ಕಂಬಳದ ಉಳಿವಿಗೆ ಸಕಲ ಪ್ರಯತ್ನ: ಸಚಿವ ಪ್ರಮೋದ್

ಉಡುಪಿ, ಜ.25: ಕೃಷಿಯೊಂದಿಗೆ ನಂಟನ್ನು ಹೊಂದಿರುವ ಕರಾವಳಿಯ ಜಾನಪದ ಕ್ರೀಡೆ ಕಂಬಳ ತಲೆತಲಾಂತರದಿಂದ ನಡೆದು ಬಂದ ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಕಂಬಳದ ಉಳಿವಿಗೆ ಸರ್ವಪ್ರಯತ್ನ ಮಾಡಲಾಗುವುದು ಎಂದು ಸಚಿವ ಪ್ರಮೋದ್ ಮಧ್ವರಾಜ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಬೆಂಗಳೂರಲ್ಲಿ ಕಾನೂನು ಸಚಿವ ಟಿ.ಬಿ ಜಯಚಂದ್ರ, ಅರಣ್ಯ ಸಚಿವ ಬಿ.ರಮಾನಾಥ ರೈ, ಪಶುಸಂಗೋಪನಾ ಸಚಿವ ಎ.ಮಂಜು, ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ತನ್ನ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಎಲ್ಲ ಇಲಾಖೆಗಳ ಅಕಾರಿಗಳೊಂದಿಗೆ ಚರ್ಚಿಸಿ ಕಂಬಳ ಹೋರಾಟ ಸಮಿತಿಯ ವಿನಂತಿಯಂತೆ ನ್ಯಾಯಾಲಯದಲ್ಲಿ ಕಂಬಳದ ಪರವಾಗಿ ತೀರ್ಪು ಬರಲು ಅನುಕೂಲವಾಗುವಂತೆ ಅಗತ್ಯವಿದ್ದ ಸರಕಾರಿ ಆದೇಶವನ್ನು ಹೊರಡಿಸ ಲಾಗಿದೆ. ತಾನು ಕೂಡ ವಿಧಾನಸಭೆ ಮತ್ತು ವಿಧಾನಪರಿಷತ್‌ನಲ್ಲಿ ಇಲಾಖೆ ಪರವಾಗಿ ಕಂಬಳವನ್ನು ಕಾನೂನು ಬದ್ಧ ಮಾಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದೇನೆ ಎಂದರು.
Next Story