸಿಕ್ರೇಟ್ ಲಾಕ್‌ನಿಂದ ಎಟಿಎಂ ಯಂತ್ರವನ್ನು ತೆರೆದು ಈ ಕೃತ್ಯವೆಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಎಟಿಎಂ ಕೇಂದ್ರದ ಒಳಗೆ ಮತ್ತು ಹೊರಗಡೆ ಅಳವಡಿಸಲಾಗಿರುವ ಸಿಸಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಎಸ್ಪಿ ಇಶಾಪಂತ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪರಿಶೀಲಿಸುತ್ತಿದ್ದು, ದರೋಡೆ ಬಗ್ಗೆ ಅಲ್ಪಸ್ವಲ್ಪ ಮಾಹಿತಿ ಲಭ್ಯವಾಗಿದ್ದು, ಡಕಾಯಿತರನ್ನು ಶೀಘ್ರವಾಗಿ ಪತ್ತೆಹಚ್ಚುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾಪಂತ್ ತಿಳಿಸಿದ್ದಾರೆ.

ನಾಲ್ವರು ಪೊಲೀಸರ ವಶಕ್ಕೆ:

ಸೆಕ್ಯೂರಿಟಿ ಗಾರ್ಡ್‌ಗಳಾದ ರವೀಶ್, ಗಂಗಣ್ಣ ಮತ್ತು ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಬಂದಿದ್ದ ಮಹೇಶ್, ಅಶ್ವತ್ಥ ಎಂಬವರನ್ನು ಈಗಾಗಲೇ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಸಿದ್ದಾರೆ. ಈ ಪ್ರಕರಣದ ಬಗ್ಗೆ ಸಿಸಿ ಕ್ಯಾಮೆರಾ ದೃಶ್ಯಾವಳಿಯಿಂದ ಸಾಕಷ್ಟು ಮಾಹಿತಿ ಲಭ್ಯವಾಗಿದ್ದು , ಶೀಘ್ರವೇ ಆರೋಪಿಗಳನ್ನು ಪತ್ತೆಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X