ಬಿಎಸ್ ವೈ, ಈಶ್ವರಪ್ಪ ಭಿನ್ನಮತ ಶಮನ

ಹೊಸದಿಲ್ಲಿ, ಜ.27: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಡುವಿನ ಭಿನ್ನಮತ ಶಮನಕ್ಕೆ ಹೊಸದಿಲ್ಲಿಯಲ್ಲಿ ಇಂದು ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಈಶ್ವರಪ್ಪ ಅವರಿಗೆ ಒಬಿಸಿ ಮೋರ್ಚಾದ ಉಸ್ತುವಾರಿಯನ್ನು ನೀಡಲಾಗಿದೆ.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯ ಬಳಿಕ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಸಂಗೊಳ್ಳಿ ರಾಯಣ್ಣ ಹೆಸರಲ್ಲಿ ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲೂ ಬಿಜೆಪಿಯ ಹಿಂದುಳಿದ ವರ್ಗಗಳ ಸಮಾವೇಶ ಸಂಘಟಿಸಲಾಗುವುದು. ಬಿಜೆಪಿ ಪದಾಧಿಕಾರಿಗಳ ನೇಮಕ ಸಮಸ್ಯೆ ಪರಿಹಾರಕ್ಕೆ ತಮ್ಮ ನೇತೃತ್ವದಲ್ಲಿ ಹೊಸ ಸಮಿತಿ ರಚಿಸಲಾಗಿದೆ ಎಂದು ಮುರಳೀಧರ ರಾವ್ ಹೇಳಿದರು.
Next Story





