ಮಹಿಳೆ ಆತ್ಮಹತ್ಯೆಗೆ ಯತ್ನ: ಗಂಭೀರ
ಮುಂಡಗೋಡ, ಜ.27: ತಾಲೂಕಿನ ಮೈನಳ್ಳಿಯಲ್ಲಿ ಮಹಿಳೆಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಆನಂದಿ ಪರುಶುರಾಮ ಅಜರೇಕರ(50)ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.ಮನೆಯಲ್ಲಿ ಕ್ಷುಲ್ಲಕ ಕಾರಣದಿಂದ ಜಗಳವಾಡಿಕೊಂಡು ಮನೆಯಲ್ಲಿರುವ ಸೀಮೆ ಎಣ್ಣೆಯನ್ನು ತನ್ನ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.
ಅಷ್ಟರಲ್ಲಿ ಅಕ್ಕ ಪಕ್ಕದ ಮನೆ ಜನರಿಗೆ ಸುದ್ದಿ ತಿಳಿದು ಕೂಡಲೇ ಬೆಂಕಿಯನ್ನು ನಂದಿಸಿದ ಜನರು ಗಂಭೀರವಾಗಿ ಗಾಯಗೊಂಡ ಆನಂದಿಯನ್ನು ಸಾರ್ವಜನಿಕರೇ ಮುಂಡಗೋಡ ಸರಕಾರಿ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಕೊಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ
Next Story





