Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಧಾರ್ ಆಧಾರಿತ ನಗದು ರಹಿತ ಪಾವತಿ ಆರ್ಥಿಕ...

ಆಧಾರ್ ಆಧಾರಿತ ನಗದು ರಹಿತ ಪಾವತಿ ಆರ್ಥಿಕ ವ್ಯವಹಾರದ ವಿಸ್ತರಣೆಗೆ ಕ್ರಮ : ರವಿಶಂಕರ ಪ್ರಸಾದ್

ಡಿಜಿಧನ್ ಮೇಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ25 Jan 2017 9:05 PM IST
share
ಆಧಾರ್ ಆಧಾರಿತ ನಗದು ರಹಿತ ಪಾವತಿ ಆರ್ಥಿಕ ವ್ಯವಹಾರದ ವಿಸ್ತರಣೆಗೆ ಕ್ರಮ : ರವಿಶಂಕರ ಪ್ರಸಾದ್

ಮಂಗಳೂರು.ಜ.25:  ಆಧಾರ್ ಆಧಾರಿತ ನಗದು ರಹಿತ ಡಿಜಿಟಲ್ ಪಾವತಿಯನ್ನು ವ್ಯಾಪಾರ,  ಮಾರುಕಟ್ಟೆ ಕೈಗಾರಿಕೆ ಸೇರಿದಂತೆ ದೇಶದ ಎಲ್ಲಾ ರಂಗಗಳಲ್ಲಿಯೂ ವಿಸ್ತರಿಸುವ ಯೋಜನೆಯನ್ನು ಸರಕಾರ ಹೊಂದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಸಚಿವ ರವಿ ಶಂಕರ ಪ್ರಸಾದ್ ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದೊಂದಿಗೆ ನಗರದ ಪುರಭವನದಲ್ಲಿ ಇಂದು ಹಮ್ಮಿಕೊಂಡ ಡಿಜಿಧನ್ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮುಂದಿನ ದಿನಗಳಲ್ಲಿ ಬೆರಳಿನ ಗುರುತು ದಾಖಲಿಸಿ ಆರ್ಥಿಕ ವ್ಯವಹಾರ ನಡೆಸಲು ಅನುಕೂಲವಾಗುವ ರೀತಿಯಲ್ಲಿ ಡಿಜಿಟಲ್ ಪಾವತಿ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುವುದು. ಮಂಗಳೂರಿನಲ್ಲಿ 30ನೆ ಡಿಜಿಧನ್ ಮೇಳ ಮತ್ತು ಲಕ್ಕಿ ಗ್ರಾಹಕ ಯೋಜನೆಯ ಲಕ್ಕಿಡ್ರಾ ನಡೆದಿದೆ. ಇದುವರೆಗೆ 5ಲಕ್ಷ ಗ್ರಾಹಕರಿಗೆ 6 ಕೋಟಿ ರೂ. ಗಳನ್ನು ನೀಡಲಾಗಿದೆ. ಭಾರತದಲ್ಲಿ ನೋಟುಗಳ ಅಮಾನ್ಯಗೊಳಿಸಿದ ಸಂದರ್ಭದಲ್ಲಿ ದೇಶದ ಆರ್ಥಿಕ ವ್ಯವಹಾರ ನಗದು ರೂಪದಲ್ಲಿ ನಡೆಯುತ್ತಿತ್ತು. ಆದರೆ ಪ್ರಸಕ್ತ ದೇಶದಲ್ಲಿ ನಗದು ರಹಿತ ಡಿಜಿಟಲ್ ಮೂಲಕ ಆರ್ಥಿಕ ಚಟುವಟಿಕೆ ನಡೆಯುವ ಪ್ರಕ್ರಿಯೆ ಚುರುಕುಗೊಂಡಿದೆ. ದೇಶದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು 500,1000 ನೋಟುಗಳನ್ನು ನಿಷೇಧಿಸಲಾಯಿತು. ಇದರಿಂದ ಭಯೋತ್ಪಾದನೆ, ನಕ್ಸಲ್ ಚಟುವಟಿಕೆ, ಮಾನವ ಕಳ್ಳ ಸಾಗಾಣಿಕೆಗೆ ಕಡಿವಾಣ ಹಾಕಲು ಸಾಧ್ಯವಾಗಿದೆ ಎಂದು ರವಿಶಂಕರ ಪ್ರಸಾದ್ ತಿಳಿಸಿದ್ದಾರೆ.

 ಅಭಿವೃದ್ಧಿ ಯೋಜನೆಗಳಿಗೆ ಬಜೆಟ್‌ನಲ್ಲಿ 5ಲಕ್ಷ ಕೋಟಿ :

ದೇಶದ 20 ಲಕ್ಷ ಕೋಟಿ ರೂ. ವೆಚ್ಚದ ಬಜೆಟ್‌ನಲ್ಲಿ 5ಲಕ್ಷ ಕೋಟಿ ಅಭಿವೃದ್ಧಿ ಯೋಜನೆಗೆ ಮೀಸಲಿಡಲಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಆದಾಯ ತೆರಿಗೆ ಪಾವತಿಸುವವರ ಸಂಖ್ಯೆ ಹೆಚ್ಚಾಗಬೇಕಾಗಿದೆ. ಈ ನಿಟ್ಟಿನಲ್ಲಿ ಡಿಜಿಟಲ್ ಪಾವತಿ, ಕ್ಯಾಶ್‌ಲೆಸ್ ಪಾವತಿ ಹೆಚ್ಚಾಗಬೇಕಾಗಿದೆ ಎಂದು ರವಿಶಂಕರ ಪ್ರಸಾದ್ ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಪಾರ್ಕ್ ವಿಸ್ತರಣೆಯ ಬಗ್ಗೆ ಪರಿಶೀಲನೆ:

ರಾಜ್ಯದಲ್ಲಿ ಈಗಾಗಲೇ ಮಾಹಿತಿ ತಂತ್ರಜ್ಞಾನ ಪಾರ್ಕ್ ರಚನೆಯಾಗಿದ್ದು,  ಅದರ ವಿಸ್ತರಣೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ರವಿಶಂಕರ ಪ್ರಸಾದ್ ತಿಳಿಸಿದ್ದಾರೆ.

ಜಿಲ್ಲೆಗೆ ಪ್ರತ್ಯೇಕ ಐಟಿ ಪಾರ್ಕ್:

ಜಿಲ್ಲೆಯಲ್ಲಿ ಸಾಕಷ್ಟು ಶಿಕ್ಷಣ ಸಂಸ್ಥೆಗಳಿವೆ ಕಾಲೇಜುಗಳಿವೆ ಪ್ರಮುಖ ಬ್ಯಾಂಕ್‌ಗಳು ಜಿಲ್ಲೆಯಿಂದಲೇ ಆರಂಭವಾಗಿದೆ ಆದುದರಿಂದ ಜಿಲ್ಲೆಗೆ ಪ್ರತ್ಯೇಕವಾಗಿ ಐಟಿ ಪಾರ್ಕ್‌ನ್ನು ರಚನೆ ಮಾಡಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ಐಟಿ ಸಚಿವರಿಗೆ ಬಹಿರಂಗವಾಗಿ ಮನವಿ ಸಲ್ಲಿಸಿದರು.ದಕ್ಷಿಣ ಕನ್ನಡ ಜಿಲ್ಲೆಯ ಬಳ್ಪ ಗ್ರಾಮದಲ್ಲಿ ಶೇ.100ರಷ್ಟು ಡಿಜಿಟಲ್ ವ್ಯವಹಾರ ಆರಂಭಗೊಂಡಿದೆ.ಮಾರ್ಚ್ ಅಂತ್ಯದೊಳಗೆ ದ.ಕ ಜಿಲ್ಲೆ ಸಂಪೂರ್ಣ ಡಿಜಿಟಲ್ ವ್ಯವಹಾರ ನಡೆಸುವ ಜಿಲ್ಲೆಯಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಸಭೆಯಲ್ಲಿ ಕೇಂದ್ರ ಸರಕಾರದ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ರಾಜ್ಯ ಸಚಿವ ರಮೇಶ್ ಜಿಗಜಿಣಗಿ, ಶಾಸಕರಾದ ಅಭಯ ಚಂದ್ರ ಜೈನ್, ಮೊಹಿಯುದ್ಧೀನ್ ಬಾವ, ಗಣೇಶ್ ಕಾರ್ನಿಕ್, ನೀತಿ ಆಯೋಗದ ಸಲಹೆಗಾರ ಯೋಗೇಂದ್ರ ಸೂರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡು, ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಮ್.ಆರ್.ರವಿ, ಉಪಮೇಯರ್ ಸುಮಿತ್ರ ಕೆ.ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಡಿಜಿಧನ್ ಯೋಜನೆಯಲ್ಲಿ ಸಕ್ರಿಯವಾಗಿರುವರಿಗೆ ಲ್ಯಾಪ್‌ಟಾಪ್ ನೀಡಿ ಗೌರವಿಸಲಾಯಿತು. ಹಾಸನದ ಉಮ್ಮರ್ ಫಾರೂಕ್, ಬೀದರ್‌ನ ರವಿಶಂಕರ್, ದಾವಣಗೆರೆಯ ಕೈಲಾಸ್, ಧಾರವಾಡದ ಶಿವು, ಬೆಂಗಳೂರು ನಗರದ ಸಲೀಮ ಲ್ಯಾಪ್ ಟಾಪನ್ನು ಸಚಿವರಿಂದ ಸ್ವೀಕರಿಸಿದರು.

 ಡಿಜಿಧನ್ ಲಕ್ಕಿ ಗ್ರಾಹಕ ಪ್ರಶಸ್ತಿಗೆ ಆಯ್ಕೆ ವಿಜೇತರಾದ ನಡೆದು ತುಳಸಿ ಶೆಟ್ಟಿ, ರವಿಂದ್ರ ನಾಥ ಕಾಮತ್, ಪೂರ್ಣಿಮಾ, ಜೊಸ್, ಸುರೇಶ್ ಹೆಗ್ಡೆ, ಗೀತಾ ಮೂಲ್ಯರವರಿಗೆ ಸಾಂಕೇತಿಕವಾಗಿ ಪ್ರಶಸ್ತಿ ವಿತರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಸ್ವಾಗತಿಸಿದರು.ಮನಪಾ ಉಪ ಆಯುಕ್ತ ಗೋಕುಲ್ ದಾಸ್ ನಾಯಕ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X