Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನ ಅಕಾಡಮಿಯ ಗೌರವ ಪ್ರಶಸ್ತಿ ಪ್ರಕಟ...

ಯಕ್ಷಗಾನ ಅಕಾಡಮಿಯ ಗೌರವ ಪ್ರಶಸ್ತಿ ಪ್ರಕಟ : ಡಾ. ಎಂ. ಪ್ರಭಾಕರ ಜೋಶಿಗೆ ಪಾರ್ತಿಸುಬ್ಬ ಪ್ರಶಸ್ತಿ

ಜ.28ರಂದು ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ27 Jan 2017 6:25 PM IST
share
ಯಕ್ಷಗಾನ ಅಕಾಡಮಿಯ ಗೌರವ ಪ್ರಶಸ್ತಿ ಪ್ರಕಟ  : ಡಾ. ಎಂ. ಪ್ರಭಾಕರ ಜೋಶಿಗೆ ಪಾರ್ತಿಸುಬ್ಬ ಪ್ರಶಸ್ತಿ

ಮಂಗಳೂರು, ಜ.27: ಕರ್ನಾಟಕ ಯಕ್ಷಗಾನ ಅಕಾಡಮಿಯ 2016ನೆ ಸಾಲಿನ ಗೌರವ ಪ್ರಶಸ್ತಿ ಹಾಗು ಪಾರ್ತಿಸುಬ್ಬ ಪ್ರಶಸ್ತಿಯ ಪಟ್ಟಿಯನ್ನು ಅಕಾಡಮಿಯ ಅಧ್ಯಕ್ಷ ನಾಡೋಜ ಬೆಳಗಲ್ಲು ವೀರಣ್ಣ ತುಳುಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಗೆ ಪಾರ್ತಿಸುಬ್ಬ ಪ್ರಶಸ್ತಿ ಹಾಗು ಗೌರವ ಪ್ರಶಸ್ತಿಗೆ ಸುಬ್ರಾಯ ವೆಂಕಟ್ರಮಣ ಭಟ್ಟ ಗುಂಡಿಬೈಲ್, ಹೊನ್ನಾವರ (ಬಡಾಬಡಗುತಿಟ್ಟು), ಗೋಪಾಲಕೃಷ್ಣ ಕುರುಪ್ ಬೆಳ್ತಂಗಡಿ (ತೆಂಕುತಿಟ್ಟು) ಹೆರಂಜಾಲು ಸುಬ್ಬಣ್ಣ ಗಾಣಿಗ ಕುಂದಾಪುರ (ಬಡಗುತಿಟ್ಟು), ಉಷಾರಾಣಿ ಬಳ್ಳಾರಿ (ಬಯಲಾಟ), ತುಕಾರಾಮ ಮಾರುತಿ ನಾಯಿಕ ಬೆಳಗಾವಿ (ಸಣ್ಣಾಟ), ವಿಲಾಸಬಾಯಿ ಮಾಗೆಪ್ಪ ರಾಯನ್ನವರ ಜಮಖಂಡಿ (ಶ್ರೀಕೃಷ್ಣ ಪಾರಿಜಾತ), ಚಿಕ್ಕ ಚೌಡಯ್ಯ ನಾಯ್ಕ ಮೈಸೂರು (ಮೂಡಲಪಾಯ), ನರಹರಿ ಶಾಸಿ, ಬೆಂಗಳೂರು (ಸೂತ್ರದ ಗೊಂಬೆಯಾಟ), ನಿಂಗಪ್ಪ ತೋರಣಕಟ್ಟೆ ಜಗಳೂರು (ಬಯಲಾಟ) ಹಾಗೂ ಶ್ರೀನಿವಾಸ ಸಾಸ್ತಾನ ಬೆಂಗಳೂರು (ಯಕ್ಷಗಾನ) ಆಯ್ಕೆಯಾಗಿದ್ದಾರೆ ಎಂದರು.

 ಜ.28ರಂದು ನಗರದ ಪುರಭವನದಲ್ಲಿ ಸಂಜೆ 6:30ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಪಾರ್ತಿಸುಬ್ಬ ಪ್ರಶಸ್ತಿಯು 1 ಲಕ್ಷ ರೂ. ನಗದು ಹಾಗೂ ಗೌರವ ಪ್ರಶಸ್ತಿಯು ತಲಾ 50 ಸಾವಿರ ರೂ. ಮತ್ತು ಪ್ರಶಸ್ತಿ ಲಕ, ನೆನಪಿನ ಕಾಣಿಕೆ ಹಾರ, ಶಾಲು ಲತಾಂಬೂಲವನ್ನು ಒಳಗೊಂಡಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ.

ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಆರ್ಶೀವಚನ ನೀಡಲಿದ್ದಾರೆ.

ಶಾಸಕ ಜೆ.ಆರ್.ಲೋಬೊ ಅಧ್ಯಕ್ಷತೆ ವಹಿಸುವರು.

ಸಚಿವರಾದ ಉಮಾಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಚಿವ ಯು.ಟಿ. ಖಾದರ್ ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕ ಬಿಡುಗಡೆಗೊಳಿಸುವರು.

ಶಾಸಕರಾದ ಶಕುಂತಳಾ ಶೆಟ್ಟಿ ತ್ರೈಮಾಸಿಕ ‘ಬಯಲಾಟ’ ಸಂಚಿಕೆ ಬಿಡುಗಡೆಗೊಳಿಸುವರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ವಿಧಾನ ಪರಿಷತ್ ವಿಪಕ್ಷ ಮುಖ್ಯಸಚೇತಕ ಗಣೇಶ್ ಕಾರ್ಣಿಕ್, ಸಂಸದ ನಳಿನ್ ಕುಮಾರ್ ಕಟೀಲು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮತ್ತಿತರು ಉಪಸ್ಥಿತರಿರುವರು ಎಂದರು.

 ಸಂಜೆ 5:30ಕ್ಕೆ ಶರವು ದೇವಸ್ಥಾನದಿಂದ ಪ್ರಶಸ್ತಿ ಪುರಸ್ಕೃತರ ಮತ್ತು ಕಲಾತಂಡಗಳ ಮೆರವಣಿಗೆ ನಡೆಯಲಿದ್ದು, ದೇವಸ್ಥಾನದ ಆಡಳಿತ ಮೊಕ್ತೇಸರ ಶರವು ರಾಘವೇಂದ್ರ ರಾವ್ ಇದಕ್ಕೆ ಚಾಲನೆ ನೀಡಲಿದ್ದಾರೆ. ಪಟ್ಲ ಸತೀಶ್ ಶೆಟ್ಟಿ ಮತ್ತು ಜಿ.ರಾಘವೇಂದ್ರ ಮಯ್ಯ ಬಳಗದಿಂದ ಯಕ್ಷ-ಗಾನ ವೈಭವ ವೈವಿಧ್ಯ ನಡೆಯಲಿದೆ. ರಾತ್ರಿ 8:30ರಿಂದ ತೆಂಕು ತಿಟ್ಟು ಕಲಾವಿದರಿಂದ ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಕಾಡಮಿಯ ಸದಸ್ಯರಾದ ಪಿ. ಕಿಶನ್ ಹೆಗ್ಡೆ, ಕೆ.ಎಂ. ಶೇಖರ್, ಬಿ.ಗಣಪತಿ, ದತ್ತಾತ್ರೇಯ ಅರಳಿಕಟ್ಟೆ, ತಾರಾನಾಥ ವರ್ಕಾಡಿ, ಬಿ.ಎಸ್. ಗುರುನಾಥ್, ರಿಜಿಸ್ಟ್ರಾರ್ ಎಸ್.ಎಚ್. ಶಿವರುದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಉಪಸ್ಥಿತರಿದ್ದರು.


 

ಹಿರಿಯ ಕಲಾವಿದರ ಸಾಕ್ಷ್ಯಚಿತ್ರ

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡಮಿ ವತಿಯಿಂದ ಯಕ್ಷಗಾನದ ಹಿರಿಯ ಕಲಾವಿದರಾದ ಹಿರಿಯಡ್ಕ ಗೋಪಾಲರಾವ್, ಕೊಳ್ಯೂರು ರಾಮಚಂದ್ರರಾವ್, ಬಲಿಪ ನಾರಾಯಣ ಭಾಗವತ, ಪೇತ್ರಿ ಮಾಧವ ನಾಯಕ್ ಹಾಗೂ ಲೀಲಾವತಿ ಬೈಪಾಡಿತ್ತಾಯ ಅವರ ಸಾಕ್ಷ್ಯಚಿತ್ರಗಳನ್ನು ಮಾಡಲಾಗುತ್ತಿದೆ.

ಫೆ.20ರಿಂದ 25ರವರೆಗೆ ಉಡುಪಿ ಎಂಜಿಎಂ ಕಾಲೇಜಿನ ಸಂಶೋಧನಾ ಕೇಂದ್ರದಿಂದ ಭಾಗವತಿಕೆ ಹಾಗೂ ಹೆಜ್ಜೆಗಾರಿಕೆ ಕುರಿತು ತರಬೇತಿ ಕಾರ್ಯಾಗಾರ ನಡೆಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X