ಗಣರಾಜ್ಯೋತ್ಸವ: ಕಣ್ಮನ ಸೆಳೆದ ಪಥಸಂಚಲನ..!
ದಿಲ್ಲಿಯ ರಾಜ್‌ಪಥ್‌ನಲ್ಲಿ ಗುರುವಾರ ನಡೆದ 68ನೆ ಗಣರಾಜ್ಯೋತ್ಸವ ಸಮಾರಂಭದ ಪಥಸಂಚಲನದಲ್ಲಿ ವಿವಿಧ ರಾಜ್ಯಗಳ ಕಲೆ, ಸಂಸ್ಕೃ ತಿಯನ್ನು ಪ್ರತಿಬಿಂಬಿಸುವ ಸ್ತಬ್ದಚಿತ್ರಗಳು ಪ್ರದರ್ಶನಗೊಂಡಿತು. ಕರ್ನಾಟಕದ ಜಾನಪದ ನೃತ್ಯ ಪ್ರಕಾರದ ಸ್ತಬ್ದಚಿತ್ರ ಎಲ್ಲರ ಗಮನ ಸೆಳೆಯಿತು. ಪರೇಡ್‌ನಲ್ಲಿ ಭಾರತೀಯ ಸೇನೆಯ ಟ್ಯಾಂಕ್‌ಗಳು ಮತ್ತು ಶಸ್ತ್ರಾಸ್ತ್ರಗಳ ಪ್ರದರ್ಶನ ನಡೆಯಿತು. ಈ ಬಾರಿ ಪರೇಡ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಸೇನಾ ತುಕಡಿಯೊಂದು ಕವಾಯತ್ ವಿಶೇಷವಾಗಿತ್ತು . ಕಾರ್ಯಕ್ರಮದಲ್ಲಿ ಹುತಾತ್ಮ ಹವಿಲ್ದಾರ್ ಹಂಗ್‌ಪಾ ದಾದ ಅವರ ಪರವಾಗಿ ಅವರ ಪತ್ನಿ ಚೇಸನ್ ಲೊವಾಂಗ್‌ರಿಗೆ ಅಶೋಕ ಚಕ್ರವನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪ್ರದಾನ ಮಾಡಿದರು. ಮುಖ್ಯ ಅತಿಥಿಯಾಗಿ ಅಬುಧಾಬಿಯ ಯುವರಾಜ ಶೇಕ್ ಮುಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಮತ್ತಿತರ ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.
Next Story





