ಮೂರ್ಜೆ: ಬೈಕ್‌ನಿಂದ ಬಿದ್ದು ಮಹಿಳೆ ಸಾವು
ಬಂಟ್ವಾಳ, ಜ.26: ತಾಲೂಕಿನ ಮೂರ್ಜೆ ಸಮೀಪದ ನೆಕ್ಕಿಲಪದವು ಎಂಬಲ್ಲಿ ಮಹಿಳೆಯೊಬ್ಬರು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಉರುಳಿ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ರೊಹರಾ(45) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಬಳ್ಳಮಂಜದಿಂದ ನೈನಾಡು ಕಡೆಗೆ ಗುರುವಾರ ಸಂಜೆ ತನ್ನ ಅಕ್ಕನ ಮಗನ ಬೈಕ್‌ನಲ್ಲಿ ಬರುತ್ತಿದ್ದ ಸಂದರ್ಭ ಏಕಾಏಕಿ ಬ್ರೇಕ್ ಹಾಕಿದಾಗ ಉರುಳಿ ಬಿದ್ದಿದ್ದಾರೆ ಎನ್ನಲಾಗಿದೆ. ಪರಿಣಾಮ ತಲೆಗೆ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ತುಂಬೆ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.
Next Story





