Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿಧೆಡೆ ಗಣರಾಜೋತ್ಸವ ಆಚರಣೆ

ವಿವಿಧೆಡೆ ಗಣರಾಜೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ26 Jan 2017 11:11 PM IST
share
ವಿವಿಧೆಡೆ ಗಣರಾಜೋತ್ಸವ ಆಚರಣೆ

ವಿವಿಧತೆಯಲ್ಲಿ ಏಕತೆ ಭಾರತ ದೇಶದ ವಿಶೇಷತೆ: ಸಚಿವ ಕಾಗೋಡು ತಿಮ್ಮಪ್ಪ
ಶಿವಮೊಗ್ಗ, ಜ. 26: ಹಲವು ಭಾಷೆ, ಧರ್ಮ, ಆಚರಣೆ ಸೇರಿದಂತೆ ಹಲವು ಪ್ರಾಂತ್ಯಗಳನ್ನು ಒಳಗೊಂಡಿರುವ ಭಾರತ ದೇಶವು ವಿವಿಧತೆಯಲ್ಲಿ ಏಕತೆ ಮೈಗೂಡಿಸಿಕೊಂಡಿದೆ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಸದೃಢ ರಾಷ್ಟ್ರವಾಗಿ ಬೆಳೆದು ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪಹೇಳಿದ್ದಾರೆ.

ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 68ನೆಯ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ನಾಗರಿಕರನ್ನುದ್ದೇಶಿಸಿ ಅವರು ಮಾತನಾಡಿದರು. ನೆಲ, ಜಲ, ಗಡಿ, ಭಾಷೆ ಮೊದಲಾದ ವಿಷಯಗಳಲ್ಲಿ ಉಂಟಾಗುವ ಸಣ್ಣಪುಟ್ಟ ಭಿನ್ನಾಭಿಪ್ರಾಯವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಂಡು ದೇಶವನ್ನು ಬಲಿಷ್ಠ ಹಾಗೂ ಸ್ವಾಭಿಮಾನಿ ರಾಷ್ಟ್ರವನ್ನಾಗಿ ಕಟ್ಟಿ ಬೆಳೆಸಲಾಗಿದೆ. ಸಂತೃಪ್ತಿಯಿಂದ ಕೂಡಿದ ದೇಶ ಭಾರತವಾಗಿದ್ದು, ಸ್ವಾವಲಂಬಿತನವನ್ನೂ ಮೈಗೂಡಿಸಿಕೊಂಡಿದೆ ಎಂದರು.

ದೇಶದಲ್ಲಿ ಪ್ರತೀ ಪ್ರಜೆಯೂ ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಲಾಗಿದೆ. ವಿಜ್ಞಾನ, ತಂತ್ರಜ್ಞ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹೋನ್ನತ ಸಾಧನೆ ಮಾಡಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲಾಗಿದೆ.

ಅಭಿವೃದ್ಧ್ದಿ: ಹಳ್ಳಿ ಮತ್ತು ನಗರದಲ್ಲಿ ಸಮರ್ಪಕ ಕುಡಿಯುವ ನೀರು, ರಸ್ತೆ, ಆಸ್ಪತ್ರೆ, ಶಾಲೆ ಮತ್ತು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ಮೂಲಕ ಹಳ್ಳಿ ಮತ್ತು ನಗರಗಳ ಅಂತರವನ್ನು ಕಡಿಮೆ ಮಾಡಲಾಗಿದೆ. ರೈತರ ಆವಶ್ಯಕತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ ಎಂದರು.

ತಾವು ಕತ್ತಲಲ್ಲಿ ಇದ್ದುಕೊಂಡು ಇಡೀ ರಾಜ್ಯದ ಜನರಿಗೆ ಬೆಳಕು ಕೊಡುತ್ತಿರುವ ಶರಾವತಿ ಹಿನ್ನೀರು ಸಂತ್ರಸ್ತರಿಗೆ ಹಕ್ಕುಪತ್ರ ಕೊಡಲಾಗಿದೆ. ಸರಕಾರಿ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡವರಿಗೆ ಸಕ್ರಮ ಮಾಡಿ ಹಕ್ಕುಪತ್ರ ನೀಡಲಾಗಿದೆ. ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ವರ್ಗದವರಿಗೆ ಭೂ ಮಂಜೂರಾತಿ ಪತ್ರಗಳನ್ನು ನೀಡಲಾಗಿದೆ ಎಂದರು. ಸಮಾರಂಭದಲ್ಲಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಎಂಎಲ್ಸಿ ಆರ್. ಪ್ರಸನ್ನಕುಮಾರ್, ಸುಡಾ ಅಧ್ಯಕ್ಷ ಕೆ.ಎಂ. ಉಸ್ಮಾನ್, ಜಿಲ್ಲಾಧಿಕಾರಿ ಡಾ. ಎಂ. ಲೋಕೇಶ್, ಜಿಪಂ ಸಿಇಒ ರಾಕೇಶ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಉಪಸ್ಥಿತರಿದ್ದರು.

ಪಥ ಸಂಚಲನ: ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನಡೆಸಿದ ಸಚಿವ ಕಾಗೋಡು ತಿವ್ಮುಪ್ಪ, ನಂತರ ತೆರೆದ ಜೀಪಿನಲ್ಲಿ ಪೆರೇಡ್ ವೀಕ್ಷಣೆ ಮಾಡಿದರು. ಸುಮಾರು 10ಕ್ಕೂ ಹೆಚ್ಚು ತಂಡಗಳು ಆಕರ್ಷಕ ಪಥಸಂಚಲನ ನಡೆಸಿದವು. ನಂತರ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ದೇಶಭಕ್ತಿ ಸಾರುವ ನೃತ್ಯ ಪ್ರದರ್ಶನ ನೀಡಿದರು. ಸರಕಾರಿ ಶಾಲಾ ಮಕ್ಕಳು ಸಾಮೂಹಿಕ ಕವಾಯಿತು ಪ್ರದರ್ಶಿಸಿದರು. ಸಚಿವರು ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಈ ಸಂದರ್ಭದಲ್ಲಿ ಪ್ರದಾನ ಮಾಡಿದರು.

6 ಮಂದಿಗೆ ಸರ್ವೋತ್ತಮ ಪ್ರಶಸ್ತಿ
 ಶಿವಮೊಗ್ಗ, ಜ. 26: ಪತೀ ವರ್ಷ ಸರಕಾರಿ ನೌಕರರಿಗೆ ಜಿಲ್ಲಾಡಳಿತದ ವತಿಯಿಂದ ನೀಡಲಾಗುವ ಸರ್ವೋತ್ತಮ ಪ್ರಶಸ್ತಿಗೆ ಕೆಎಎಸ್. ಅಧಿಕಾರಿ ಶಿವಮೊಗ್ಗ ಉಪ ವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಸೇರಿದಂತೆ ಆರು ಜನರನ್ನು ಆಯ್ಕೆ ಮಾಡಲಾಗಿದೆ. ಉಳಿದಂತೆ ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಜಿ. ಶ್ರೀನಿವಾಸ್,

ದ್ರಾವತಿ ಉಪ ಖಜಾನೆಯ ಸಹಾಯಕ ನಿರ್ದೇಶಕಿ ಎಚ್.ಎಸ್.ಸಾವಿತ್ರಿ, ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಎಂ.ಎಸ್.ವೆಂಕಟೇಶ್, ಜಿಲ್ಲಾ ಪಂಚಾಯತ್ ಅಧೀಕ್ಷಕ ರಾಮಕೃಷ್ಣ ಹಾಗೂ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕಿ ಸಯೀದಾ ಬಾನು ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಗುರುವಾರ ನಗರದ ಡಿ.ಎ.ಆರ್. ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪರವರು ಸನ್ಮಾನಿಸಿ, ಅಭಿನಂದಿಸಿದರು.

ಪ್ರಶಸ್ತಿ ನೀಡಲಾಗುತ್ತದೆ: ಸರಕಾರಿ ನೌಕರರಲ್ಲಿ ಸೇವಾ ದಕ್ಷತೆ ಹೆಚ್ಚಿಸಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತಗಳು ಪ್ರತೀ ವರ್ಷ ಸರ್ವೋತ್ತಮ ಪ್ರಶಸ್ತಿ ನೀಡಿ ಅಭಿನಂದಿಸುತ್ತವೆ. ಎ, ಬಿ ಹಾಗೂ ಸಿ ಗುಂಪುಗಳಲ್ಲಿ ತಲಾ ಇಬ್ಬರನ್ನು ಆಯ್ಕೆ ಮಾಡಿ ಗಣರಾಜೋತ್ಸವ ಸಮಾರಂಭದಂದು ಅಭಿನಂದಿಸಲಾಗುತ್ತದೆ.

ಅನ್ನದಾತ ರೈತರು ಸಮಾಜದ ಬೆನ್ನೆಲುಬು: ಸಚಿವ ಪರಮೇಶ್ವರ್
ಚಿಕ್ಕಮಗಳೂರು, ಜ.26: ರಾಜ್ಯದಾದ್ಯಂತ ತೀವ್ರ ಮಳೆಯ ಕೊರತೆಯಿಂದಾಗಿ ಹಿಂದೆಂದೂ ಕಂಡರಿಯದಂತಹ ಬರಗಾಲದ ಛಾಯೆ ಆವರಿಸಿದೆ. ರಾಜ್ಯದ 139 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದ್ದು, ಬರ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಅವರು ಗುರುವಾರ ಜಿಲ್ಲಾ ಆಟದ ಮೈದಾನದಲ್ಲಿ 68ನೆ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಬರದ ಛಾಯೆ ಆವರಿಸಿದ್ದು, ಚಿಕ್ಕಮಗಳೂರು, ಮೂಡಿಗೆರೆ, ಕಡೂರು, ನರಸಿಂಹರಾಜಪುರ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಲಾಗಿದೆ ಎಂದ ಅವರು, ರಾಜ್ಯದ ಚುಕ್ಕಾಣಿ ಹಿಡಿದ ಸಂದಭರ್ದಲ್ಲಿ ಜನತೆಗೆ ನೀಡಿದ ಬಹುತೇಕ ಭರವಸೆಗಳನ್ನು ಈಡೇರಿಸಿ ಪ್ರಜಾಪ್ರಭುತ್ವದ ಧರ್ಮ ಪಾಲಿಸಿದ್ದೇವೆ ಎಂದರು.
ಅನ್ನದಾತ ರೈತರು ಸಮಾಜದ ಬೆನ್ನೆಲುಬಾಗಿದ್ದು, ಅವರ ಮೊಗದಲ್ಲಿ ನೆಮ್ಮದಿಯ ನಗು ಮೂಡಿಸುವ ಪ್ರಯತ್ನವಾಗಿ ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ಗೊಬ್ಬರ ವಿತರಣೆ, ಮಣ್ಣಿನ ಆರೋಗ್ಯ ಕಾಪಾಡಲು ಮಣ್ಣು ಆರೋಗ್ಯ ಚೀಟಿ ವಿತರಣೆ, ಸಾವಯವ ಕೃಷಿಗೆ ಉತ್ತೇಜನ, ಮಳೆಯಾಶ್ರಿತ ರೈತರಿಗೆ ಕೃಷಿ ಭಾಗ್ಯ, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ, ಕೃಷಿ ಯಾಂತ್ರೀಕರಣಕ್ಕೆ ಆದ್ಯತೆ, ಸೇರಿದಂತೆ ಕೃಷಿ ಕ್ಷೇತ್ರವನ್ನು ಸಶಕ್ತಗೊಳಿಸಲು ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದೆ.ಹಸಿವು ಮುಕ್ತ ಕರ್ನಾಟಕ ಎನ್ನುವ ಕನಸಿನೊಂದಿಗೆ ಅನ್ನಭಾಗ್ಯ ಅನುಷ್ಠಾನಗೊಂಡಿದೆ. ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪ್ರಾಥಮಿಕ ಶಿಕ್ಷಣ ದೊರೆಯಬೇಕೆನ್ನುವ ದೃಷ್ಟಿಯಿಂದ ಸರಕಾರವು ಆರ್.ಟಿ.ಇ ಅಡಿಯಲ್ಲಿ ಮೂರು ವರ್ಷಗಳಲ್ಲಿ 2.67 ಲಕ್ಷ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಸೌಲಭ್ಯ ಒದಗಿಸಿದೆ.

ಸರಕಾರಿ ಶಾಲೆಗಳಲ್ಲಿ 1ನೆ ತರಗತಿಗೆ ಹೆಣ್ಣು ಮಕ್ಕಳ ದಾಖಲಾತಿ ಮತ್ತು ಹಾಜರಾತಿಯನ್ನು ಉತ್ತೇಜಿಸಲು ಹೆಣ್ಣು ಮಕ್ಕಳಿಗೆ ಪ್ರತೀ ದಿನದ ಹಾಜರಾತಿಗೆ 2 ರೂ. ಗಳನ್ನು ಪ್ರೋತ್ಸಾಹ ನೀಡುವ ಯೋಜನೆಯನು ಜಾರಿಗೆ ತಂದಿದೆ.  ಸರಕಾರವು ಮಹಿಳೆಯರ ಸಬಲೀಕರಣಕ್ಕೆ ಮತ್ತು ಮಕ್ಕಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಮಹಿಳೆಯರು, ಮಕ್ಕಳು, ವೃದ್ಧರು, ವಿಕಲಚೇತನರ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದ ಅವರು, ಪ.ಜಾತಿ ಮತ್ತು ಪಂಗಡದ ಅಭ್ಯುದಯ ಸರಕಾರದ ಪರಮ ಧ್ಯೇಯ. ಸಂವಿಧಾನದ ಸಮಾನತೆಯ ಆಶಯವನ್ನು ಸಾಧಿಸಲು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಉತ್ತಮ ಶಿಕ್ಷಣ, ಆರ್ಥಿಕ ಸುಧಾರಣೆಯಂತಹ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸಿ.ಟಿ ರವಿ ವಹಿಸಿದ್ದರು. ವಿವಿಧ ಶಾಲಾ ಮತ್ತು ಕಾಲೇಜು ಮಕ್ಕಳು ಆಕರ್ಷಕ ನೃತ್ಯ, ಸಾಂಸ್ಕೃತಿಕ ಪ್ರದರ್ಶನ ನಡೆಸಿದರು. ಈ ಸಮಯದಲ್ಲಿ ಜಿಲ್ಲಾಧಿಕಾರಿ ಸತ್ಯವತಿ, ಎಸ್ಪಿ ಕೆ.ಅಣ್ಣಾಮಲೈ, ಜಿಪಂ ಉಪಾಧ್ಯಕ್ಷ ಎಸ್.ಎನ್.ರಾಮಸ್ವಾಮಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಲಿಂಗರಾಜ್, ಜಿಪಂ ಸಿಇಒ ಡಾ.ಆರ್.ರಾಗಪ್ರಿಯ ಮತ್ತಿತರರಿದ್ದರು

‘ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರು ಜೊತೆಯಾಗಬೇಕು’
 ದಾವಣಗೆರೆ,ಜ.26: ಬಲಿಷ್ಠ ದೇಶದ ನಿರ್ಮಾಣದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮನವಿ ಮಾಡಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ 68ನೆ ಗಣರಾಜ್ಯೋತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸ್ವೀಕರಿಸಿ, ನಂತರ ಅವರು ಗಣರಾಜ್ಯೋತ್ಸವ ಸಂದೇಶ ನೀಡಿದರು. ನಾವು ನಮ್ಮ ಹಕ್ಕುಗಳ ಪ್ರತಿಪಾದನೆಯ ಜೊತೆಜೊತೆಯಾಗಿ ನಮ್ಮ ಕರ್ತವ್ಯಗಳನ್ನೂ ಮನಃಪೂರ್ವಕವಾಗಿ ನಿರ್ವಹಿಸುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳಲು ಕೆಚ್ಚೆದೆಯ ಪಣತೊಡಬೇಕಿದೆ. ನಾವು ನಾಡಿಗಾಗಿ ಏನು ಮಾಡಿದ್ದೇವೆ ಮತ್ತು ಏನು ಮಾಡಬಲ್ಲೆವು ಎಂಬುದನ್ನು ಮನಗಂಡು ಕಾರ್ಯಪ್ರವೃತ್ತರಾಗುವುದಲ್ಲದೇ, ಏನು ಮಾಡಬಾರದು ಎಂಬ ಸ್ಪಷ್ಟ ಅರಿವನ್ನು ಹೊಂದಿದಲ್ಲಿ ಮಾತ್ರ ನಾವು ಭಾರತದ ಜವಾಬ್ದಾರಿ ಪ್ರಜೆ ಎಂದೆನಿಸಿಕೊಳ್ಳಬಹುದು ಎಂದರು. ಜಿಪಂ ಅಧ್ಯಕ್ಷೆ ಉಮಾ ಎಂ.ಪಿ. ರಮೇಶ್, ಜಿಪಂ ಉ  ಡಿ. ಸಿದ್ದಪ್ಪ, ಪಾಲಿಕೆ ಮಹಾಪೌರರಾದ ರೇಖಾ ನಾಗರಾಜ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಜಿಪಂ ಸಿಇಒ ಎಸ್ ಅಶ್ವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾ ಶಂಕರ್ ಗುಳೇದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯಶೋದ ವಂಟಿಗೋಡಿ, ಉಪವಿಭಾಗಾಧಿಕಾರಿ ಕುಮಾರಸ್ವಾಮಿ, ತಹಶೀಲ್ದಾರ್ ಸಂತೋಷ್, ಜನಪ್ರತಿನಿಧಿಗಳು, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X