ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ
.jpg)
ಮೂಡುಬಿದಿರೆ , ಜ.26 : ಇಲ್ಲಿನ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ 68ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಅನಿವಾಸಿ ಭಾರತೀಯ ಉದ್ಯಮಿ ರಾಮಚಂದ್ರ ಹೆಗಡೆ, ಖ್ಯಾತ ಜ್ಯೋತಿಷಿ ರಾಮಚಂದ್ರ ಆಚಾರ್ ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಬಾಬು, ಕಾಲೇಜಿನ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಶಶಿರಾಜ್ ಸ್ವಾಗತಿಸಿದರು. ದೈಹಿಕ ಶಿಕ್ಷಕ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಪ್ರದೀಪ್ ಅಂಚನ್ ವಂದಿಸಿದರು.
Next Story





