Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎರಡು ತಿಂಗಳಿಗೊಮ್ಮೆ ಪಡಿತರಕ್ಕೆ ಚಿಂತನೆ:...

ಎರಡು ತಿಂಗಳಿಗೊಮ್ಮೆ ಪಡಿತರಕ್ಕೆ ಚಿಂತನೆ: ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ25 Jan 2017 6:27 PM IST
share
ಎರಡು ತಿಂಗಳಿಗೊಮ್ಮೆ ಪಡಿತರಕ್ಕೆ ಚಿಂತನೆ: ಸಚಿವ ಖಾದರ್

ಮಂಗಳೂರು, ಜ. 25: ರೇಷನ್ ಪಡೆಯಲು ಗ್ರಾಹಕರ ಅಲೆದಾಟವನ್ನು ತಪ್ಪಿಸುವ ಸಲುವಾಗಿ ಎರಡು ಅಥವಾ ಮೂರು ತಿಂಗಳ ಪಡಿತರವನ್ನು ಒಮ್ಮೆಲೆ ವಿತರಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಈ ಯೋಜನೆ ಜಾರಿಗೆ ಪ್ರಯತ್ನಿಸುವುದಾಗಿ ಹೇಳಿದರು.

ಮುಂದಿನ ವಾರದಲ್ಲಿ ಬಿಪಿಎಲ್ ಕಾರ್ಡ್

ಪಡಿತರ ಚೀಟಿ ಗೊಂದಲವನ್ನು ಶಾಶ್ವತವಾಗಿ ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ತೆಗೆದುಕೊಂಡ ದಿಟ್ಟ ನಿರ್ಧಾರ ಯಶಸ್ಸು ಕಾಣುತ್ತಿದೆ. ಆನ್‌ಲೈನ್ ಮೂಲಕ ಎಪಿಎಲ್ ಕಾರ್ಡ್‌ದಾರರ ದಾಖಲಾತಿ ಆರಂಭಗೊಂಡು ರಾಜ್ಯದಲ್ಲಿ ಇದುವರೆಗೆ 32,148 ಎಪಿಎಲ್ ಕುಟುಂಬಗಳು ಹೊಸ ಪದ್ಥತಿಯ ಮುಖೇನ ಕಾರ್ಡುಗಳನ್ನು ಪಡೆದುಕೊಂಡಿವೆ. ದ.ಕ.ಜಿಲ್ಲೆಯೊಂದರಲ್ಲಿಯೇ 1,898 ಕುಟುಂಬಗಳು ಎಪಿಎಲ್ ಕಾರ್ಡ್ ಪಡೆದಿವೆ. ಇದೀಗ ಮುಂದಿನ ವಾರದಲ್ಲಿ ಬಿಪಿಎಲ್ ಕಾರ್ಡ್‌ಗಳನ್ನು ಕೂಡ ಆನ್‌ಲೈನ್ ಮೂಲಕ ಪಡೆಯುವ ವ್ಯವಸ್ಥೆಗೆ ಚಾಲನೆ ನೀಡಲಾಗುವುದು ಎಂದು ಸಚಿವ ಖಾದರ್ ತಿಳಿಸಿದರು.

ಮುಂದಿನ ತಿಂಗಳಿನಿಂದ ತೊಗರಿ ಬೇಳೆ

ಬಿಪಿಎಲ್ ಕಾರ್ಡ್‌ದಾರರಿಗೆ ಈಗ ವಿತರಿಸಲಾಗುತ್ತಿರುವ ಪಡಿತರದ ಜೊತೆಗೆ 1 ಕೆಜಿ ತೊಗರಿ ಬೇಳೆ ಅಥವಾ ಹಸಿರು ಕಾಳುವನ್ನು ಸಬ್ಸಿಡಿ ದರದಲ್ಲಿ ಮುಂದಿನ ತಿಂಗಳಿನಿಂದ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಸನ್‌ಫ್ಲವರ್ ಆಯಿಲ್ ವಿತರಿಸಲು ನಿರ್ಧರಿಸಲಾಗಿದ್ದು, ಪ್ರಸ್ತುತ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.31ರಂದು ಚಾಲನೆ ನೀಡಲಿದ್ದಾರೆ ಎಂದವರು ತಿಳಿಸಿದರು.

ಮುಕ್ತ ಮಾರುಕಟ್ಟೆಯಲ್ಲಿ ಬಿಳಿ ಸೀಮೆ ಎಣ್ಣೆ ಬಿಳಿ ಸೀಮೆ ಎಣ್ಣೆಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಆದೇಶ ನೀಡಲಾಗಿದೆ. ಉಜ್ವಲ ಯೋಜನೆಯಡಿ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರುವ ಸೀಮೆಎಣ್ಣೆ ಕಡಿಮೆಯಾಗುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಬಿಳಿ ಸೀಮೆಎಣ್ಣೆ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಆಯಾ ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ಮಾರಾಟಗಾರರು ಪರವಾನಿಗೆಯನ್ನು ಪಡೆದುಕೊಳ್ಳಬಹುದು ಎಂದರು.

ಕಂಬಳ: ಅಗತ್ಯಬಿದ್ದರೆ ಸುಗ್ರೀವಾಜ್ಞೆಗೆ ಚಿಂತನೆ

ಕಂಬಳ ಮತ್ತು ಯಕ್ಷಗಾನ ಕರಾವಳಿ ಸಂಸ್ಕೃತಿಯ ಎರಡು ಕಣ್ಣುಗಳಿದ್ದಂತೆ. ಅದನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಂಬಳ ಪರವಾಗಿದ್ದು, ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಚಂತನೆ ಇದೆ ಎಂದು ಖಾದರ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಕಂಬಳ ಪರವಾಗಿ ಮಾತಾಡಿದ್ದಾರೆ. ಯಾವುದೇ ಅಡ್ಡಿ, ಆತಂಕಗಳು ಎದುರಾದರೆ ಸುಗ್ರೀವಾಜ್ಞೆ ಹೊರಡಿಸುವುದಕ್ಕೂ ಮುಂದಾಗಲಿದ್ದಾರೆ. ಜ.31ರಂದು ಹೊರ ಬರಲಿರುವ ಕೋರ್ಟ್ ತೀರ್ಪು ಕಂಬಳ ಪರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X