ಲೋಕಾಯುಕ್ತರಾಗಿ ನ್ಯಾ. ವಿಶ್ವನಾಥ್ ಶೆಟ್ಟಿ ಪ್ರಮಾಣವಚನ

ಬೆಂಗಳೂರು, ಜ.28: ರಾಜ್ಯದ ನೂತನ ಲೋಕಾಯುಕ್ತರಾಗಿ ನ್ಯಾ.ಪಿ.ವಿಶ್ವನಾಥ್ ಶೆಟ್ಟಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ರಾಜಭವನದಲ್ಲಿ ಶನಿವಾರ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ನ್ಯಾ. ಶೆಟ್ಟರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸ್ಪೀಕರ್ ಕೆ.ಬಿ. ಕೋಳಿವಾಡ, ಗೃಹ ಸಚಿವ ಡಾ.ಪರಮೇಶ್ವರ್, ಕೆ.ಜೆ. ಜಾರ್ಜ್ ಸಹಿತ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.
ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಉಡುಪಿ ಮೂಲದವರು.
Next Story





