ಕಂಬಳ ಮೇಲಿನ ನಿಷೇಧ ತೆರವಿಗೆ ಬಿಜೆಪಿ ಮನವಿ

ಮಂಗಳೂರು , ಜ.24 : ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಅವರನ್ನು ಭೇಟಿ ಮಾಡಿ ಕಂಬಳ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿತು.
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕಂಬಳ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
Next Story





