ಕಂಬಳದ ನಿಷೇಧ ತೆರವಿನ ಬಗ್ಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದೇನು ?

ಮಂಗಳೂರು, ಜ.24 : ತಮಿಳುನಾಡು ಸರ್ಕಾರ ಕೈಗೊಂಡ ಕ್ರಮಗಳ ರೀತಿಯಲ್ಲೇ ಕರ್ನಾಟಕವೂ ಕಂಬಳದ ವಿಷಯದಲ್ಲಿ ಪ್ರಯತ್ನಿಸಿದರೆ ಕೇಂದ್ರ ಸರ್ಕಾರ ಅದಕ್ಕೆ ಸ್ಪಂದಿಸಲಿದೆ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ.
ಕಂಬಳದ ಬಗ್ಗೆ ಕೋರ್ಟ್ ತಡೆಯಾಜ್ಞೆ ಹಿನ್ನೆಲೆಯಲ್ಲಿ ಪ್ರಕರ್ತರ ಪ್ರಶ್ನೆಗೆ ಅವರು ಈ ಮೇಲಿನಂತೆ ಉತ್ತರಿಸಿದರು.
ಸ್ಥಳೀಯ ಜನಪದ ಆಚರಣೆಗಳ ಬಗ್ಗೆ ಕೇಂದ್ರ ಸರಕಾರ ಗೌರವ ಹೊಂದಿದೆ . ಕರ್ನಾಟಕದ ಕಂಬಳದ ಬಗ್ಗೆ ಮೋದಿ ಸರಕಾರ ಗೌರವ ಇರಿಸಿದೆ. ಈ ಬಗ್ಗೆ ರಾಜ್ಯ ಸರಕಾರ ಕೈಗೊಳ್ಳುವ ನಿರ್ಣಯಕ್ಕೆ ಕೇಂದ್ರ ಸರಕಾರ ಮುಕ್ತವಾಗಿ ಸ್ಪಂದಿಸಲಿದೆ ಎಂದು ಅವರು ತಿಳಿಸಿದರು ಎಂದು ತಿಳಿದು ಬಂದಿದೆ.
Next Story





