ಜೆಡಿಎಸ್ ನ ಏಳು ಶಾಸಕರು ಕಾಂಗ್ರೆಸ್ ಸೇರ್ಪಡೆಯ ಹಾದಿಯಲ್ಲಿ

ಬೆಂಗಳೂರು, ಜ.27: ಕಳೆದ ರಾಜ್ಯಸಭಾ ಚುನಾವಣೆಯ ವೇಳೆ ಪಕ್ಷದ ವಿಪ್‌ನ್ನು ಉಲ್ಲಂಘಿಸಿ ಕಾಂಗ್ರೆಸ್ ನ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ ಆರೋಪದಲ್ಲಿ ಅಮಾನತುಗೊಂಡಿರುವ ಚಾಮರಾಜನಗರ ಶಾಸಕ ಜಮೀರ್ ಅಹ್ಮದ್ ಖಾನ್, ನಾಗಮಂಗಲ ಶಾಸಕ ಎನ್.ಚೆಲುವರಾಯಸ್ವಾಮಿ, ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ,, ಹಗರಿಬೊಮ್ಮನಹಳ್ಳಿಯ ಶಾಸಕ ಭೀಮಾನಾಯ್ಕ ಹಾಗೂ ಪುಲಕೇಶಿ ನಗರದ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಏಳು ಶಾಸಕರಿಗೂ ಕಾಂಗ್ರೆಸ್ ಸೇರಲು ಆಹ್ವಾನ ನೀಡಿದ್ದು, ಎಲ್ಲರಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಸಮಕ್ಷಮದಲ್ಲಿ ಏಳು ಮಂದಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆಂದು ಮೂಲಗಳು ತಿಳಿಸಿವೆ.
Next Story





