ಕಾರವಾರದಲ್ಲಿ ಅಕ್ರಮ ಗಾಂಜಾ ಪತ್ತೆ: ಆರೋಪಿ ವಶಕ್ಕೆ
ಕಾರವಾರ,ಜ.24:ಮನೆಯಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ ಸುಮಾರು 11 ಕೆ.ಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ಜಿಲ್ಲೆಯ ಹಳಿಯಾಳ ತಾಲೂಕಿನ ಸಾಂಬ್ರಾಣಿ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಮಹಾಬಲೇಶ್ವರ ಕಲಾಲ ಎಂಬಾತನನ್ನು ಅಬಕಾರಿ ಇಲಾಖೆಯವರು ಬಂಧಿಸಿದ್ದಾರೆ.
ಇನ್ನೊಬ್ಬ ಆರೋಪಿ ಮಧುಕೇಶ್ವರ ಕಲಾಲ ಪರಾರಿಯಾಗಿದ್ದಾನೆ. ಆರೋಪಿಯಿಂದ ಒಟ್ಟು 3 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ ಮನೆಯಲ್ಲಿ ಅಕ್ರಮವಾಗ ಸಂಗ್ರಹಿಸಿಟ್ಟ ಮದ್ಯ ಜಪ್ತಿ ಮಾಡಿಕೊಂಡಿದ್ದು, ಸಾಗುವಾನಿ ಕಟ್ಟಿಗೆಯನ್ನು ವಶಕ್ಕೆ ಪಡೆದ ಅಬಕಾರಿ ಇಲಾಖೆಯ ಸಿಬ್ಬಂದಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ತಲೆಮರೆಸಿಕೊಂಡಿರುವ ಮಧುಕೇಶ್ವರ ಕಲಾಲನನ್ನು ಅಬಕಾರಿ ಇಲಾಖೆಯವರು ಬಲೆ ಬೀಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ಅಧಿಕಾರಿ ಮಂಜುನಾಥ ಅರೇಗುಳಿ ಹಾಗೂ ಸಿಬ್ಬಂದಿ ಇದ್ದರು.
Next Story





