ರಾಜಕೀಯದಿಂದ ಎಸ್‌ಎಂ ಕೃಷ್ಣ ನಿವೃತ್ತಿ

ಬೆಂಗಳೂರು, ಜ.28: ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.
ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಕೃಷ್ಣ ತಾನು ರಾಜಕಾರಣದಿಂದ ದೂರ ಸರಿಯುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸದಸ್ಯತ್ವ ನವೀಕರಣ ಮಾಡುವ ಪ್ರಶ್ನೆಯೇ ಇಲ್ಲ. ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಯಾವುದೇ ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಳ್ಳುವುದಿಲ್ಲವೆಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story





