Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆ.ವಿ. ಅಕ್ಷರರಿಗೆ ರಂಗಮನೆ ಪ್ರಶಸ್ತಿ...

ಕೆ.ವಿ. ಅಕ್ಷರರಿಗೆ ರಂಗಮನೆ ಪ್ರಶಸ್ತಿ 2017

ವಾರ್ತಾಭಾರತಿವಾರ್ತಾಭಾರತಿ26 Jan 2017 3:58 PM IST
share
ಕೆ.ವಿ. ಅಕ್ಷರರಿಗೆ ರಂಗಮನೆ ಪ್ರಶಸ್ತಿ 2017

ಸುಳ್ಯ, ಜ.26: ಸುಳ್ಯದ ರಂಗಮನೆ(ರಿ.) ಸಾಂಸ್ಕೃತಿಕ ಕಲಾ ಕೇಂದ್ರದ ವತಿಯಿಂದ ನೀಡುವ 2017ರ ರಂಗಮನೆ ಪ್ರಶಸ್ತಿಗೆ ಪ್ರಸಿದ್ಧ ರಂಗಶಿಕ್ಷಕ, ರಂಗರ್ಶಕ, ನಾಟಕಕಾರ ಹಾಗೂ ಪ್ರಕಾಶಕ ಕೆ.ವಿ.ಅಕ್ಷರ ಆಯ್ಕೆಯಾಗಿದ್ದಾರೆಂದು ರಂಗನಿರ್ದೇಶಕ, ರಂಗಮನೆ ರೂವಾರಿ ಜೀವನ್‌ರಾಂ ಸುಳ್ಯ ತಿಳಿಸಿದ್ದಾರೆ.

ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಕೆ.ವಿ.ಸುಬ್ಬಣ್ಣರವರ ಪುತ್ರರಾಗಿರುವ ಅಕ್ಷರ ದಿಲ್ಲಿಯ ರಾಷ್ಟ್ರೀಯ ನಾಟಕಶಾಲೆಯ ಪದವಿ ಹಾಗೂ ಅಮೆರಿಕದ ಲೀಡ್ಸ್ ವಿಶ್ವವಿದ್ಯಾಲಯದ ರಂಗಶಾಲೆಯಿಂದ ಸ್ನಾತಕೋತ್ತರ ಎಂ.ಎ. ಪದವಿಯನ್ನು ಪಡೆದವರು.
ನೀನಾಸಂ ರಂಗಶಿಕ್ಷಣ ಕೇಂದ್ರದ ರಂಗಶಿಕ್ಷಕರಾಗಿ, ನಿರ್ದೇಶಕರಾಗಿ, ನೂರಾರು ರಂಗಪ್ರತಿಭೆಗಳನ್ನು ನಾಡಿಗೆ ನೀಡಿದವರು.
ಕನ್ನಡದ ಪ್ರಸಿದ್ಧ ಪುಸ್ತಕ ಪ್ರಕಾಶನ ಅಕ್ಷರ ಪ್ರಕಾಶನದ ಮೂಲಕ ಅನೇಕ ಅಮೂಲ್ಯ ಪುಸ್ತಕಗಳನ್ನು ಹೊರತಂದವರು. ಸ್ವತಃ ನಾಟಕಕಾರರಾಗಿ, ಸಾಹಿತ್ಯ, ರಂಗಭೂಮಿ, ಸಿನಿಮಾ, ಸಂಸ್ಕೃತಿ ಹಾಗೂ ಅನುವಾದಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದವರು.
ನೀನಾಸಂ ಬಳಗ, ನೀನಾಸಂ ತಿರುಗಾಟ ಮುಂತಾದ ತಂಡಕ್ಕೆ ಸ್ಮಶಾನ ಕುರುಕ್ಷೇತ್ರ, ಅಹಲ್ಯಾ, ನೀಲಿಕುದುರೆ, ಕಿರಗೂರಿನ ಗಯ್ಯಾಳಿಗಳು, ತುಘಲಕ್, ಸಂಗ್ಯಾಬಾಳ್ಯಾ, ಸ್ವಪ್ನ ನಾಟಕ ಮುಂತಾಗಿ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿ ಕನ್ನಡ ರಂಗಭೂಮಿಗೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ಇವರ 3 ಕೃತಿಗಳಿಗೆ ಸಾಹಿತ್ಯ ಅಕಾಡಮಿ ಪುರಸ್ಕಾರ, ಕರ್ನಾಟಕ ನಾಟಕ ಅಕಾಡಮಿ ಫೆಲೋಶಿಪ್ ಗೌರವ, ವಿ.ಎಂ.ಇನಾಂದರ್ ಪ್ರಶಸ್ತಿ, ಸಂಗೀತ ನಾಟಕ ಅಕಾಡಮಿ ಪುರಸ್ಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಸನ್ಮಾನಗಳು ದೊರಕಿವೆ.

ಫೆಬ್ರವರಿ 3, 4, 5ರಂದು ಸುಳ್ಯದ ರಂಗಮನೆಯಲ್ಲಿ ನಡೆಯುವ 'ರಂಗಸಂಭ್ರಮ -2017' ರಾಜ್ಯಮಟ್ಟದ ಸಾಂಸ್ಕೃತಿಕ ಉತ್ಸವದ ಸಮಾರೋಪದಲ್ಲಿ ಕೆ.ವಿ.ಅಕ್ಷರರಿಗೆ ರಂಗಮನೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು 10 ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಜೀವನರಾಂ  ಸುಳ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X