Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚರ್ಚ್‌ನ ಜಾತ್ರೆ ಪ್ರಯುಕ್ತ...

ಚರ್ಚ್‌ನ ಜಾತ್ರೆ ಪ್ರಯುಕ್ತ ಭಿಕ್ಷುಕರಿಗೆ ನೀಡಿದ ದಾನವೆಷ್ಟು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ27 Jan 2017 6:01 PM IST
share
ಚರ್ಚ್‌ನ  ಜಾತ್ರೆ ಪ್ರಯುಕ್ತ ಭಿಕ್ಷುಕರಿಗೆ ನೀಡಿದ ದಾನವೆಷ್ಟು ಗೊತ್ತೇ ?

ಕಾರ್ಕಳ, ಜ.27: ಅತ್ತೂರು ಸಂತ ಲಾರೆನ್ಸ್ ಕಿರು ಬಾಸಿಲಿಕಾ ಚರ್ಚ್‌ನ ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದು ಭಿಕ್ಷುಕರಿಗೆ 10.30 ಲಕ್ಷ ರೂ. ಹಣವನ್ನು ದಾನದ ರೂಪದಲ್ಲಿ ಹಂಚಲಾಯಿತು.

 ಜಾತ್ರೆಯ ಸಂದರ್ಭ ಭಿಕ್ಷಾಟನೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಭಿಕ್ಷುಕರಿಗೆ ದಾನ ನೀಡುವುದಕ್ಕಾಗಿ ಚರ್ಚ್ ಆವರಣದಲ್ಲಿ ಕಲ್ಪಿಸಲಾದ ಪ್ರತ್ಯೆಕ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಭಿಕ್ಷುಕರ ಅರ್ಹತೆಗೆ ಅನುಗುಣವಾಗಿ ಹಂಚಲಾಯಿತು. ಮಕ್ಕಳು ಮತ್ತು ಕೆಲಸ ಮಾಡಲು ಶಕ್ತರಾಗಿರುವ ಯುವಕರಿಗೆ ಹಣ ನೀಡದೆ ಕೇವಲ ಊಟವನ್ನು ಮಾತ್ರ ನೀಡಲಾಯಿತು.

 ಬೆಳಗ್ಗಿನಿಂದಲೇ ತಂಡೋಪತಂಡವಾಗಿ ಅಸಂಖ್ಯಾತ ಭಿಕ್ಷುಕರು ಪುಣ್ಯ ಕ್ಷೇತ್ರದತ್ತ ಬಂದಿದ್ದು ವಿಕಲಚೇತನರು, ವೃದ್ಧರು, ಸಾಧು ಸಂತರು, ನಿಶಕ್ತರು, ಮಹಿಳೆಯರು, ಪುರುಷರು, ವೃದ್ಧರು, ವೃದ್ಧೆಯರು ಮತ್ತು ಕೆಲವು ಮಕ್ಕಳು ತಂಡದಲ್ಲಿದ್ದರು. ಮಧ್ಯಾಹ್ನ 12 ಗಂಟೆಗೆ ಎಲ್ಲರಿಗೂ ಗರಿಷ್ಟ 2000ರೂ. ಹಾಗೂ ಕನಿಷ್ಟ 300ರೂ. ಹಣವನ್ನು ಅವರವರ ದೈಹಿಕ ಅಸಮರ್ಥತೆಯನ್ನು ನೋಡಿ ಹಂಚುವುದರೊಂದಿಗೆ ಊಟವನ್ನು ಸಹ ನೀಡಲಾಯಿತು.

‘ಐದು ದಿನಗಳ ಉತ್ಸವಕ್ಕೆ ಗುರುವಾರ ತೆರೆ ಬಿದ್ದಿದ್ದು ನಿರೀಕ್ಷೆಗೂ ಮೀರಿ ಲಕ್ಷಾಂತರ ಮಂದಿ ಭಕ್ತಾಧಿಗಳು ಪುಣ್ಯಕ್ಷೇತ್ರಕ್ಕೆ ಆಗಮಿಸಿದ್ದಾರೆ. ಸಂತ ಲಾರೆನ್ಸರಿಗೆ ಬಡವರ ಮತ್ತು ಭಿಕ್ಷುಕರ ಮೇಲೆ ಅತೀವ ಪ್ರೀತಿ. ಅದಕ್ಕಾಗಿ ಪ್ರತಿವರ್ಷ ಭಿಕ್ಷುಕರಿಗಾಗಿ ದಾನ ನೀಡಲಾಗುವುದು’ ಎಂದು ಬೆಸಿಲಿಕಾದ ಚುನಾಯಿತ ಉಪಾಧ್ಯಕ್ಷ ಜಾನ್ ಡಿಸಿಲ್ವಾ ತಿಳಿಸಿದ್ದಾರೆ.

ಮೊದಲು ಭಿಕ್ಷುಕರು ರಸ್ತೆಯಲ್ಲಿ ಭಿಕ್ಷೆ ಬೇಡುತ್ತಿದ್ದು ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆಯ ಮನವಿಯ ಮೇರೆಗೆ ಜಾತ್ರೆಯ ಸಂದರ್ಭದಲ್ಲಿ ಅದನ್ನು ಸಂಪೂರ್ಣ ನಿಷೇಧಿಸಿ ಭಿಕ್ಷುಕರಿಗಾಗಿ ಚರ್ಚಿನ ವಠಾರದಲ್ಲಿ ಮೂರು ಡಬ್ಬಿಗಳನ್ನು ಇಡಲಾಗಿತ್ತು. ಅದರಲ್ಲಿ ಸಂಗ್ರಹವಾದ ಹಣವನ್ನು ಜಾತ್ರೆ ಮುಗಿದ ಬಳಿಕ ಅವರವರ ಅರ್ಹತೆಗೆ ಅನುಗುಣವಾಗಿ ಹಂಚಲಾಗುತ್ತದೆ. ಹಣದ ಜೊತೆಗೆ ಅವರಿಗೆ ಮಧ್ಯಾಹ್ನದ ಊಟವನ್ನು ಕೂಡ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಚರ್ಚಿನ ಸಹಾಯಕ ಧರ್ಮಗುರು ವಂ.ವಿಜಯ್ ಡಿಸೋಜ, ಉಪಾಧ್ಯಕ್ಷ ರಿಚ್ಚಾರ್ಡ್ ಪಿಂಟೊ, ವಲೇರಿಯನ್ ಪಾಯಸ್, ಸಂತೋಶ್ ಡಿಸಿಲ್ವ್ವ, ಲಿಯೊ ಸಿಕ್ವೇರಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X