Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಿಂದ ಪೆಪ್ಸಿ, ಕೋಕ ಕೋಲ ಔಟ್ ?

ತಮಿಳುನಾಡಿನಿಂದ ಪೆಪ್ಸಿ, ಕೋಕ ಕೋಲ ಔಟ್ ?

ಜಲ್ಲಿಕಟ್ಟು ಚಳುವಳಿ ಫಲಶ್ರುತಿ

ವಾರ್ತಾಭಾರತಿವಾರ್ತಾಭಾರತಿ25 Jan 2017 10:14 AM IST
share
ತಮಿಳುನಾಡಿನಿಂದ ಪೆಪ್ಸಿ, ಕೋಕ ಕೋಲ ಔಟ್ ?

ಚೆನ್ನೈ, ಜ.25: ಜಲ್ಲಿಕಟ್ಟು ಕ್ರೀಡೆಯ ವಿರುದ್ಧದ ನಿಷೇಧವನ್ನು ರದ್ದುಗೊಳಿಸಿ ಅದನ್ನು ಅನುಮತಿಸುವ ಮಸೂದೆಯನ್ನು ತಮಿಳುನಾಡಿನ ವಿಧಾನಸಭೆ ಅಂಗೀಕರಿಸಿದ ಮರುದಿನವೇ ರಾಜ್ಯದಎರಡು ಅತಿ ದೊಡ್ಡ ವಾಣಿಜ್ಯ ಸಂಘಟನೆಗಳು ತಮ್ಮ ಸದಸ್ಯರುಗಳಿಗೆ ಪೆಪ್ಸಿ ಹಾಗೂ ಕೋಕ ಕೋಲ ಕಂಪೆನಿಗಳ ಉತ್ಪನ್ನಗಳನ್ನು ಮಾರಾಟ ಮಾಡಬಾರದೆಂದು ಹೇಳಿದೆ.

‘‘ನಮ್ಮ ಸಂಘಟನೆಯಲ್ಲಿ 15 ಲಕ್ಷಕ್ಕೂ ಅಧಿಕ ಸದಸ್ಯರಿದ್ದು ಅವರೆಲ್ಲರಿಗೂ ಪೆಪ್ಸಿ ಹಾಗೂ ಕೋಕ ಕೋಲ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಹೇಳಿದ್ದೇವೆ,’’ ಎಂದು ತಮಿಳು ನಾಡು ವನಿಗರ್ ಸಂಘಂ ಅಧ್ಯಕ್ಷ ವಿಕ್ರಮ್ ರಾಜ ಹೇಳಿದ್ದಾರೆ. ಈ ಸಂಘಟನೆ ಹೊರತಾಗಿ ತಮಿಳುನಾಡು ಟ್ರೇಡರ್ಸ್ ಫೆಡರೇಶನ್ ಕೂಡ ಇದೇ ಘೋಷಣೆ ಮಾಡಿದೆ.‘‘ಇದೊಂದು ನಿಷೇಧವಲ್ಲ. ಬದಲಾಗಿ ನಾವು ಆ ಕಂಪೆನಿಗಳ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಸದಸ್ಯರಿಗೆ ಹೇಳಿದ್ದೇವೆ ಅಷ್ಟೇ,’’ ಎಂದು ಫೆಡರೇಶನ್ ಅಧ್ಯಕ್ಷ ವೆಲ್ಲಯ್ಯನ್‌ಹೇಳಿದ್ದಾರೆ.

ಈ ಫೆಡರೇಶನ್ ಅಧೀನದಲ್ಲಿ ಸುಮಾರು 6000 ಸಣ್ಣ ಸಂಘಟನೆಗಳಿದ್ದು ಮೇಲಿನೆರಡು ಕಂಪೆನಿಗಳ ಯಾವೊಂದು ಉತ್ಪನ್ನವನ್ನೂ ಮಾರಾಟ ಮಾಡದಂತೆ ಅದು ಎಲ್ಲಾ ಸದಸ್ಯರಿಗೆ ತಾಕೀತು ಮಾಡಿದೆ. ‘‘ನಮಗೆ ಯಾವುದೇ ಉತ್ಪನ್ನಗಳನ್ನು ನಿಷೇಧಿಸುವ ಅಧಿಕಾರವಿಲ್ಲದೇ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಉತ್ಪನ್ನಗಳನ್ನು ನಿಷೇಧಿಸುವುದು ಸರಕಾರದ ಕರ್ತವ್ಯ. ಆದರೆ ಸರಕಾರ ಈ ಕ್ರಮ ಕೈಗೊಳ್ಳದೇ ಇರುವುದರಿಂದ ನಾವುಈ ಬಗ್ಗೆ ತೀರ್ಮಾನಿಸಿದ್ದೇವೆ,’’ ಎಂದು ವೆಲ್ಲಯ್ಯನ್ ಹೇಳಿದ್ದಾರೆ.

ಚೆನ್ನೈನ ಮರೀನಾ ಬೀಚಿನಲ್ಲಿ ಇತ್ತೀಚೆಗೆ ಜಲ್ಲಿಕಟ್ಟು ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪ್ರತಿಭಟನಾಕಾರರು ಈ ಉತ್ಪನ್ನಗಳನ್ನು ನಿಷೇಧಿಸಬೇಕೆಂದು ಬೇಡಿಕೆಯಿಟ್ಟಿದ್ದರು.

ಈ ಎರಡು ಸಂಘಟನೆಗಳ ಕರೆಯಂತೆ ಅವುಗಳ ಸದಸ್ಯರು ಪೆಪ್ಸಿ, ಕೋಕ ಕೋಲ ಉತ್ಪನ್ನಗಳ ಮಾರಾಟ ನಿಲ್ಲಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X